ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಸಮಾವೇಶ ಫೆ.25ರಂದು ನಗರದ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ತಿಳಿಸಿದರು.
ದಾವಣಗೆರೆ (ಫೆ.25) : ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಸಮಾವೇಶ ಫೆ.25ರಂದು ನಗರದ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3ಕ್ಕೆ ಯುವ ಮೋರ್ಚಾ(BJP Yuva morcha) ರಾಜ್ಯಾಧ್ಯಕ್ಷ ಕೆ.ಸಿ.ಸಂದೀಪ್ ಪಾಟೀಲ್(KC Sandeep Patil), ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra ), ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ(BJP state president Annamalai), ಸಂಸದ ಡಾ.ಜಿ.ಎಂ.ಸಿದ್ದೇಶ್ವರ(MP Dr GM Siddeshwar), ಸಚಿವ ಅಶ್ವತ್ಥ ನಾರಾಯಣ ಭಾಗವಹಿಸುವರು ಎಂದರು. ಜಿಲ್ಲೆಯ ಹಾಲಿ-ಮಾಜಿ ಶಾಸಕರು, ಹಾಲಿ-ಮಾಚಿ ಸಚಿವರು ಪಾಲ್ಗೊಳ್ಳುವರು. ಈಗಾಗಲೇ ಜಿಲ್ಲಾದ್ಯಂತ ಪ್ರತಿ ಹಳ್ಳಿಯಲ್ಲೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜನತೆಗೆ ಆಹ್ವಾನಿಸಿದ್ದು, ಸುಮಾರು 15 ಸಾವಿರಕ್ಕೂ ಅಧಿಕ ಯುವ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.
BS Yadiyurappa: 40 ವರ್ಷಗಳ ಬಳಿಕ ವಿಧಾನಸೌಧದ ನಂಟು ಕಳಚಿದ ರಾಜಾಹುಲಿ!
ಪ್ರತಿ ತಾಲೂಕಿನಲ್ಲೂ ಸಮಾವೇಶ:
ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಒಂದೊಂದು ರೀತಿಯ ಸಮಾವೇಶವನ್ನು ಆಯೋಜಿಸಲು ಪಕ್ಷದ ಸೂಚನೆ ಇದೆ. ಹೊನ್ನಾಳಿಯಲ್ಲಿ ರೈತ ಮೋರ್ಚಾ, ಚನ್ನಗಿರಿಯಲ್ಲಿ ಮಹಿಳಾ ಮೋರ್ಚಾ ಸಮಾವೇಶ, ಮಾಯಕೊಂಡದಲ್ಲಿ ಎಸ್‌ಟಿ ಸಮಾವೇಶ, ಜಗಳೂರಿನಲ್ಲಿ ಎಸ್‌ಸಿ ಸಮಾವೇಶ, ಹರಿಹರದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಶೀಘ್ರವೇ ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ, ಉಪಾಧ್ಯಕ್ಷ ಮಂಜಾನಾಯ್ಕ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಎಲ್.ಶಿವಪ್ರಕಾಶ, ನಾಗರಾಜ, ಶಾಂತರಾಜ ಪಾಟೀಲ್, ವಿಜಯೇಂದ್ರ, ಪವನ ಮೇಟಿ, ಶ್ರೀಧರ್, ಯತೀಶ ಇತರರಿದ್ದರು.
Karnataka Election 2023: ಅಮಿತ್ ಶಾ ಭಾಷಣ 8ನೇ ಅದ್ಭುತ: ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯ
ಜನಸಂಕಲ್ಪ ಯಾತ್ರೆ ಸಮಾರೋಪದ ಮಹಾ ಸಂಕಲ್ಪ ಸಮಾರಂಭವನ್ನು ದಾವಣಗೆರೆಯಲ್ಲಿ ಮಾಚ್‌ರ್ ತಿಂಗಳಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಂದಿನ ಸಮಾರಂಭ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿದೆ. ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸ್ಥಳ ಹಾಗೂ ಸಮಯ ಇನ್ನೂ ಅಂತಿಮವಾಗಿಲ್ಲ, ಶೀಘ್ರವೇ ದಿನಾಂಕ, ಸಮಯ, ಸ್ಥಳ ನಿಗದಿಪಡಿಸಲಾಗುವುದು.
ಎಸ್.ಎಂ.ವೀರೇಶ ಹನಗವಾಡಿ, ಬಿಜೆಪಿ ಜಿಲ್ಲಾಧ್ಯಕ್ಷ