
ಬೆಂಗಳೂರು[ಫೆ.28]: ಒಂದೆಡೆ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿಗೆ ಪ್ರತೀಕರವೆಂಬಂತೆ, ಭಾರತೀಯ ವಾಯುಸೇನೆಯು LOC ದಾಟಿ ಉಗ್ರರ ನೆಲೆಯನ್ನು ಧ್ವಂಸಗೊಳಿಸಿದೆ. ಯೊಧರ ಈ ಸಾಹಸಕ್ಕೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಮತ್ತೊಂದೆಡೆ ರಾಜಕೀಯ ಮುಖಂಡರು ಇದನ್ನು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಪಯೋಗಿಸುತ್ತಿದ್ದಾರೆ. ನಿನ್ನೆ ಫೆ.28ರಂದು ಬಿ. ಎಸ್. ಯಡಿಯೂರಪ್ಪ ನೀಡಿದ್ದ ಹೇಳಿಕೆ ಇದಕ್ಕೆ ಅತ್ಯುತ್ತಮ ಉದಾಹರಣೆ ಎನ್ನಬಹುದು. ಆದರೀಗ ಬಿಎಸ್ ವೈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಕಮಲ ಪಾಳಯದ ನಯಕರೂ ಅವರ ಈ ಹೇಳಿಕೆಗೆ ಛೀಮಾರಿ ಹಾಕಿದ್ದಾರೆ.
’ಸರ್ಜಿಕಲ್ ಸ್ಟ್ರೈಕ್: ರಾಜ್ಯದಲ್ಲಿ 22 ಲೋಕಸಭಾ ಸೀಟು ಖಚಿತ’
ಬಿಎಸ್ ವೈ ಹೇಳಿದ್ದೇನು?
ಪುಲ್ವಾಮಾ ದಾಳಿಗೆ ಪ್ರತೀಕಾರವೆಂಬಂತೆ ನಮ್ಮ ಸೇನೆ ಉಗ್ರ ಶಿಬಿರಗಳ ಮೇಲೆ ದಾಳಿ ಮಾಡಿದ ಬಳಿಕ ಇದೀಗ ದೇಶದಲ್ಲಿ ನರೇಂದ್ರ ಮೋದಿ ಅವರ ಅಲೆ ಎದ್ದಿದೆ. ಇದು0 ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ 22 ಸೀಟು ಗೆಲ್ಲಲು ಇದು ನೆರವಾಗಲಿದೆ ಎಂದಿದ್ದರು. ಯಡಿಯೂರಪ್ಪ ಈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ವಿ. ಕೆ ಸಿಂಗ್ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರು ಹೀಗೂ ಮತ ಸೆಳೆಯಲು ಯತ್ನಿಸುತ್ತಾರೆಂಬುವುದು ನಿಜಕ್ಕೂ ಅಸಹ್ಯ ಹಾಗೂ ಆಘಾತಕಾರಿ ವಿಚಾರವಾಗಿದೆ. ದೇಶಪ್ರೇಮಿಯೊಬ್ಬರು ಸೈನಿಕರ ಸಾವಿನಲ್ಲೂ ಇಂತಹ ಹೇಳಿಕೆ ನೀಡುವುದಿಲ್ಲ. ಕೇವಲ ದೇಶದ್ರೋಹಿಗಳಷ್ಟೇ ಹೀಗೆ ಹೇಳಲು ಸಾಧ್ಯ ಎಂದಿದ್ದಾರೆ.
ಅತ್ತ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ವಿ. ಕೆ ಸಿಂಗ್ ಕೂಡಾ ಬಿ. ಎಸ್ ಯಡಿಯೂರಪ್ಪನವರ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ’ಯಡಿಯೂರಪ್ಪನವರೇ ಭಿನ್ನವಾಗಿರಿ. ನಾವೆಲ್ಲರೂ ಒಂದಾಗಿದ್ದೇವೆ. ನಮ್ಮ ಸರ್ಕಾರ ತೆಗೆದುಕೊಂಡ ಕ್ರಮ ದೇಶದ ಹಾಗೂ ಇಲ್ಲಿನ ನಾಗರಿಕರ ರಕ್ಷಣೆಗಾಗಿ ಮಾತ್ರ. ಚುನಾವಣೆಯಲ್ಲಿ ಹೆಚ್ಚುವರಿ ಸ್ಥಾನ ಗಳಿಸುವ ಉದ್ದೆಶದಿಂದ ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.