ಯಡಿಯೂರಪ್ಪನವರು ಲೋಕಸಭೆಯ ಚುನಾವಣೆಯಲ್ಲಿ ಸೋತಾಗ ಹೈಕಮಾಂಡ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲು ಹೊರಟಿತ್ತು. ಆ ಸಂದರ್ಭ ಅವರು ನಾನು ಈಗಾಗಲೇ ರಾಜಶೇಖರ್ ಮೂರ್ತಿ ಅವರಿಗೆ ಭರವಸೆ ನೀಡಿದ್ದೇನೆ. ಅವರನ್ನೇ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ಎಂದು ಹೈಕಮಾಂಡ್‌ಗೆ ತಿಳಿಸಿ ತಮಗೆ ಬಂದ ಅವಕಾಶವನ್ನು ತಿರಸ್ಕರಿಸಿದ್ದರು. ಯಾವುದೇ ಕಾರಣಕ್ಕೂ ಅವರು ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯೇ ಇಲ್ಲ ಎಂದ ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ(ಮಾ.15): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾರಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪನವರು ಲೋಕಸಭೆಯ ಚುನಾವಣೆಯಲ್ಲಿ ಸೋತಾಗ ಹೈಕಮಾಂಡ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲು ಹೊರಟಿತ್ತು. ಆ ಸಂದರ್ಭ ಅವರು ನಾನು ಈಗಾಗಲೇ ರಾಜಶೇಖರ್ ಮೂರ್ತಿ ಅವರಿಗೆ ಭರವಸೆ ನೀಡಿದ್ದೇನೆ. ಅವರನ್ನೇ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ಎಂದು ಹೈಕಮಾಂಡ್‌ಗೆ ತಿಳಿಸಿ ತಮಗೆ ಬಂದ ಅವಕಾಶವನ್ನು ತಿರಸ್ಕರಿಸಿದ್ದರು. ಯಾವುದೇ ಕಾರಣಕ್ಕೂ ಅವರು ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯೇ ಇಲ್ಲ ಎಂದರು.
undefined
ಶಿವಮೊಗ್ಗದ ಅಪ್ಪ-ಮಗ ಸೇರಿ ಮೋಸ ಮಾಡಿಬಿಟ್ರು ಅಂತ, ಬಿಜೆಪಿ ವಿರುದ್ಧ ಸಿಡಿದೆದ್ದ ಕೆ.ಎಸ್. ಈಶ್ವರಪ್ಪ!
ಕೆ.ಎಸ್. ಈಶ್ವರಪ್ಪ ಅವರು ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಅನಂತ ಕುಮಾರ್ ಜೊತೆಗೆ ಪಕ್ಷ ಕಟ್ಟಿದವರು. ಈಶ್ವರಪ್ಪ ಅವರು ಕಟ್ಟರ್ ರಾಷ್ಟ್ರವಾದಿ ಮತ್ತು ಪ್ರಧಾನಿ ಮೋದಿಯವರ ಅಭಿಮಾನಿ. ಯಾವುದೇ ಕಾರಣಕ್ಕೂ ಪಕ್ಷವಿರೋಧಿ ಚಿಂತನೆಯನ್ನು ಅವರು ಮಾಡುವುದಿಲ್ಲ. ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆಯ ಸಾರಥ್ಯವನ್ನು ವಹಿಸಿಕೊಂಡು ರಥ ಮುನ್ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾ.18ರಂದು ಶಿವಮೊಗ್ಗಕ್ಕೆ ಮೋದಿ ಬರುತ್ತಿದ್ದಾರೆ. ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.