'ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತ'

Published : Nov 25, 2020, 05:43 PM IST
'ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತ'

ಸಾರಾಂಶ

ಸಿಎಂ ಹುದ್ದೆಯಿಂದ ಬಿಎಸ್ ಯಡಿಯೂರಪ್ಪನವರನ್ನ ಕೆಳಗಿಳಿಸುವ ಬಗ್ಗೆ ಕೂಗುಗಳು ಕೇಳಿ ಬರುತ್ತಿರುವೆ. ಇದರ ಮಧ್ಯೆ ಮಾಜಿ ಸಿಎಂ ಒಬ್ಬರು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತ ಎಂದಿದ್ದಾರೆ.

ಬೆಂಗಳೂರು, (ನ.25): ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತವಾಗಿರಬೇಕು. ಹೀಗಾಗಿ ಅವರು ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದರು.

ಸಂತೋಷ್‌ ಜೀ-ಬಿಎಸ್‌ವೈ ಭೇಟಿ ಬಗ್ಗೆ ಬಿಜೆಪಿ ಸಾರಥಿ ಸ್ಪಷ್ಟನೆ

ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ ಮಂಡಳಿಗಳೀಗೆ ನೇಮಕ ಮಾಡಿರುವುದು ರಾಜ್ಯಕ್ಕೆ ಎಸಗಿರುವ ದ್ರೋಹ. ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ನೀಡದೇ ಹೋದಲ್ಲಿ ಆನ್ಲೈನ್ ತರಗತಿ ಸೌಲಭ್ಯ ನೀಡದೇ ಇರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿದ್ದು, ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ರಕ್ಷಣೆಗಾಗಿ ಏನೂ ಮಾಡುತ್ತಿಲ್ಲ. ಇದು ಬರೀ ಲೂಟಿ ಸರ್ಕಾರ. ಯಡಿಯೂರಪ್ಪ ಸರ್ಕಾರ ಲೂಟಿ ಸರ್ಕಾರ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ