Karnataka Politics: ಬಿಎಸ್‌ವೈ ಮಹತ್ವದ ಸುಳಿವು, ಜಾರಕಿಹೊಳಿ, ಯತ್ನಾಳ್ ಹೇಳಿದ್ದು ನಿಜವಾಯ್ತಾ?

By Suvarna NewsFirst Published Dec 4, 2021, 5:35 PM IST
Highlights

* ಬಿಎಸ್ ಯಡಿಯೂರಪ್ಪ ಮಹತ್ವದ ಸುಳಿವು
* ರಾಜ್ಯ ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು
* ಜಾರಕಿಹೊಳಿ, ಯತ್ನಾಳ್ ಹೇಳಿದ್ದು ನಿಜವಾಯ್ತಾ?

ದಾವಣಗೆರೆ, (ಡಿ.04): ಒಂದೆಡೆ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ (Karnataka MLC Elections) ಕಾವು ಜೋರಾಗಿದೆ. ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.

ಹೌದು...ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ (Cabinet Expansion) ಬಗ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa) ಮಹತ್ವದ ಸುಳಿವು ಕೊಟ್ಟಿದ್ದು, ಬಿಜೆಪಿಯಲ್ಲಿ(BJP) ಸಂಚಲನ ಮೂಡಿಸಿದ್ದು,  ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ(ramesh jarkiholi) ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ (Basangowda Patil Yatnal) ನುಡಿದ ಭವಿಷ್ಯ ನಿಜವಾಗುವ ಲಕ್ಷಣಗಳು ಕಾಣಿಸುತ್ತಿವೆ.. 

Karnataka politics: ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಯತ್ನಾಳ್, ಜಾರಕಿಹೊಳಿ

 ದಾವಣಗೆರೆ(Davanagere) ತಾಲೂಕಿನ ಆನಗೋಡದಲ್ಲಿ ಇಂದು(ಡಿ.04) ಮಾತನಾಡಿದ ಬಿಎಸ್​ವೈ, ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಎಸ್ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಉತ್ತರಿಸಲಿದ್ದಾರೆ. ಇಷ್ಟರಲ್ಲೇ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ನನಗೂ ಇದೆ ಎಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ ಸಂಪುಟ ಸೇರಲು ನಡೆಸುತ್ತಿರುವ ಕಸರತ್ತು ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಸಚಿವ ಸಂಪುಟ ವಿಸ್ತರಿಸುವ ಅಧಿಕಾರ ಸಿಎಂ ಬೊಮ್ಮಾಯಿಗೆ ಇದೆ. ಯಾರನ್ನ ಸಚಿವರನ್ನಾಗಿ ಮಾಡಬೇಕು, ಬಿಡಬೇಕು ಅನ್ನೋದು ಸಿಎಂಗೆ ಬಿಟ್ಟಿದ್ದು. ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದರು.

ಯತ್ನಾಳ್, ರಮೇಶ್ ಜಾರಕಿಹೊಳಿ ಹೇಳಿಕೆ ನಿಜವಾಗುತ್ತಾ?
ಯೆಸ್‌..ಮೊನ್ನೇ ಅಷ್ಟೇ ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದರು. ಅಥಣಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ  ಹತ್ತು ದಿನಗಳಲ್ಲಿ ನಾನು ಮತ್ತೆ ಮಂತ್ರಿಯಾಗುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. 

ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಸಹ , ಡಿಸೆಂಬರ್ 10ರ ಬಳಿಕ ರಾಜ್ಯದಲ್ಲಿ ಬಹಳ ದೊಡ್ಡ ಬದಲಾವಣೆಯಾಗಲಿದೆ. ಅಲ್ಲದೇ ಪೂರ್ಣ ಸಚಿವ ಸಂಪುಟವೇ ಪುನಾರಚನೆಯಾಗಬಹುದು ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದರು.

ಇದೀಗ ಯಡಿಯುರಪ್ಪ ಸಹ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟಿದ್ದು, ರಮೇಶ್ ಜಾರಕಿಹೊಳಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನಿಜವಾಗುವ ಎಲ್ಲಾ ಸಾಧ್ಯತೆಗಳಿವೆ. ಅಲ್ಲದೇ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕರೂ ಅಚ್ಚರಿ ಪಡಬೇಕಿಲ್ಲ.

 ಯಡಿಯೂರಪ್ಪ ಅವರ ಈ ಹೇಳಿಕೆ ಬೆನ್ನಲ್ಲೆ ಜಾರಕಿಹೊಳಿ, ಯತ್ನಾಳ್ ಮಾತ್ರವಲ್ಲದೇ ಇನ್ನುಳಿದ ಸಚಿವಾಕಾಂಕ್ಷಿಗಳ ಕಿವಿ ನಿರೀಕ್ಷೆ ದುಪ್ಪಟ್ಟು ಆಗಿದೆ. ಯಾರಿಗೆ ಮಂತ್ರಿ ಭಾಗ್ಯ ಸಿಗುತ್ತೋ? ಎನ್ನುವುದನ್ನು ಕಾದುನೋಡಬೇಕಿದೆ.

ದಿಲ್ಲಿ ಭೇಟಿ ವೇಳೆ ಚರ್ಚೆ
ಇತ್ತೀಚೆಗೆ ಮುಖ್ಯಂಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ದೆಹಲಿಗೆ(New Delhi) ತೆರಳಿ, ಹೈಕಮಾಂಡ್ ನಾಯಕರ ಜತೆ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಮಾತುತೆಗಳು ಆಗಿವೆ ಎಂದು ತಿಳಿದುಬಂದಿದೆ.

ಇನ್ನು  ದೆಹಲಿಗೆ ಹೋಗುವ ಮುನ್ನ ರಮೇಶ್ ಜಾರಕಿಹೊಳಿ, ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಸಂಪುಟ ಸೇರಿಸಿಕೊಳ್ಳಿ ಎಂದು ತಮ್ಮ ಮನದಮಾತುಗಳನ್ನ ವ್ಯಕ್ತಪಡಿಸಿದ್ದರು.

ಒಟ್ಟಿನಲ್ಲಿ ವಿಧಾನಪರಿಷತ್ ಚುನಾವಣೆ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಚಟುವಟಿಗೆಗಳು ಗರಿಗೆದರಿವೆ. 

click me!