ಜನರ ಸಮಸ್ಯೆ ಆಲಿಸಲು ಜತೆಯಲ್ಲಿ ಹೋಗೋಣ: ಡಿಕೆಶಿಗೆ ಯಡಿಯೂರಪ್ಪ ಆಹ್ವಾನ

Published : Nov 12, 2023, 06:17 AM IST
ಜನರ ಸಮಸ್ಯೆ ಆಲಿಸಲು ಜತೆಯಲ್ಲಿ ಹೋಗೋಣ: ಡಿಕೆಶಿಗೆ ಯಡಿಯೂರಪ್ಪ ಆಹ್ವಾನ

ಸಾರಾಂಶ

ಕಾಂಗ್ರೆಸ್‌ ಸರ್ಕಾರವು ಸುಮ್ಮನೆ ದಿನ ದೂಡುತ್ತಿದೆ. ಒಂದೇ ಒಂದು ಕಡೆ ಒಂದು ಕಿ.ಮೀ ರಸ್ತೆ ಮಾಡಿಲ್ಲ. ಸರ್ಕಾರವು ಜನವಿರೋಧಿ ಕೆಲಸ ಮಾಡುತ್ತಿದೆ. ಆರ್ಥಿಕವಾಗಿ ದಿವಾಳಿಯಾಗಿದೆ. ಜನರಿಗೆ ವಾಸ್ತವ ಪರಿಸ್ಥಿತಿ ತಿಳಿಸುವ ಕೆಲಸ ಮಾಡುತ್ತಿಲ್ಲ. ಶಿವಕುಮಾರ್ ಅವರೇ ನಿಮ್ಮ ಜೊತೆ ನಾನು ಬರ್ತೀನಿ, ನೀವು ಬನ್ನಿ, ಈ ಜನರ ಸಮಸ್ಯೆ ಆಲಿಸೋಣ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 

ಬೆಂಗಳೂರು(ನ.11): ‘ಜನರ ಸಮಸ್ಯೆಗಳನ್ನು ಆಲಿಸಲು ಜೊತೆಯಾಗಿ ಹೋಗೋಣ, ನೀವೂ ಬನ್ನಿ’, ಹೀಗೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಹಿರಂಗ ಆಹ್ವಾನ ನೀಡಿದ್ದಾರೆ.

ಶನಿವಾರ ದಾಸರಹಳ್ಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮತ್ತು ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಿದ ಬಳಿಕ ಅವರು, ದಾಸರಹಳ್ಳಿ ಕ್ಷೇತ್ರದ ಪರಿಶೀಲನೆ ಮಾಡಿ, ರಸ್ತೆ ಕೆಲಸಗಳನ್ನು ಗಮನಿಸಿದ್ದೇನೆ. ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ವೀಕ್ಷಿಸಿದ್ದೇನೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಎಲ್ಲಾ ವಿಷಯದ ಬಗ್ಗೆ ಶಿವಕುಮಾರ್ ಗಮನಿಸಬೇಕು ಎಂದು ಆಗ್ರಹಿಸಿದರು.

ನಾವಲ್ಲ, ಬಿಜೆಪಿಗರೇ ಕಿತ್ತಾಡ್ತಿದ್ದಾರೆ: ಯಡಿಯೂರಪ್ಪಗೆ ಡಿಕೆಶಿ ತಿರುಗೇಟು

ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ನಗರೋತ್ಥಾನ ಅಭಿವೃದ್ಧಿ ಅಡಿಯಲ್ಲಿ 110 ಹಳ್ಳಿಗೆ ಬಿಡುಗಡೆಯಾಗಿದ್ದ ಹಣ ವಾಪಸ್ ಪಡೆದಿದ್ದಾರೆ. ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದರು.
ಪೀಣ್ಯ ಕೈಗಾರಿಕಾ ಪ್ರದೇಶವು ಏಷ್ಯಾದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುತ್ತದೆ. ಆ ಪ್ರದೇಶವನ್ನೇ ಸರ್ಕಾರ ಕಡೆಗಣನೆ ಮಾಡಿದೆ. ಕಾವೇರಿ ನೀರು ಸರಬರಾಜು ಸರಿಯಾಗಿ ನಡೆದಿಲ್ಲ. ಒಳಚರಂಡಿ ಸಂಪೂರ್ಣ ಹಾಳಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿಲ್ಲ. ಚಿಕ್ಕಬಾಣಾವರ ಕೆರೆ ಒಳಚರಂಡಿ, ತಾಜ್ಯದಿಂದ ತುಂಬಿದೆ. ಇದರ ಪುನರುಜ್ಜೀವನ ಮಾಡುವ ನಿಟ್ಟಿಗೆ ಮುಂದಾಗಬೇಕಿದೆ. ಕೆಆರ್‌ಐಡಿಎಲ್ ಮೂಲಕ ಅಭಿವೃದ್ದಿ ಮಾಡಬೇಕಿದೆ. ಶಿವಕುಮಾರ್ ಅವರು ಉಸ್ತುವಾರಿ ಇದ್ದಾರೆ. ಇದಕ್ಕೆ ಹಣ ಕೊಡಲು ಸಾಧ್ಯವಾಗುವುದಿಲ್ಲವೇ? ಈ ಸರ್ಕಾರ ದಿವಾಳಿಯಾಗಿದೆಯೇ? ಎಂದು ಟೀಕಾಪ್ರಹಾರ ನಡೆಸಿದರು.

AICC ನಾಯಕರಿಗೆ ಕರ್ನಾಟಕ ಎಟಿಎಂ: ಬಿ.ಎಸ್‌.ಯಡಿಯೂರಪ್ಪ

ಕಾಂಗ್ರೆಸ್‌ ಸರ್ಕಾರವು ಸುಮ್ಮನೆ ದಿನ ದೂಡುತ್ತಿದೆ. ಒಂದೇ ಒಂದು ಕಡೆ ಒಂದು ಕಿ.ಮೀ ರಸ್ತೆ ಮಾಡಿಲ್ಲ. ಸರ್ಕಾರವು ಜನವಿರೋಧಿ ಕೆಲಸ ಮಾಡುತ್ತಿದೆ. ಆರ್ಥಿಕವಾಗಿ ದಿವಾಳಿಯಾಗಿದೆ. ಜನರಿಗೆ ವಾಸ್ತವ ಪರಿಸ್ಥಿತಿ ತಿಳಿಸುವ ಕೆಲಸ ಮಾಡುತ್ತಿಲ್ಲ. ಶಿವಕುಮಾರ್ ಅವರೇ ನಿಮ್ಮ ಜೊತೆ ನಾನು ಬರ್ತೀನಿ, ನೀವು ಬನ್ನಿ, ಈ ಜನರ ಸಮಸ್ಯೆ ಆಲಿಸೋಣ. ಬಿಜೆಪಿ ಶಾಸಕರು ಕೂಡ ಪರಿಶೀಲನೆಗೆ ಬರುತ್ತಾರೆ. ಪ್ರತಿಪಕ್ಷ ಎನ್ನುವ ಕಾರಣಕ್ಕೆ ನೀಡಿರುವ ಅನುದಾನ ವಾಪಸ್ ಪಡೆಯಲಾಗುತ್ತಿದೆ. ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಹೋರಾಟ ಮಾಡುವ ಮೊದಲು ಸಮಸ್ಯೆ ಬಗೆಹರಿಸಿ ಎಂದು ಎಚ್ಚರಿಕೆ ನೀಡಿದರು.

ಉಪಮುಖ್ಯಮಂತ್ರಿಗಳ ಬ್ರಾಂಡ್‌ ಬೆಂಗಳೂರು ಕಲ್ಪನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೆ ಬೊಗಳೆ ಬಿಡುವುದಲ್ಲ. ವಾಸ್ತವ ವಿಚಾರ ಮಾತಾಡಬೇಕು. ಬನ್ನಿ, ಜನರ ಮಧ್ಯದಲ್ಲಿ ಕುಳಿತು ಮಾತಾಡೋಣ. ಬರ ಅಧ್ಯಯನ ವರದಿ ತಯಾರಿ ಮಾಡಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಒಂದು ವರದಿ ಕೊಡುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್‌.ಮುನಿರಾಜು, ಜಿಲ್ಲಾಧ್ಯಕ್ಷ ನಾರಾಯಣ, ಮುಖಂಡ ಮರಿಸ್ವಾಮಿ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?