ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಸೋಲಿಸುವ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಗಲಿಗೆ ವಹಿಸಲಾಗಿದೆ.
ಬೆಂಗಳೂರು (ಏ.23): ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಸೋಲಿಸುವ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಗಲಿಗೆ ವಹಿಸಲಾಗಿದೆ. ಉಭಯ ನಾಯಕರು ಸ್ಪರ್ಧಿಸಿರುವ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಮತ್ತು ಅಥಣಿ ಕ್ಷೇತ್ರಗಳಿಗೆ ಆದಷ್ಟುಬೇಗ ತೆರಳಿ ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಇನ್ನೆರಡು ದಿನಗಳಲ್ಲಿ ಆ ಕ್ಷೇತ್ರಗಳಿಗೆ ಭೇಟಿ ನೀಡಿ ತಂತ್ರ ರೂಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ತಡರಾತ್ರಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಅಮಿತ್ ಶಾ ಅವರು ಶೆಟ್ಟರ್ ಮತ್ತು ಸವದಿ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ಲಿಂಗಾಯತ ಸಮುದಾಯದ ಶೆಟ್ಟರ್ ಮತ್ತು ಸವದಿ ಅವರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರೆ ಒಂದು ಹಂತದಲ್ಲಿ ಸುಮ್ಮನಾಗಬಹುದಿತ್ತೇನೋ. ಆದರೆ ಸೈದ್ಧಾಂತಿಕ ವಿರೋಧಿಯಾಗಿರುವ ಕಾಂಗ್ರೆಸ್ ಜೊತೆ ಕೈಜೋಡಿಸಿರುವುದನ್ನು ಒಪ್ಪಲು ಸಾಧ್ಯವಿಲ್ಲ. ಶತಾಯಗತಾಯ ಅವರಿಬ್ಬರನ್ನೂ ಸೋಲಿಸಬೇಕು ಎಂದು ಪಕ್ಷದ ನಾಯಕರಿಗೆ ಕರೆ ನೀಡಿದರು ಎನ್ನಲಾಗಿದೆ.
ಇನ್ನು ಪ್ರಚಾರ ಅಬ್ಬರ: ಇಂದಿನಿಂದ ಎಲ್ಲ ಪಕ್ಷಗಳ ಮತಬೇಟೆ ಬಿರುಸು
ಇದರ ಜವಾಬ್ದಾರಿಯನ್ನು ಲಿಂಗಾಯತ ಸಮುದಾಯದ ಹಿರಿಯ ನಾಯಕರಾಗಿರುವ ಯಡಿಯೂರಪ್ಪ ಅವರೇ ವಹಿಸಿಕೊಳ್ಳಬೇಕು. ಅವರೇ ಮುಂದೆ ನಿಂತು ಆ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಬೇಕು. ಅವರಿಬ್ಬರ ಆರೋಪಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಸೂಚಿಸಿದರು ಎಂದು ಮೂಲಗಳು ಮಾಹಿತಿ ನೀಡಿವೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಅಭಿವೃದ್ಧಿಯೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆ: ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ವಿಧಾನಸಭೆ ಚುನಾವಣೆ ಎದುರಿಸುತ್ತೇವೆ. ಅಭಿವೃದ್ಧಿ ಆಧರಿಸಿಯೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಹೇಳಿದರು. ಶನಿವಾರ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ ಕೊನೆಗೊಂಡಿದೆ. ನಮ್ಮ ಜಿಲ್ಲೆಯ 8 ಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರ ಸ್ವೀಕೃತವಾಗಿವೆ. ನಾಳೆಯಿಂದ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.
ಇಂದು ಉತ್ತರಾಧಿಕಾರ ದೀಕ್ಷೆ: ಸಿದ್ಧಗಂಗೆ ವಿರಕ್ತಮಠಕ್ಕೆ ಹೊಸ ನಿರಂಜನ ಜಂಗಮ
ರಾಜ್ಯದಲ್ಲಿ ಬಿಜೆಪಿ ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದ ಸರ್ಕಾರ 5 ವರ್ಷ ಪೂರೈಸಿದೆ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಅಧಿಕಾರವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು. ರೈತ ವಿದ್ಯಾನಿಧಿ, ವಿಶೇಷವಾಗಿ ವಿಜಯಪುರ ಜಿಲ್ಲೆಗೆ ನೀರಾವರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ. ಮುಳವಾಡ, ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗಳಿಗೆ .5.5 ಕೋಟಿ ನೀಡಿದ್ದೇವೆ. ಜಿಲ್ಲೆಯಾದ್ಯಂತ ರಸ್ತೆಗಳು ಅಭಿವೃದ್ಧಿಯಾಗಿವೆ. ಹೀಗಾಗಿ ಇಡೀ ರಾಜ್ಯದ ಜನತೆ ಬಿಜೆಪಿ ಕಡೆಗೆ ನೋಡುತ್ತಾರೆ. ಹಾಗಾಗಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.