
ಬೆಂಗಳೂರು (ಸೆ.13): ಬದಲಾದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿನ ಕುರ್ಚಿಗಳಲ್ಲಿ ಸ್ಥಾನ ಪಲ್ಲಟ ಉಂಟಾಗಿದೆ.
ಕಳೆದ ಅಧಿವೇಶನದಲ್ಲಿ ಮೊದಲ ಸಾಲಿನಲ್ಲಿ ನಿಂತು ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಿದ್ದ ಬಿ ಎಸ್ ಯಡಿಯೂರಪ್ಪ ಅವರ ಜಾಗಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಪರಿಣಾಮ ಮಾಜಿಯಾಗಿರುವ ಯಡಿಯೂರಪ್ಪ ಅವರಿಗೆ ವಿಧಾನಸಭೆಯ ಆಡಳಿತ ಪಕ್ಷಕ್ಕೆ ನಿಗದಿಯಾದ ನಾಲ್ಕನೆ ಸಾಲಿನಲ್ಲಿ ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಮಿತಿ ಮೀರಿದ ಭ್ರಷ್ಟಾಚಾರದಿಂದ ಬಿಜೆಪಿಯಲ್ಲಿ ಸಿಎಂ ಬದಲಾವಣೆ: ಡಿಕೆಶಿ
2018 ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಮಾಜಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಸಹ ಹಿಂಬದಿ ಸಾಲಿನಲ್ಲಿ ಕೂರುವಂತಾಗಿತ್ತು.
ಇದೀಗ ಅದೇ ಸಾಲಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ನಿಂತಿದ್ದು ನಾಲ್ಕನೆ ಸಾಲಿನಲ್ಲಿ ಅಸಿನರಾಗುವಂತಾಗಿದೆ.
ಬಿ ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸದಸ್ಯರಾಗಿ ಮೊದಲ ಸಾಲಿನಲ್ಲಿ ಕೂರುತ್ತಿದ್ದ ಜಗದೀಶ್ ಶೆಟ್ಟರ್ ಅವರು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸದಸ್ಯರಾಗಲು ನಿರಾಕರಿಸಿದರು.
ಪರಿಣಾಮ ಬಿ.ಎಸ್ ಯಡಿಯೂರಪ್ಪ ಅವರ ಪಕ್ಕದಲ್ಲೇ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೂರಲಿದ್ದಾರೆ. ಸರ್ಕಾರದ ಮುಖ್ಯ ಸಚೇತಕರಿಗೆ ನಾಲ್ಕನೆ ಸಾಲಿನ ಮೊದಲ ಆಸನ ಮೀಸಲಾಗಿರುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.