MLC Election: ವಿಧಾನಪರಿಷತ್ ಚುನಾವಣೆ ಸಂಬಂಧ ಬಿಎಸ್‌ವೈ ಫೋನ್, ಎಚ್‌ಡಿಕೆ ಹೊಸ ಬಾಂಬ್

By Suvarna NewsFirst Published Nov 26, 2021, 11:17 PM IST
Highlights

* ರಂಗೇರಿದ ವಿಧಾನಪರಿಷತ್ ಚುನಾವಣೆ
* ಕುಮಾರಸ್ವಾಮಿಗೆ ಯಡಿಯೂರಪ್ಪ ಫೋನ್
* ಜೆಡಿಎಸ್‌-ಬಿಜೆಪಿ ಮಧ್ಯೆ ಮೈತ್ರಿ ಖಚಿತವಾಯ್ತಾ?

ಚಿಕ್ಕಬಳ್ಳಾಪುರ, (ನ.26): ವಿಧಾನಪರಿಷತ್ ಚುನಾವಣೆಯಲ್ಲಿ (Karnataka Council Election) ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಒಪ್ಪಂದವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ಇದಕ್ಕೆ ಪೂರಕವೆಂಬಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಸುಳಿವು ಕೊಟ್ಟಿದ್ದಾರೆ. ಇದೀಗ ಎಚ್‌ಡಿ ಕುಮಾರಸ್ವಾಮಿ(HD Kumaraswamy) ಈ ಬಗ್ಗೆ ಪ್ರತಿಕ್ರಿಯಿಸಿದ್ದು, ವಿಧಾನಪರಿಷತ್ ಚುನಾವಣೆ (MLC Elections) ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಫೋನ್ ಮಾಡಿ ಬೆಂಬಲ ಕೇಳಿದ್ದಾರೆ  ಹೊಸ ಬಾಂಬ್ ಸಿಡಿಸಿದ್ದಾರೆ.

Karnataka Council Election : ಮೈಸೂರಲ್ಲಿ ಕೈ ವಲಸಿಗ ಅಭ್ಯರ್ಥಿಗೆ ಟಿಕೆಟ್ ಕೊಟ್ಟು ಜೆಡಿಎಸ್‌ ತಂತ್ರ

ಚಿಕ್ಕಬಳ್ಳಾಪುರ ಪತ್ರಕರ್ತರ ಭವನದಲ್ಲಿ ಇಂದು (ನ.26) ವಿಧಾನಪರಿಷತ್ ಚುನಾವಣೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪ ಸಾರ್ವಜನಿಕವಾಗಿ ಅನೇಕ ಕಡೆ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಬೆಂಬಲ ಕೋರಿರೋದು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ನನ್ನ ಬಳಿ ಫೋನ್‍ನಲ್ಲಿ ಮಾತಾಡಿದ್ದಾರೆ. ಗೌರವಯುತವಾಗಿ ನಡೆದುಕೊಂಡಿದ್ದಾರೆ. ಯಡಿಯೂರಪ್ಪ ನವರು ತಮ್ಮ ರಾಜಕೀಯ ಏರಿಳಿತದ ಬೆಳವಣಿಗೆಗಳ ನಡುವೆ ಮನವಿ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು. 

ನಾಳೆಯಿಂದ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲಿದ್ದು ಮುಂದಿನ ವಿಧಾನಸಭೆ ಚುನಾವಣೆ ಗುರಿಯಾಗಿರಿಸಿಕೊಂಡು 123 ಸ್ಥಾನಗಳ ನಮ್ಮ ಗುರಿಯನ್ನು ರೀಚ್ ಆಗುವ ನಿಟ್ಟಿನಲ್ಲಿ ನಮ್ಮ ಪಕ್ಷದ ಮುಖಂಡರ ಜೊತೆ ಅವರ ಮಾಹಿತಿ ಸಲಹೆ ಪಡೆದು ಬೆಂಬಲ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇನೆ/ ಸಿಎಂ ಬಸವರಾಜ ಬೊಮ್ಮಾಯಿಯವರು ನನ್ನ ಜೊತೆ ಚರ್ಚೆ ಮಾಡಿಲ್ಲ ಎಂದರು. 

ವಿಧಾನಪರಿಷತ್ ಚುನಾವಣೆ ಸಂಬಂಧ ಸುದೀರ್ಘವಾಗಿ ಮಾತನಾಡಿದ ಎಚ್‍ಡಿಕೆ, ಕಳೆದ ಚುನಾವಣೆಯಲ್ಲಿ 4 ಮಂದಿ ಜೆಡಿಎಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಈ ಬಾರಿ 06 ಕ್ಷೇತ್ರದ ಅಭ್ಯರ್ಥಿಗಳಿಗೆ ಸೀಮಿತ ಮಾಡಿದ್ದೇವೆ. ಆದರೆ ಇದಕ್ಕೆ ಒಂದು ಪಕ್ಷ ನಮ್ಮ ಮೇಲೆ ನಿರಂತರ ದಾಳಿ ಮಾಡುತ್ತಿದೆ. ಅವರಿಗೆ ಮಾತಾಡಲು ಬೇರೆ ಏನೂ ಇಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅಂತ ಆರೋಪಿಸುತ್ತಿದ್ದಾರೆ. ಅಭ್ಯರ್ಥಿ ಹಾಕಿದ್ರೆ ಒಂದು ಮಾತು ಹಾಕದಿದ್ರೇ ಮತ್ತೊಂದು ರೀತಿ ಟೀಕೆ ಮಾಡುತ್ತಾರೆ. ನಮ್ಮಿಂದಲೇ ಬೆಳೆದ ಕೆಲ ನಾಯಕರು ಈ ರೀತಿ ಟೀಕೆ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಜಮೀರ್ ಅಹಮ್ಮದ್ ಖಾನ್ ಆ ಮುಸಲ್ಮಾನ ಯಾವ ಪಕ್ಷದಿಂದ ಮೇಲೆ ಬಂದ ಅಂತ ತಿಳಿಯದೆ ಸೌಜನ್ಯ ಇಲ್ಲದೆ ಮಾತನಾಡುತ್ತಿದ್ದಾನೆ. 25 ಕ್ಷೇತ್ರಗಳ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಿರುವ ಎಲ್ಲಾ ಕಡೆ ತ್ರಿಕೋನ ಸ್ಪರ್ಧೆ ಇದೆ. ನಾವು ಒಳ ಒಪ್ಪಂದ ಮಾಡಿಕೊಂಡಿದ್ದರೆ. ಬಿಜೆಪಿಯವರು ಅಭ್ಯರ್ಥಿ ಹಾಕಬಾರದಿತ್ತಲ್ಲಾ..? ಕೋಲಾರ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸದಸ್ಯರು ಎಷ್ಟಿದ್ದಾರೆ..? ಬೆಂಗಳೂರು ಗ್ರಾಮಾಂತರ ದಲ್ಲಿ ಎಷ್ಟಿದ್ದಾರೆ..? ಬಿಜೆಪಿ ಯಾಕೆ ಅಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ? ಒಳ ಒಪ್ಪಂದವೇ ಆಗಿದ್ದರೆ ನಮ್ಮ ಬಗ್ಗೆ ಬಿಜೆಪಿಯವರ ಮೃದು ಧೋರಣೆ ಇರಬೇಕಲ್ವಾ.? ಯಾಕೆ ಇಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿರುವುದು ಎಂದು ಪ್ರಶ್ನಿಸಿದರು. 

ಚುನಾವಣಾ ಕಣ ರಂಗೇರುತ್ತಿರುವಾಗಲೇ ಕೊಡಗು (Kodagu) ಜೆಡಿಎಸ್ ಅಭ್ಯರ್ಥಿ (JDS Candidate) ನಾಮಪತ್ರ ವಾಪಸ್ ಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

ಕೊಡಗು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ (Kodagu MLC) ಜೆಡಿಎಸ್‌ನಿಂದ ಅಖಾಡಕ್ಕಿಳಿಸಿದ್ದ ಇಸಾಕ್ ಖಾನ್(Ishaq Khan ) ನಾಮಪತ್ರ ವಾಪಸ್ ಪಡೆಯುವ ಮೂಲಕ ಚುನಾವಣೆ ಕಣದಿಂದ ಹಿಂದೆ ಸರಿಸಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆ ನೇರ ಹಣಾಹಣಿಗೆ ವೇದಿಕೆ ಸಜ್ಜಾಗಿದೆ.

click me!