ಸಂವಿಧಾನದ ಆಶಯ ಈಡೇರಿಕೆಯೇ ಬಿಜೆಪಿ ಗುರಿ: ಸಿಎಂ ಬೊಮ್ಮಾಯಿ

Published : Nov 26, 2022, 02:40 AM IST
ಸಂವಿಧಾನದ ಆಶಯ ಈಡೇರಿಕೆಯೇ ಬಿಜೆಪಿ ಗುರಿ: ಸಿಎಂ ಬೊಮ್ಮಾಯಿ

ಸಾರಾಂಶ

ಸಂವಿಧಾನ ಬದಲಿಸಲು ಬಂದವರು ಬಿಜೆಪಿಯವರು ಎಂದು ಕಾಂಗ್ರೆಸ್‌ ಆರೋಪ ಮಾಡುತ್ತಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನವನ್ನು ಧರ್ಮ ಗ್ರಂಥವಾಗಿ ಗಟ್ಟಿಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಶಿವಮೊಗ್ಗ (ನ.26): ಸಂವಿಧಾನ ಬದಲಿಸಲು ಬಂದವರು ಬಿಜೆಪಿಯವರು ಎಂದು ಕಾಂಗ್ರೆಸ್‌ ಆರೋಪ ಮಾಡುತ್ತಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನವನ್ನು ಧರ್ಮ ಗ್ರಂಥವಾಗಿ ಗಟ್ಟಿಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಕಿಮ್ಮನೆ ರೆಸಾರ್ಟ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯ ಬಿಜೆಪಿ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಬಿಜೆಪಿಯ ಮುಖ್ಯ ಗುರಿ ಎಂದರು.

ಬಿಜೆಪಿ ಪಕ್ಷ ಎಂದಿಗೂ ಸಿದ್ಧಾಂತ, ಮೌಲ್ಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲಿಲ್ಲ. ಮೊದಲು ರಾಷ್ಟ್ರ, ನಂತರ ನಾನು ಎಂಬ ಮೌಲ್ಯಾಧಾರಿತ ರಾಜಕಾರಣ ಬಿಜೆಪಿಯಲ್ಲಿ ಬಿಟ್ಟರೆ ಬೇರೆ ಎಲ್ಲೂ ಸಿಗಲ್ಲ. ಅಂದು ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ ಕಾಂಗ್ರೆಸ್‌ನವರು ಇಂದು ಅಂಬೇಡ್ಕರ್‌ ವಿಚಾರದಲ್ಲಿ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಅಂಬೇಡ್ಕರ್‌ಗೆ ಅನ್ಯಾಯ ಮಾಡಿ ಸಂವಿಧಾನದ ಪೂರ್ಣ ಲಾಭ ಪಡೆದ ಕಾಂಗ್ರೆಸ್‌ನವರ ದಾಸ್ಯ ಮನ:ಸ್ಥಿತಿ ಜನರಿಗೆ ಅರ್ಥವಾಗಿದೆ. ಹೀಗಾಗಿ, ದೇಶದ ಹಲವು ರಾಜ್ಯದಲ್ಲಿ ಕಾಂಗ್ರೆಸ್‌ ತನ್ನ ಅಧಿಕಾರ ಕಳೆದುಕೊಂಡಿದೆ. ಕೆಲವೇ ರಾಜ್ಯದಲ್ಲಿ ಮಾತ್ರ ಉಳಿದುಕೊಂಡಿರುವ ಕಾಂಗ್ರೆಸ್‌ ಮುಂದಿನ ದಿನದಲ್ಲಿ ಅಲ್ಲೂ ತನ್ನ ಅಧಿಕಾರ ಕಳೆದುಕೊಳ್ಳುತ್ತದೆ. ಒಟ್ಟಾರೆ ದೇಶದಲ್ಲಿ ಕಾಂಗ್ರೆಸ್‌ ನಾಶವಾಗುವ ಕಾಲ ಸನಿಹದಲ್ಲಿದೆ ಎಂದು ಭವಿಷ್ಯ ನುಡಿದರು.

ಅಗರಬತ್ತಿ ಉದ್ಯಮಕ್ಕೆ ಸಕಲ ನೆರವು: ಸಿಎಂ ಬೊಮ್ಮಾಯಿ ಭರವಸೆ

ಬಿಜೆಪಿಯಲ್ಲಿ ಅತಿ ಹೆಚ್ಚು ಕಾರ್ಯಕರ್ತರ ಪಡೆ: ಬಿಜೆಪಿ ಪಕ್ಷದಲ್ಲಿ ಇರುವಷ್ಟುಕಾರ್ಯಕರ್ತರು ಬೇರೆ ಯಾವ ಪಕ್ಷಕ್ಕೂ ಇಲ್ಲ. ಭಾರತದಲ್ಲಿ ಮಾತ್ರವಲ್ಲ, ಇಡೀ ಜಗತ್ತಿನಲ್ಲೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷ ಎಂದರೆ ಅದು ಬಿಜೆಪಿ ಮಾತ್ರ. ಕೊರೋನಾದಂತಹ ಸಂಕಷ್ಟಸಂದರ್ಭವನ್ನೂ ದೇಶದಲ್ಲಿ ಸಮರ್ಥವಾಗಿ ನಿಭಾಯಿಸಿದ ಮೋದಿ ಅವರ ನಾಯಕತ್ವದನ್ನು ಇಂದು ವಿಶ್ವವೇ ಕೊಂಡಾಡುತ್ತಿದೆ. ಇತ್ತ ರಾಜ್ಯದಲ್ಲಿ ಬೆಟ್ಟದಂಥ ಸಮಸ್ಯೆ ಬಂದರೂ ಅದನ್ನು ಸುಲಭವಾಗಿ ನಿಭಾಯಿಸಬಹುದು ಎಂಬುದನ್ನು ಯಡಿಯೂರಪ್ಪ ತೋರಿಕೊಟ್ಟಿದ್ದಾರೆ. ಯಡಿಯೂರಪ್ಪ ಕಾಲದಲ್ಲಿ ಜಾರಿಯಾದ ಯೋಜನೆಗಳನ್ನು ಮುಂದುವರಿಕೊಂಡು ಬರಲಾಗುತ್ತಿದೆ. ಮೋದಿ ಸರ್ಕಾರದ ದಾರಿಯಲ್ಲಿ ರಾಜ್ಯ ಸರ್ಕಾರ ಸಾಗುತ್ತಿದೆ. ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ, ಮನೆಗೆ ಮುಟ್ಟಿಸುವ ಮೂಲಕ ಚುನಾವಣಾ ಸಮರಕ್ಕೆ ಸಜ್ಜಾಗಬೇಕು ಎಂದು ಕಾರ್ಯಕರ್ತರಿಗೆ ಸಿಎಂ ಕರೆ ನೀಡಿದರು.

ಶರಾವತಿ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಪರಿಹಾರಕ್ಕೆ ಕ್ರಮ: ಭೂಮಿ ಹಕ್ಕುಪತ್ರ ನೀಡುವ ಶರಾವತಿ ಸಂತ್ರಸ್ತರ ಸಮಸ್ಯೆ ಕುರಿತು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದರು. ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನೋಟಿಫಿಕೇಶನ್‌ ಆಗಿರುವ ಕುರಿತು ಮಾಹಿತಿ ತರಿಸಿಕೊಳ್ಳುತ್ತೇನೆ. ಡಿಸೆಂಬರ್‌ 3ನೇ ವಾರದೊಳಗೆ ವರದಿ ಕೊಡಲು ಸೂಚಿಸಿದ್ದೇನೆ. ಜಿಲ್ಲಾಧಿಕಾರಿ ವರದಿ ಕೊಟ್ಟತಕ್ಷಣ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ. ಈ ಹಿಂದಿನ ಸರ್ಕಾರ ಅನುಮತಿ ಪಡೆಯದ ಕಾರಣ ನಾವು ಈಗ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕಿದೆ. 

ಮುರುಘಾ ಮಠ ಆಡಳಿತ ಡಿಸಿ ವರದಿ ಆಧರಿಸಿ ತೀರ್ಮಾನ: ಸಿಎಂ ಬೊಮ್ಮಾಯಿ

ಈಗಾಗಲೇ ಸಂಬಂಧಿಸಿದ ಕೇಂದ್ರ ಸಚಿವರಿಗೆ ವಿಷಯ ತಿಳಿಸಲಾಗಿದೆ. ಆದಷ್ಟುಬೇಗ ಅನುಮತಿ ಪಡೆದು ಸಮಸ್ಯೆ ಪರಿಹರಿಸಲಾಗುವುದು. ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಡೀಮ್ಡ್‌ ಫಾರೆಸ್ಟ್‌ ವಿಚಾರ ಕುರಿತಂತೆ ಸರ್ಕಾರ ಒಂದು ನಿರ್ಣಯ ಕೈಗೊಂಡಿದೆ. ಡೀಮ್ಡ್‌ ಫಾರೆಸ್ಟ್‌ ಮಲೆನಾಡು ಭಾಗದಲ್ಲಿ ಹೆಚ್ಚಿದೆ. ಸುಮಾರು 6 ಲಕ್ಷ ಎಕರೆ ಡೀಮ್ಡ್‌ ಫಾರೆಸ್ಟ್‌ ಲ್ಯಾಂಡನ್ನು ಕಂದಾಯ ಇಲಾಖೆಗೆ ವಹಿಸಲಾಗಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ