ಕರ್ನಾಟಕ ಕಾಂಗ್ರೆಸ್‌ಗೆ ಹೊಸ ಬಿಗ್ ಬಾಸ್: ಜೂನ್ 21ರಂದು ಬಿಕೆ ಹರಿಪ್ರಸಾದ್ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ!

Kannadaprabha News   | Kannada Prabha
Published : Jun 10, 2026, 11:12 AM IST
BK Hariprasad on 5 state assembly election results 2026

ಸಾರಾಂಶ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್‌ ಅವರು ಜೂ.21 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್‌ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೇಮಕಗೊಂಡಿದ್ದು, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಮಾಡಲಿದ್ದಾರೆ.

-ಅರಮನೆ ಮೈದಾನದಲ್ಲಿ ನಡೆಯಲಿರುವ ಸಭೆ

  • -ಸಿಎಂ ಡಿಕೆಶಿ ರಾಜೀನಾಮೆಯಿಂದ ಸ್ಥಾನ ಖಾಲಿ

ಬೆಂಗಳೂರು (ಜೂ.10): ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ(KPCC) ನೂತನ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್‌(BK Hariprasad) ಅವರು ಜೂ.21 ರಂದು ಅರಮನೆ ಮೈದಾನ(Palace ground)ದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಧಿಕೃತ ಕೆಪಿಸಿಸಿ ಸಾರಥ್ಯ ವಹಿಸಿಕೊಳ್ಳಲಿದ್ದಾರೆ.

ಎಐಸಿಸಿ ವರಿಷ್ಠರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಯಕರ ಸಮ್ಮುಖದಲ್ಲಿ ನೂತನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್‌ ಅವರು ಪದಗ್ರಹಣ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತೆರವಾದ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್‌ ಅವರನ್ನು ನೇಮಿಸಿ ಎಐಸಿಸಿ ಕಳೆದ ವಾರ ಆದೇಶ ಮಾಡಿತ್ತು. ಜೂ.18 ರಂದು ನಡೆಯಲಿರುವ ವಿಧಾನಪರಿಷತ್‌ ಚುನಾವಣೆ ಅಭ್ಯರ್ಥಿಯೂ ಆಗಿರುವ ಬಿ.ಕೆ.ಹರಿಪ್ರಸಾದ್‌ ಅವರು, ಮತ್ತೊಮ್ಮೆ ಪರಿಷತ್‌ ಸದಸ್ಯರಾಗಿ ನೇಮಕ ಆಗಲಿದ್ದಾರೆ.

ಬಳಿಕ ಜೂ.21 ರಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕೃತವಾಗಿ ಸಾರಥ್ಯ ವಹಿಸಲಿದ್ದಾರೆ. ಇದರಲ್ಲಿ ಶಾಸಕರು, ಸಚಿವರು, ಕೆಪಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

PM Modi's 12 years: ಮೋದಿ ಸಾಧನೆ ಅದೃಷ್ಟವಲ್ಲ: ಭಾರತವನ್ನ ಮರು ನಿರ್ಮಾಣ ಮಾಡಿದ 12 ವರ್ಷಗಳು
ಪ್ರಲ್ಹಾದ್ ಜೋಶಿ ಅಂಕಣ | ನೆಹರು ದಾಖಲೆ ನೇಪಥ್ಯಕ್ಕೆ ಸರಿಸಿದ ಮೋದಿ