ಲೋಕಸಭೆ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್ ಇನ್ನು ಅಣಿಯಾಗುತ್ತಿರುವಾಗಲೇ ಬಿಜೆಪಿ ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಮೊದಲ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ.
ಚಿಕ್ಕಬಳ್ಳಾಪುರ, [25]: 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಚುನಾವಣಾ ಕಣಗಳೂ ರಂಗೇರುತ್ತಿದೆ.ಇದರ ನಡುವೆ ಬರ ಪ್ರವಾಸದಲ್ಲಿ ಮಾಡುತ್ತಿರುವ ಬಿಜೆಪಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿ ಕೈತೊಳಿದುಕೊಂಡಿದೆ.
ಚಿಕ್ಕಬಳ್ಳಾಪುರಕ್ಕೆ ಮಾಜಿ ಸಚಿವ ಬಿ.ಎನ್ ಬಚ್ಚೇಗೌಡರೇ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಇಂದು ಹೊಸಕೋಟೆಯಲ್ಲಿ ಘೋಷಣೆ ಮಾಡಿದ್ದಾರೆ.
ಸಿ ವೋಟರ್ ಮೂಡ್ ಆಫ್ ದಿ ನೇಶನ್ : ಯಾರಿಗೆ ಎಷ್ಟು..?
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಬಿಎಸ್ವೈ, ಹೊಸಕೋಟೆಯಲ್ಲಿ ಕಾರ್ಯಕರ್ತರೊಂದಿಗೆ ಸಭೆಯಲ್ಲಿ ಬಿ.ಎನ್ ಬಚ್ಚೇಗೌಡ ಹೆಸರನ್ನು ಅಂತಿಮಗೊಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ನೂರಕ್ಕೆ ನೂರರಷ್ಟು ಗೆಲುವು ನಮ್ಮದೆ. ಬಚ್ಚೇಗೌಡರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಸಭೆಯಲ್ಲಿ ಯಡಿಯೂರಪ್ಪ ಸೂಚಿಸಿದರು.
ಕಳೆದ ಬಾರಿ ಕೆಲವರ ಕುತಂತ್ರದಿಂದ ಚಿಕ್ಕಬಳ್ಳಾಪುರದಲ್ಲಿ ಸೋಲುವಂತಾಯಿತು. ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.