ಬಿಜೆಪಿ ಸ್ಥಾಪನೆಯಾದಾಗಿನಿಂದಲೂ ರಾಷ್ಟ್ರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿದೆ. ಡಾ. ಶ್ಯಾಮಪ್ರಸಾದ ಮುಖರ್ಜಿ ಮತ್ತು ದೀನದಯಾಳ ಉಪಾಧ್ಯಾಯ ಸಂಸ್ಥಾಪಿಸಿದ ಬಿಜೆಪಿಯ ಸಂಸ್ಥಾಪನಾ ದಿನವನ್ನು ಭಾರತ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಸ್ಮರಿಸಿ, ಅವರ ಕೊಡುಗೆಗಳನ್ನು ಗೌರವಿಸುತ್ತಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಯಲ್ಲಾಪುರ (ಏ.7) : ಬಿಜೆಪಿ ಸ್ಥಾಪನೆಯಾದಾಗಿನಿಂದಲೂ ರಾಷ್ಟ್ರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿದೆ. ಡಾ. ಶ್ಯಾಮಪ್ರಸಾದ ಮುಖರ್ಜಿ ಮತ್ತು ದೀನದಯಾಳ ಉಪಾಧ್ಯಾಯ ಸಂಸ್ಥಾಪಿಸಿದ ಬಿಜೆಪಿಯ ಸಂಸ್ಥಾಪನಾ ದಿನವನ್ನು ಭಾರತ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಸ್ಮರಿಸಿ, ಅವರ ಕೊಡುಗೆಗಳನ್ನು ಗೌರವಿಸುತ್ತಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ(Shivaram Hebbar) ಹೇಳಿದರು.
ಅವರು ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಾಲಯ(BJP Office)ದಲ್ಲಿ ಭಾರತ ಮಾತೆ ಮತ್ತು ಬಿಜೆಪಿ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುತ್ತ ಬಂದಿರುವ ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ಸಮರ್ಪಿಸಿಕೊಂಡ ನಮ್ಮ ಹಿರಿಯರ ತ್ಯಾಗ ಬಲಿದಾನದಿಂದ ಕಟ್ಟಿಬೆಳೆಸಿದ ಪಕ್ಷವನ್ನು ನಾವು ಇನ್ನಷ್ಟುಬಲಿಷ್ಠಗೊಳಿಸಬೇಕಿದೆ. ಇದಕ್ಕೆ ಕಾರ್ಯಕರ್ತರೆಲ್ಲರೂ ಒಮ್ಮನಸ್ಸಿನಿಂದ ಕೈ ಜೋಡಿಸಿದರೆ ಮಾತ್ರ ಸಾಧ್ಯ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಪುನಃ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಕಾರ್ಯವನ್ನು ನಾವೆಲ್ಲರೂ ಕೂಡಿ ಮಾಡಬೇಕಾಗಿದೆ ಎಂದರು.
ಯಲ್ಲಾಪುರ: ಸಚಿವ ಶಿವರಾಮ್ ಹೆಬ್ಬಾರ್ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಬಿಜೆಪಿ ಶಿವಮೊಗ್ಗ ವಿಭಾಗದ ಸಹಪ್ರಭಾರಿ ಎನ್.ಎಸ್. ಹೆಗಡೆ ಮಾತನಾಡಿ, ಆರು ಚಿಂತನೆಗಳನ್ನು ಹೊಂದಿ ಪಕ್ಷ ಮುನ್ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದ ಕೇಂದ್ರದ ವರೆಗೂ ಸಂಸ್ಥಾಪಕರ ಸ್ಮರಣಾರ್ಥ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಬೂತ್ ಮಟ್ಟದಲ್ಲೂ ಪಕ್ಷದ ಧ್ವಜಾರೋಹಣ ನೆರವೇರಿಸಲಾಗುತ್ತಿದೆ. 1980ರಲ್ಲಿ ಜನಸಂಘ ಜನತಾಪಕ್ಷದಲ್ಲಿ ವಿಲೀನಗೊಂಡು ಬಿಜೆಪಿಯಾಗಿ ಪರಿವರ್ತನೆಗೊಂಡಿತು. ನಮ್ಮ ಪಕ್ಷ ರಾಷ್ಟ್ರೀಯತೆ, ಸರ್ವಧರ್ಮ, ಪ್ರಜಾಪ್ರಭೂತ್ವ, ಜನಸಾಮಾನ್ಯರೊಂದಿಗೆ ಸಂಪರ್ಕ ಮುಂತಾದ ತತ್ವಗಳನ್ನು ಪಕ್ಷ ಅಳವಡಿಸಿಕೊಂಡಿದೆ ಎಂದು ಹೇಳಿದರು.
ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ನಮ್ಮ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಎಲ್ಲ ಕಾರ್ಯಕರ್ತರ ಸಮನ್ವಯತೆ ಸಾಧಿಸಿ, ಮನೆ ಮನೆಗೆ ಭೇಟಿ ನೀಡಿ, ಮತದಾರರಿಗೆ ಪಕ್ಷದ ಹಾಗೂ ಸರ್ಕಾರದ ಅಭಿವೃದ್ಧಿಯ ಕುರಿತಾಗಿ ಮನವರಿಕೆ ಮಾಡುತ್ತಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್ ಮಾತನಾಡಿ, ನಮ್ಮ ಹಿರಿಯರ ತ್ಯಾಗ, ಬಲಿದಾನದಿಂದ ಪಕ್ಷ ಈ ಹಂತಕ್ಕೆ ಬೆಳೆದಿದೆ. ನಾವೆಲ್ಲರೂ ಒಂದಾಗಿ ಪಕ್ಷವನ್ನು ಇನ್ನಷ್ಟುಬಲಾಢ್ಯಗೊಳಿಸಬೇಕಿದೆ. ಪ್ರಸಕ್ತ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಅತ್ಯಧಿಕ ಮತಗಳ ಅಂತರದಿಂದ ಹೆಬ್ಬಾರ ಅವರು ವಿಜಯಿಶಾಲಿಯಾಗಲು ಕಾರ್ಯಕರ್ತರೆಲ್ಲರೂ ಶ್ರಮವಹಿಸುವ ಮೂಲಕ ಬಿಜೆಪಿ ಸರ್ಕಾರದ ರಚನೆಗೆ ಕಾರಣರಾಗುವಂತೆ ವಿನಂತಿಸಿದರು.
Karnataka election 2023: ಹೆಬ್ಬಾರ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಎಸ್ಟಿ ಸಮಾವೇಶ
ತಾಲೂಕು ಪ್ರಧಾನ ಕಾರ್ಯದರ್ಶಿ ರವಿ ಭಟ್ಟಬರಗದ್ದೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪ್ರಸಾದ ಹೆಗಡೆ ವಂದಿಸಿದರು.