'ಸಿಎಂ ಹುದ್ದೆಯಿಂದ ಯಡಿಯೂರಪ್ಪ ಬದಲು ಬೇಡ'

By Kannadaprabha News  |  First Published Jun 17, 2021, 7:13 AM IST
  •  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಂತ ಸಮರ್ಥವಾಗಿ ರಾಜ್ಯವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ
  • ಮುಖ್ಯಮಂತ್ರಿ ಹುದ್ದೆಯಿಂದ ಬದಲಿಸಬಾರದು 
  • ವೀರಶೈವ ಲಿಂಗಾಯತ ಯುವ ವೇದಿಕೆ ಅಧ್ಯಕ್ಷ ಪ್ರಶಾಂತ್‌ ಕಲ್ಲೂರ್‌ ಆಗ್ರಹ

ಬೆಂಗಳೂರು (ಜೂ.17):  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಂತ ಸಮರ್ಥವಾಗಿ ರಾಜ್ಯವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದು, ಯಾವುದೇ ಕಾರಣಕ್ಕೂ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಬದಲಿಸಬಾರದು ಎಂದು ವೀರಶೈವ ಲಿಂಗಾಯತ ಯುವ ವೇದಿಕೆ ಅಧ್ಯಕ್ಷ ಪ್ರಶಾಂತ್‌ ಕಲ್ಲೂರ್‌ ಆಗ್ರಹಿಸಿದ್ದಾರೆ.

ಕೆಲವರು ಅನವಶ್ಯಕವಾಗಿ ಯಡಿಯೂರಪ್ಪ ಅವರ ಘನತೆ-ಗೌರವಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಮಾನಸಿಕವಾಗಿ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ವೀರಶೈವ-ಲಿಂಗಾಯತ ಸಮಾಜಕ್ಕೆ ಮಾಡುವಂತಹ ಅವಮಾನವಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ. ಕರುಣಾನಿಧಿ 15 ವರ್ಷ ಗಾಲಿ ಕುರ್ಚಿಯಲ್ಲಿ ಕೂತು ಅಧಿಕಾರ ನಡೆಸಿದ್ದರು. ದೇವೇಗೌಡರು ಯುವಕರನ್ನೂ ನಾಚಿಸುವಂತೆ ಕೆಲಸ ಮಾಡುತ್ತಿದ್ದಾರೆ. ಬಿಎಸ್‌ವೈ ಸಹ ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದು ಪ್ರಶಾಂತ್‌ ಹೇಳಿದ್ದಾರೆ.

Latest Videos

undefined

ಇಲಾಖೆಗಳಲ್ಲಿ ಸಿಎಂ ಬಿಟ್ಟು ಬೇರೆಯವರ ಹಸ್ತಕ್ಷೇಪವಿದ್ರೆ ಅರುಣ್ ಸಿಂಗ್ ಬಳಿ ಹೇಳಲಿ: ಈಶ್ವರಪ್ಪ

 ಈ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿ 15 ವರ್ಷಗಳ ಕಾಲ ಗಾಲಿ ಕುರ್ಚಿಯಲ್ಲಿ ಅಧಿಕಾರ ನಡೆಸಿದರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಯುವಕರು ನಾಚುವಂತಹ ರೀತಿಯಲ್ಲಿ ಸಕ್ರಿಯ ರಾಜಕಾರಣದಲ್ಲಿ ಇದ್ದಾರೆ. ಅಂತೆಯೇ ಬಿ.ಎಸ್‌.ಯಡಿಯೂರಪ್ಪ ಅವರು ಮಾನಸಿಕವಾಗಿ ದೈಹಿಕವಾಗಿ ಆರೋಗ್ಯವಂತಾಗಿದ್ದು, ರಾಜ್ಯವನ್ನು ಮುನ್ನಡೆಸಿಕೊಂಡು ಹೋಗುವಂತಹ ಸಾಮರ್ಥ್ಯವನ್ನು ಹೊಂದಿರುವುದರಿಂದ ಅನಗತ್ಯವಾಗಿ ಗೊಂದಲ ಸೃಷ್ಟಿಮಾಡಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವುದು ಸೂಕ್ತವಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶಾಸಕರು ಗೆಲ್ಲಲು ಯಡಿಯೂರಪ್ಪ ಪಾತ್ರ ಪ್ರಮುಖವಾಗಿದ್ದು, ಸರ್ಕಾರ ರಚಿಸುವಲ್ಲಿ ಅನೇಕ ವ್ಯಕ್ತಿಗಳ ತ್ಯಾಗ ಮತ್ತು ಹೋರಾಟದ ಫಲ ಕಾರಣವಾಗಿರುತ್ತದೆ. ಹೀಗಿರುವಾಗ ಅನವಶ್ಯಕವಾಗಿ ಕೆಲವರು ಯಡಿಯೂರಪ್ಪನವರಿಗೆ ತೊಂದರೆ ನೀಡುತ್ತಿರುವುದನ್ನು ವೀರಶೈವ ಲಿಂಗಾಯತ ಯುವ ವೇದಿಕೆ ಖಂಡಿಸುತ್ತದೆ. ಅಲ್ಲದೇ, ಯಡಿಯೂರಪ್ಪ ಅವರು ಪೂರ್ಣಾವಧಿ ಅಧಿಕಾರ ಪೂರೈಸಲು ಸದಾ ಬೆಂಬಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

click me!