‘ಪಾಕ್‌ ಜತೆ ರಹಸ್ಯ ಸಭೆ ನಡೆಸಲು ನಿಮಗೆ ಅಧಿಕಾರ ಕೊಟ್ಟವರ್‍ಯಾರು? ಬಿಜೆಪಿಯ ರಾಮ್‌ ಮಾಧವ್‌ಗೆ ಹರಿಪ್ರಸಾದ್‌ ಪ್ರಶ್ನೆ

Kannadaprabha News   | Kannada Prabha
Published : Jul 02, 2026, 10:28 AM IST
BK Hariprasad On Ram madhav

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು, ಬಿಜೆಪಿ ಮುಖಂಡ ರಾಮ್ ಮಾಧವ್ ಅವರು ಪಾಕಿಸ್ತಾನದ ಐಎಸ್‌ಐ ಅಧಿಕಾರಿಗಳೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಯಾವುದೇ ಸಂವಿಧಾನಿ ಹುದ್ದೆಯಲ್ಲಿರದಿದ್ದರೂ ವಿದೇಶದಲ್ಲಿ ರಹಸ್ಯ ಸಭೆ ನಡೆಸಲು ಅಧಿಕಾರ ಕೊಟ್ಟವರ್ಯಾರು ಎಂದು ಕಿಡಿ.

ಬೆಂಗಳೂರು (ಜು.2): ಜಿಬಿಎ(Greater Bengaluru) ಚುನಾವಣೆಯ ಬಿಜೆಪಿ(BJP) ಚುನಾವಣಾ ಉಸ್ತುವಾರಿ ಆಗಿ ನೇಮಕವಾಗಿರುವ ರಾಮ್‌ ಮಾಧವ್‌(Ram Madhav) ಅವರು ನನ್ನ ಪ್ರಶ್ನೆಗಳಿಗೆ ಉತ್ತರಿಸಬೇಕು. ಪಾಕಿಸ್ತಾನದವರ ಜತೆ ರಹಸ್ಯ ಸಭೆ ನಡೆಸಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌(KPCC President BK Hariprasad) ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನ(Bharat Jodo bhavan)ದಲ್ಲಿ ನಡೆದ ಪ್ರಚಾರ ಸಮಿತಿ ವಿಚಾರ ಸಂಕಿರಣದಲ್ಲಿ ಮಾತನಾಡಿ, ರಾಮ್‌ ಮಾಧವ್‌ ಅವರು ಶಾಸಕರೂ ಅಲ್ಲ, ಸಂಸದರೂ ಅಲ್ಲ, ವಿದೇಶಾಂಗ ಸಚಿವರೂ ಅಲ್ಲ. ಆರ್‌ಎಸ್ಎಸ್(RSS) ಪ್ರಚಾರಕರಾಗಿ ವಿದೇಶದಲ್ಲಿ ಸಭೆ ಮಾಡಲು ಅಧಿಕಾರ ಕೊಟ್ಟಿದ್ದು ಯಾರು? ಯಾವ ಅಧಿಕಾರ ಇಟ್ಟುಕೊಂಡು ಆರ್‌ಎಸ್‌ಎಸ್‌ ಅವರು ವಿದೇಶಾಂಗ ತೀರ್ಮಾನ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ರಾಮ್‌ ಮಾಧವ್‌ ಅವರು ಕೊಲಂಬೊ, ಲಂಡನ್‌ನಲ್ಲಿ 4 ಸಭೆಗಳನ್ನು ಮಾಡಿದ್ದು, ಪಾಕಿಸ್ತಾನದ ಐಎಸ್ಐನ ಮಾಜಿ ಮೇಜರ್ ಜನರಲ್ ಜೊತೆಗೆ ಗುಪ್ತ ಸಭೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇತ್ತೀಚೆಗೆ ಅವರ ಗುರುಗಳಾದ ಮೋಹನ್ ಭಾಗವತ್(Mohan Bhagwat) ಅವರು ಪಾಕಿಸ್ತಾನದೊಂದಿಗೆ ಮಾತುಕತೆ ಮಾಡುವುದರಲ್ಲಿ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಪಾಕ್‌ ಜತೆಗೆ ಸಭೆ ಮಾಹಿತಿ ನೀಡಿಲ್ಲ:

ಪಾಕಿಸ್ತಾನದವರೊಂದಿಗಿನ ಗುಪ್ತ ಸಭೆ ಬಗ್ಗೆ ದೇಶದ ಜನರಿಗೆ ಯಾಕೆ ಮಾಹಿತಿ ನೀಡಿಲ್ಲ? ಆಪರೇಷನ್ ಸಿಂಧೂರ್‌(Operation Sindoor)ನಲ್ಲಿ ಹುತಾತ್ಮರಾದ ಭಾರತೀಯ ಸೈನಿಕರ ಹೆಸರುಗಳನ್ನು ಇಷ್ಟು ದಿನ ಮುಚ್ಚಿಟ್ಟಿದ್ದು ಯಾಕೆ? ಇಂತಹ ಪ್ರಶ್ನೆಗಳನ್ನು ನಾವು ಕೇಳಬೇಕು ಎಂದು ಹರಿಪ್ರಸಾದ್‌ ಕರೆ ನೀಡಿದರು.

ಆಪರೇಷನ್ ಸಿಂಧೂರ್‌ನಲ್ಲಿ ನಮ್ಮ ಯಾವುದೇ ಯೋಧರು ಸತ್ತಿಲ್ಲ ಎಂದು ಹೇಳಿದ್ದರು. ಆದರೆ ಮೊನ್ನೆ ರಾಜನಾಥ್ ಸಿಂಗ್ ಅವರು 6 ಸೈನಿಕರು ಸತ್ತಿದ್ದಾರೆ ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇವರು ಎಷ್ಟು ಸುಳ್ಳು ಹೇಳುತ್ತಾರೆ ಎಂಬುದು ಇದರಲ್ಲೇ ಅರ್ಥವಾಗುತ್ತದೆ. ದೇಶಕ್ಕೆ ಪ್ರಾಣಕೊಟ್ಟವರ ಹೆಸರು ಹೇಳಲು ಇವರಿಗೆ ಸಾಧ್ಯವಾಗುವುದಿಲ್ಲ.

ಆಪರೇಷನ್ ಸಿಂಧೂರ್ ಆಗಿ 2 ತಿಂಗಳಾಗಿದ್ದು, ಆಗಲೇ ರಾಮ್ ಮಾಧವ್ ಅವರು ಲಂಡನ್ ನಲ್ಲಿ ಸಭೆ ಮಾಡಿದ್ದಾರೆ. ನಮ್ಮ ಸರ್ಕಾರ ಕೇಂದ್ರದಲ್ಲಿದ್ದಾಗ ಭಯೋತ್ಪಾದನೆ ನಿಗ್ರಹವಾಗುವವರೆಗೂ ಪಾಕಿಸ್ತಾನದೊಂದಿಗೆ ಮಾತುಕತೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ಬಿಜೆಪಿಯವರು ಚುನಾವಣೆ ಬಂದಾಗ, ಪಾಕಿಸ್ತಾನ, ಚಿಕನ್, ಮಟನ್, ಹಲಾಲ್, ಹಿಜಾಬ್, ಮಂಗಳಸೂತ್ರದ ಬಗ್ಗೆ ಮಾತನಾಡುತ್ತಾರೆ. ಬಳಿಕ ಪಾಕಿಸ್ತಾನದ ಜತೆ ಗೌಪ್ಯ ಮಾತುಕತೆ ನಡೆಸುತ್ತಾರೆ ಎಂದು ಹರಿಪ್ರಸಾದ್ ಕಿಡಿಕಾರಿದರು.

  • - ರಾಮ್‌ ಮಾಧವ್‌ ಅವರು ಜನಪ್ರತಿನಿಧಿಯೇ ಅಲ್ಲ
  • - ಆದರೂ ಆರೆಸ್ಸೆಸ್‌ ಪ್ರಚಾರಕರಾಗಿ ವಿದೇಶದಲ್ಲಿ ಸಭೆ
  • - ಯಾವ ಅಧಿಕಾರದಲ್ಲಿ ಸಭೆ ಮಾಡಿದ್ದಾರೆ?: ಆಕ್ರೋಶ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Bidadi Township row: ಬಿಡದಿ ಟೌನ್‌ಶಿಪ್‌ಗೂ ಎಚ್‌ಡಿಕೆಗೂ ಸಂಬಂಧ ಇಲ್ಲ, ಚರ್ಚೆ ಬೇಕಿಲ್ಲ - ಸಿಎಂ ಡಿಕೆಶಿ
ನಿಮ್ಮ ಹೆಂಡ್ತಿಯನ್ನು ತೋರಿಸಿ: ಮಾಜಿ ಸಿಎಂ ಪತ್ನಿಯ ಟ್ಯಾಟೂ ಎದೆ ಮೇಲೆ ಹಾಕಿ ಯುವಕನ ಹೈಡ್ರಾಮಾ