ಕಾಂಗ್ರೆಸ್ಸಿಗರ ಜಂಘಾಬಲವೇ ಉಡುಗಿ ಹೋಗಿದೆ- ಬಿಎಸ್‌ವೈ

Published : Nov 09, 2022, 11:46 AM ISTUpdated : Nov 09, 2022, 11:48 AM IST
ಕಾಂಗ್ರೆಸ್ಸಿಗರ ಜಂಘಾಬಲವೇ ಉಡುಗಿ ಹೋಗಿದೆ- ಬಿಎಸ್‌ವೈ

ಸಾರಾಂಶ

ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಅದರಲ್ಲಿ ಯಾರೂ ಇರಲು ಇಷ್ಟಪಡುವುದಿಲ್ಲ. ಜನ ಸಂಕಲ್ಪ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ನೋಡಿ ಕಾಂಗ್ರೆಸ್ಸಿಗರ ಜಂಘಾಬಲವೇ ಉಡುಗಿ ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದರು.

ಹಾವೇರಿ (ನ.9) : ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಅದರಲ್ಲಿ ಯಾರೂ ಇರಲು ಇಷ್ಟಪಡುವುದಿಲ್ಲ. ಜನ ಸಂಕಲ್ಪ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ನೋಡಿ ಕಾಂಗ್ರೆಸ್ಸಿಗರ ಜಂಘಾಬಲವೇ ಉಡುಗಿ ಹೋಗಿದೆ. ಮುಂಬರುವ ಚುನಾವಣೆಯಲ್ಲಿ ನಾವು 150 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಬಿಜೆಪಿ ಕಿತ್ತೊಗೆಯಲು ಜನರ ಸಂಕಲ್ಪ: ಸಿದ್ದರಾಮಯ್ಯ

ಬ್ಯಾಡಗಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮೋದಿ ಅವರ ನಾಯಕತ್ವವನ್ನು ಇಡೀ ಜಗತ್ತೆ ಕೊಂಡಾಡುತ್ತಿದೆ. ರಾಜ್ಯದಲ್ಲಿ ರಾಹುಲ್‌ ಗಾಂಧಿ ಭಾರತ್‌ ಜೋಡೊ ಪಾದಯಾತ್ರೆ ಮಾಡಿದ್ದರೂ ಯಾವುದೇ ಪರಿಣಾಮ ಬೀರಿಲ್ಲ. ಕಾಂಗ್ರೆಸ್‌ ಕಳೆದ ಚುನಾವಣೆಗಿಂತಲೂ ಕಡಿಮೆ ಸ್ಥಾನ ಪಡೆಯಲಿದೆ. ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ, ಕೊಳ್ಳೇಗಾಲ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದರು.

ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರಿಗೆ ದೊಡ್ಡ ಪ್ರಮಾಣದ ಹಣ ರೈತರಿಗೆ ಸಿಕ್ಕಿದೆ. ಪ್ರತಿ ಹಳ್ಳಿಯ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಕಾರ್ಯಕ್ರಮ ನಡೆಯುತ್ತಿದೆ. ರೈತರು, ನೇಕಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ 8000 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.

ಇಡೀ ದೇಶದಲ್ಲಿ ನಾನು ಜಾರಿಗೊಳಿಸಿದ ಭಾಗ್ಯಲಕ್ಷ್ಮಿ ಬಾಂಡ್‌ ಯೋಜನೆಯಡಿ ರಾಜ್ಯದ 20 ಲಕ್ಷಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಇದರ ಲಾಭ ದೊರೆತಿದೆ. 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯನವರು ಜನತೆ ನೆನಪಿಟ್ಟುಕೊಳ್ಳುವಂತಹ ಯಾವುದಾದರೂ ಯೋಜನೆ ಜಾರಿಗೊಳಿಸಿದ್ದರೆ ಹೇಳಲಿ ಎಂದು ಸವಾಲು ಹಾಕಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಜನ ತೀರ್ಮಾನ ಮಾಡಿದ್ದಾರೆ ಎಂದರು. ಸಾಮಾಜಿಕ 'ಅನ್ಯಾಯ', ಅಲ್ಪಸಂಖ್ಯಾತರಿಗೆ ಮೋಸ: ಜನಸಂಕಲ್ಪ ಸಮಾವೇಶದಲ್ಲಿ ಸಿದ್ದುಗೆ ಸಿಎಂ ಗುದ್ದು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ