ಬೆಳಗಾವಿ ಬೈ ಎಲೆಕ್ಷನ್‌ಗೆ ಸಿದ್ಧತೆ: ಸತೀಶ್ ಜಾರಕಿಹೊಳಿ‌ಗೆ ಜೈ ಎಂದ ಬಿಜೆಪಿ ಕಾರ್ಯಕರ್ತರು

By Suvarna NewsFirst Published Nov 29, 2020, 8:34 PM IST
Highlights

ಒಂದೆಡೆ ಸತೀಶ್ ಜಾರಕಿಹೊಳಿ ಕಟ್ಟ ಬೆಂಬಲಿಗ ಜಿ.ಪಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ಯರು ಸತೀಶ್ ಜಾರಕಿಹೊಳಿಗೆ ಜೈ ಎಂದಿದ್ದಾರೆ.

ಬೆಳಗಾವಿ, (ನ. 29): ಬಿಜೆಪಿಯ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಅದರಲ್ಲೂ ಕಾಂಗ್ರೆಸ್‌ನಿಂದ ಸತೀಶ್ ಜಾರಕಿಹೊಳಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. 

ಇದಕ್ಕೆ ಪೂರಕವೆಂಬಂತೆ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಚಟುವಟಿಕೆಗಳನ್ನ ಆರಂಭಿಸಿದ್ದಾರೆ.

ಹೌದು.... ಹೊನಗಾ ಗ್ರಾಮದ ಬಿಜೆಪಿ ಕಾರ್ಯಕರ್ತರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್‌ಗೆ ಬರಮಾಡಿಕೊಂಡರು.  

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ: ಬಿಜೆಪಿ ಸೇರುವುದಾಗಿ ಘೋಷಿಸಿದ ಕೈ ನಾಯಕ

ಈ ವೇಳೆ ಮಾತನಾಡಿದ ಕಾರ್ಯಕರ್ತರು,  ಯಮಕನಮರಡಿ ಕ್ಷೇತ್ರದಲ್ಲಿ ಶಾಸಕರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದೇವೆ. ಕಳೆದ ಒಂದು ದಶಕಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡಿದ್ದರು. ಪಕ್ಷ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ ಎಂದರು.

ಕಾರ್ಯಕರ್ತರಿಗೆ ಸ್ಥಾನಮಾನಗಳು ಸಿಗಲಿಲ್ಲ. ಹಾಗಾಗಿ ಅಭಿವೃದ್ಧಿ ಪರ ಇರುವ ಕಾಂಗ್ರೆಸ್ ಪಕ್ಷ ಸೂಕ್ತವೆನಿಸಿ, ನಾವು ಇಂದು ಶಾಸಕರ ನೇತೃತ್ವದಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದೇವೆ ಎಂದು ಹೇಳಿದರು.

click me!