MLC Election ಬಿಜೆಪಿ ಈಗಾಗಲೇ ಗೆದ್ದಾಗಿದೆ-ಅಂತರ ತಿಳಿಯಲಷ್ಟೆ ಚುನಾವಣೆ : ಬಿಎಸ್‌ವೈ

Kannadaprabha News   | Asianet News
Published : Nov 20, 2021, 07:15 AM ISTUpdated : Nov 20, 2021, 09:44 AM IST
MLC Election ಬಿಜೆಪಿ ಈಗಾಗಲೇ ಗೆದ್ದಾಗಿದೆ-ಅಂತರ ತಿಳಿಯಲಷ್ಟೆ ಚುನಾವಣೆ : ಬಿಎಸ್‌ವೈ

ಸಾರಾಂಶ

ವಿಧಾನ ಪರಿಷತ್‌ ಚುನಾವಣೆಯಲ್ಲಿ ಈಗಾಗಲೇ ನಾವು ಗೆದ್ದಾಗಿದೆ ಈಗ ಬರೀ ಗೆಲುವಿನ ಅಂತರ ತಿಳಿದುಕೊಳ್ಳಲು ಚುನಾವಣೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ

 ಹುಬ್ಬಳ್ಳಿ/ಗದಗ (ನ.20): ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Election) ಈಗಾಗಲೇ ನಾವು ಗೆದ್ದಾಗಿದೆ. ಈಗ ಬರೀ ಗೆಲುವಿನ ಅಂತರ ತಿಳಿದುಕೊಳ್ಳಲು ಚುನಾವಣೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಹೇಳಿದರು. ಜತೆಗೆ, ಪರಿಷತ್‌ ಚುನಾವಣೆ ಬಳಿಕ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವೆ. ಈ ಮೂಲಕ ಪಕ್ಷವನ್ನು ಮತ್ತಷ್ಟು ಬಲ ಪಡಿಸಲಾಗುವುದು ಎಂದು ತಿಳಿಸಿದರು.

ಹುಬ್ಬಳ್ಳಿ (Hubli) ಹಾಗೂ ಗದಗದಲ್ಲಿ (gadag) ವಿಧಾನ ಪರಿಷತ್‌ ಚುನಾವಣೆ ಪ್ರಚಾರಾರ್ಥ ಶುಕ್ರವಾರ ನಡೆದ ಜನ ಸ್ವರಾಜ್‌ ಸಮಾವೇಶ (Jan swaraj samavesh) ಉದ್ಘಾಟಿಸಿ ಮಾತನಾಡಿ, ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ (BJP) 18ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ. ಈ ಬಾರಿ ಪರಿಷತ್‌ ಚುನಾವಣೆಯಲ್ಲಿ ನಾವು ಬಹುಮತ ಪಡೆಯುವುದು ಪಕ್ಕಾ ಎಂದರು.

ಇದೇ ವೇಳೆ, ಪರಿಷತ್‌ ಚುನಾವಣೆ ಬಳಿಕ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಜನಪರ ಯೋಜನೆಗಳೊಂದಿಗೆ ಬಿಜೆಪಿ ಜನರ ವಿಶ್ವಾಸ ಗಳಿಸಿದೆ. ಪ್ರತಿ ಜಿಲ್ಲೆಗೆ ತೆರಳಿ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪಕ್ಷದ ಕಾರ್ಯಕರ್ತರು (workers) ಮತ್ತು ಮುಖಂಡರನ್ನು (Leaders) ಹುರಿದುಂಬಿಸಲಾಗುವುದು. ಈ ಮೂಲಕ ಪಕ್ಷವನ್ನು ಮತ್ತಷ್ಟು ಬಲಿಷ್ಠ ಗೊಳಿಸಲಾಗುವುದು ಎಂದರು.

ಹಣ (Money), ಹೆಂಡ, ತೋಳ್ಬಲ ಹಾಗೂ ಜಾತಿ ವಿಷ ಬೀಜ ಬಿತ್ತಿದ ಕಾಂಗ್ರೆಸ್‌ (Congress) ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಹೀಗಾಗಿ ಆ ಹಡಗನ್ನು ಹತ್ತಲು ಯಾರೂ ಬಯಸಲ್ಲ ಎಂದರು.

ದಲಿತರು (Dalit) ಹೊಟ್ಟೆ ಪಾಡಿಗಾಗಿ ಬಿಜೆಪಿಗೆ (BJP) ಹೋಗುತ್ತಾರೆ ಎಂದು ಪ್ರತಿಪಕ್ಷ ನಾಯಕರೊಬ್ಬರು ಹೇಳಿದ್ದಾರೆ. ಈ ಮೂಲಕ ಆ ಸಮುದಾಯದವರಿಗೆ ಅವಮಾನ ಮಾಡಿದ್ದಾರೆ. ಈ ಹಿಂದೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಮಾಡಿದ ಅನ್ಯಾಯವೇ ಸಾಕಷ್ಟಿದೆ. ಅವರ ಅಂತ್ಯಸಂಸ್ಕಾರಕ್ಕೂ ಜಾಗ ನೀಡದ ಕಾಂಗ್ರೆಸ್ಸಿಗರು ಈಗ ದಲಿತರ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಕಾಂಗ್ರೆಸ್‌ ನಾಯಕರೇನಾದರೂ ನಿಮ್ಮ ಊರಿಗೆ ಬಂದರೆ ಅವರಿಗೆ ಹೇಳಿ, ದಲಿತರು ಹೊಟ್ಟೆಪಾಡಿಗಾಗಿ ಅಲ್ಲ, ದೇಶದ ಮತ್ತು ದಲಿತರ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಬೊಮ್ಮಾಯಿ ಅವಧಿ ಪೂರೈಸುತ್ತಾರೆ : 

ಬಿಟ್‌ ಕಾಯಿನ್‌  ಪ್ರಕರಣಕ್ಕೆ (Bitcoin Scam) ಸಂಬಂಧಿಸಿ ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (Former CM BS Yediyurappa)) ತಿಳಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯಡಿಯೂರಪ್ಪ, ಅವರು ಅಧಿಕಾರ ಪೂರ್ಣಗೊಳಿಸುತ್ತಾರೆ ಎಂದೂ ಸ್ಪಷ್ಟಪಡಿಸಿದ್ದಾರೆ.

ನಗರದ ಸ್ನೇಹ ಸಂಗಮ ಬ್ಯಾಂಕ್‌ ಉದ್ಘಾಟನಾ ಸಮಾರಂಭದ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಮುಖ್ಯಮಂತ್ರಿಗಳು ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಆದೇಶಿಸಿದ್ದಾರೆ. ಈ ಪ್ರಕರಣ ಪ್ರಧಾನಿ ಮೋದಿ ಗಮನಕ್ಕೂ ಬಂದಿದ್ದು, ಖಂಡಿತ ಇದು ಪ್ರಮುಖವಾದ ವಿಚಾರ. ಯಾರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೋ ಅವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಅವಧಿ ಪೂರ್ಣಗೊಳಿಸುತ್ತಾರೆ: ಮುಖ್ಯಮಂತ್ರಿ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಖ್ಯ ಮಂತ್ರಿಯಾಗಿ ಅವರು ಅವಧಿ ಪೂರ್ಣಗೊಳಿಸುತ್ತಾರೆ. ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಯಡಿಯೂರಪ್ಪ (BSY) ಸ್ಪಷ್ಟಪಡಿಸಿದರು. ಜತೆಗೆ, ಬಿಜೆಪಿ ಅಧ್ಯಕ್ಷರ (BJP President) ಬದಲಾವಣೆಯ ಯಾವುದೇ ಪ್ರಸ್ತಾಪ ಇಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಎಂಎಸ್ಪಿ ಅಡಿಯಲ್ಲಿ ತೊಗರಿ ಖರೀದಿ ಆರಂಭಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್