ಬಿಜೆಪಿಯವರದ್ದು ತಲೆಬುಡವಿಲ್ಲದ ಕಾನೂನುಗಳು: ಡಿಕೆಶಿ ವಾಗ್ದಾಳಿ

Published : Nov 03, 2023, 12:59 PM IST
ಬಿಜೆಪಿಯವರದ್ದು ತಲೆಬುಡವಿಲ್ಲದ ಕಾನೂನುಗಳು: ಡಿಕೆಶಿ ವಾಗ್ದಾಳಿ

ಸಾರಾಂಶ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಎಲ್ಲ ಕಾಲದಲ್ಲೂ ದೇಶದ ಕಲ್ಯಾಣಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಬಿಜೆಪಿಯವರು ಸಮಾಜ ಒಡೆಯುವ ಯೋಜನೆಗಳನ್ನಷ್ಟೇ ಕೊಟ್ಟಿದ್ದು, ಜನರ ಭಾವನೆ ಕೆರಳಿಸಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಟೀಕಿಸಿದರು. 

ಬೆಂಗಳೂರು (ನ.03): ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಎಲ್ಲ ಕಾಲದಲ್ಲೂ ದೇಶದ ಕಲ್ಯಾಣಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಬಿಜೆಪಿಯವರು ಸಮಾಜ ಒಡೆಯುವ ಯೋಜನೆಗಳನ್ನಷ್ಟೇ ಕೊಟ್ಟಿದ್ದು, ಜನರ ಭಾವನೆ ಕೆರಳಿಸಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಟೀಕಿಸಿದರು. ಕೆಪಿಸಿಸಿ ಕಚೇರಿಯ ‘ಭಾರತ್ ಜೋಡೋ’ ಸಭಾಂಗಣದಲ್ಲಿ ನಡೆದ ಇಂದಿರಾ ಗಾಂಧಿ ಅವರ 39 ನೇ ವರ್ಷದ ಪುಣ್ಯಸ್ಮರಣೆ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಬದುಕಿನ ಆಧಾರದ ಮೇಲೆ ರಾಜಕೀಯ ಮಾಡಿದರೆ, ಬಿಜೆಪಿ ಭಾವನೆಗಳ ಮೇಲೆ ಮಾಡುತ್ತದೆ. ಇಂದಿರಾ ಗಾಂಧಿ ಅವರು ಜನರ ಬದುಕಿಗೆ ನೆರವಾಗುವ ಯೋಜನೆಗಳನ್ನು ನೀಡಿದ ಮಹಾನ್ ಶಕ್ತಿ. ಬ್ಯಾಂಕ್‌ಗಳನ್ನು ರಾಷ್ಟ್ರೀಕರಣ ಮಾಡಿ ಬಡವರಿಗೆ ಸಾಲ ಮತ್ತು ಹಣ ವ್ಯವಹಾರವನ್ನು ಸುಲಭ ಮಾಡಿದ್ದು ಇಂದಿರಾಗಾಂಧಿ. ಸ್ವಾತಂತ್ರ್ಯ ನಂತರ ನೆಹರು ಅವರು ತಮ್ಮ ಆಸ್ತಿಯಲ್ಲಿ ಮುಕ್ಕಾಲು ಭಾಗವನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದರು. ಆದರೆ ಬಿಜೆಪಿಯವರು ಸಮಾಜ ಒಡೆಯುವ ಯೋಜನೆಗಳನ್ನು ಕೊಟ್ಟಿದ್ದಾರೆ. ತಮ್ಮ ಸ್ವಂತ ಹಣದಿಂದ ದೇಶಕ್ಕೆ 60/40 ಅಳತೆಯ ಒಂದೇ ಒಂದು ನಿವೇಶನವನ್ನೂ ನೀಡಿಲ್ಲ ಎಂದು ಹೇಳಿದರು.

ಸಿಎಂ ಬದಲಾವಣೆ ಅನಿವಾರ್ಯವಾದರೆ ಡಿಕೆಶಿಗೆ ಬೆಂಬಲ: ಶಾಸಕ ಕೆ.ಎಂ.ಉದಯ್

ನಾವು ಸಮಾಜದ ಎಲ್ಲ ವರ್ಗದವರನ್ನು ಕೂಡಿಸಿ ಹೊಲಿಯುತ್ತೇವೆ, ಬಿಜೆಪಿಯವರು ಕತ್ತರಿಸುತ್ತಾರೆ. ಬಿಜೆಪಿಯವರದ್ದು ತಲೆಬುಡವಿಲ್ಲದ ಕಾನೂನುಗಳು, ನಾವು ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಒಕ್ಕೂಟಕ್ಕೆ ‘ಇಂಡಿಯಾʼ ಎಂದು ಹೆಸರಿಟ್ಟ ತಕ್ಷಣ ಇಂಡಿಯಾ ಎನ್ನುವ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಇಂಡಿಯನ್ ಅಡ್ಮಿನಿಸ್ಟ್ರೇಷನ್ ಸರ್ವೀಸ್ ಸೇರಿದಂತೆ ನೋಟಿನಲ್ಲಿಯೂ ಹೆಸರು ಬದಲಾಯಿಸಲು ಬಿಜೆಪಿ ಹೊರಟಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು.

ಬರ್ತಾ ಬರ್ತಾ ಬಿಗ್‌ಬಾಸ್‌ನಲ್ಲಿ ಅವಾಚ್ಯ ಶಬ್ದಗಳ ಬಳಕೆ ಹೆಚ್ಚುತ್ತಿದೆ: ಮಾಜಿ ಸ್ಪರ್ಧಿ ಕಾವ್ಯಾ ಶಾಸ್ತ್ರಿ!

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳು ಅಧಿಕಾರಕ್ಕೆ ಬಂದಂತೆ, ಎಲ್ಲರಿಗೂ ನಾವು ಅಧಿಕಾರ ನೀಡದೆ ಇರಬಹುದು. ಆದರೆ ಆರ್ಥಿಕ ಸ್ವಾತಂತ್ರ್ಯ ಮತ್ತು ಶಕ್ತಿಯನ್ನು ನೀಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳಾ ಸಬಲೀಕರಣ ಮಾಡಲು ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿದ್ದ ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆ ಮಾಡಲು ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದೆವು. ಇದರಿಂದ 1.10 ಕೋಟಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗಿದೆ. ದಸರಾದಲ್ಲಿ ಲಕ್ಷಾಂತರ ಹೆಣ್ಣುಮಕ್ಕಳು ಉಚಿತ ಬಸ್ ಯೋಜನೆ ಕಾರಣಕ್ಕೆ ಕುಟುಂಬ ಸಮೇತರಾಗಿ ಬಂದಿದ್ದರು. ಇದರಿಂದ ಹಣದ ಚಲಾವಣೆ ಹೆಚ್ಚು ನಡೆಯುತ್ತಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!