
ಬೆಂಗಳೂರು(ಆ.19): ತಮ್ಮ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರನ್ನು ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ತೆರೆಮರೆಯ ಚಟುವಟಿಕೆ ಬಿರುಸಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿ ನಾಯಕರು, ಪಕ್ಷದಲ್ಲೇ ಉಳಿಸಿಕೊಳ್ಳುವ ಸಂಬಂಧ ಕಸರತ್ತು ಆರಂಭಿಸಿದ್ದಾರೆ.
ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಅವರ ನಿವಾಸದಲ್ಲಿ ಶುಕ್ರವಾರ ಸಂಜೆ ಬಿಬಿಎಂಪಿ ವ್ಯಾಪ್ತಿಯ ಶಾಸಕರ ತುರ್ತು ಸಭೆ ನಡೆಸಿದ ನಾಯಕರು ಕಾಂಗ್ರೆಸ್ ಪ್ರಯತ್ನ ವಿಫಲಗೊಳಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಬಿಬಿಎಂಪಿ ಬಿಲ್ ಪಾವತಿ ಬಾಕಿ: ಯಡಿಯೂರಪ್ಪ ಬಳಿ ಅನ್ಯಾಯ ತೋಡಿಕೊಂಡ ಗುತ್ತಿಗೆದಾರರು..!
ಮುಂಬರುವ ಲೋಕಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಗುರಿಯಾಗಿಸಿಕೊಂಡು ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಅಂಥವರನ್ನು ಗುರುತಿಸಿ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಜವಾಬ್ದಾರಿಯನ್ನು ಮೂವರು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರಿಗೆ ವಹಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈಗ ಕೇಳಿಬರುತ್ತಿರುವ ಹಾಲಿ ಶಾಸಕರೂ ಸೇರಿದಂತೆ ಯಾರು ಅರೆಮನಸ್ಸಿನಲ್ಲಿದ್ದಾರೆಯೋ ಅಂಥ ಮುಖಂಡರನ್ನು ಕರೆಸಿ ಮಾತುಕತೆ ನಡೆಸಬೇಕು. ಜತೆಗೆ ಅವರ ಅಹವಾಲನ್ನು ಆಲಿಸಿ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಅವರ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಧರಿಸಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಚುಟುಕಾಗಿ ಮಾತನಾಡಿದ ಯಡಿಯೂರಪ್ಪ, ಯಾರೊಬ್ಬರೂ ಬಿಜೆಪಿ ತೊರೆದು ಹೋಗುವುದಿಲ್ಲ. ಒಬ್ಬಿಬ್ಬರು ಆ ಬಗ್ಗೆ ಆಲೋಚಿಸುತ್ತಿದ್ದಾರೆ. ಆ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದರು.
ಬೊಮ್ಮಾಯಿ ಮಾತನಾಡಿ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಚ್ ಮಾಡಲು ಬಿಜೆಪಿ ಶಾಸಕರ ಪಕ್ಷಾಂತರದ ಬಗ್ಗೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಸ್.ಟಿ.ಸೋಮಶೇಖರ್, ಶಿವರಾಮ… ಹೆಬ್ಬಾರ್ ಜೊತೆ ನಾನು ಮಾತನಾಡಿದ್ದೇನೆ. ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕೆಲವು ಶಾಸಕರು ಸ್ಥಳೀಯವಾಗಿರುವ ಸಮಸ್ಯೆಗಳನ್ನು ಹೇಳಿದ್ದಾರೆ. ಅದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಎಲ್ಲವನ್ನೂ ಬಗೆಹರಿಸುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್‌ನವರ ವಿರುದ್ಧ ಕೇಳಿ ಬಂದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅವರ ಶಾಸಕರೇ ದಂಗೆ ಎದ್ದಿರುವುದನ್ನು ಮರೆ ಮಾಚಲು ಪಕ್ಷಾಂತರದ ಸುಳ್ಳು ಕತೆ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಅಶೋಕ್ ಮಾತನಾಡಿ, ಸಿದ್ದರಾಮಯ್ಯ ತಮ್ಮ ರಾಜಕೀಯ ಗುರು ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ವಿಶೇಷ ಅರ್ಥ ಬೇಡ. ಈ ಹಿಂದೆ ಕೆಲವರು ಬಸವರಾಜ ಬೊಮ್ಮಾಯಿ ಅವರನ್ನು ನಮ್ಮ ಗುರು ಎಂದಿದ್ದರು. ಇನ್ನು ಹಲವರು ಯಡಿಯೂರಪ್ಪ ಅವರನ್ನು ನಮ್ಮ ಗುರು ಎನ್ನುತ್ತಾರೆ. ರಾಜಕೀಯವೇ ಬೇರೆ, ಗುರುವೇ ಬೇರೆ. ಅಪ್ಪ ಮಗ, ಅಣ್ಣ ತಮ್ಮ ಬೇರೆ ಬೇರೆ ಪಕ್ಷದಲ್ಲಿ ಇರುವ ಕಾಲ ಇದು. ಈಗಾಗಲೇ ಎರಡು ಬಾರಿ ಸೋಮಶೇಖರ್ ನನಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ಸಭೆಗೆ ಶಾಸಕರಾದ ಸೋಮಶೇಖರ್ ಮತ್ತು ಬೈರತಿ ಬಸವರಾಜು ಅವರು ಗಮನಕ್ಕೆ ತಂದೇ ಗೈರು ಹಾಜರಾಗಿದ್ದಾರೆ. ಬೈರತಿ ಅವರು ಊರಲ್ಲಿ ಇಲ್ಲ. ಅವರು ಬರುತ್ತಿದ್ದಂತೆಯೇ ಇಬ್ಬರನ್ನೂ ಮಾಧ್ಯಮಗಳ ಮುಂದೆ ನಿಲ್ಲಿಸಿ ಸ್ಪಷ್ಟೀಕರಣ ಕೊಡಿಸುತ್ತೇನೆ ಎಂದು ಹೇಳಿದರು.
ಡಿಕೆಶಿ ಯಾವ ಕಾಲಕ್ಕೂ ಸಿಎಂ ಆಗಲ್ಲ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ
ಯಾರಾರಯರಿಗೆ ಜವಾಬ್ದಾರಿ?
ಮಾಜಿ ಸಿಎಂಗಳಾದ ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಡಿಸಿಎಂ ಅಶೋಕ್‌ಗೆ ಹೊಣೆ.
ನಾಲ್ವರಿಗೂ ಏನು ಕೆಲಸ?
- ಪಕ್ಷಾಂತರಕ್ಕೆ ಒಲವು ತೋರಿರುವವರನ್ನು ಕರೆಸಿ ಮಾತುಕತೆ ನಡೆಸುವುದು
- ಅರೆಮನಸ್ಸಿನಲ್ಲಿರುವವರ ಜತೆಗೂ ಸಮಾಲೋಚಿಸಿ ಮನವೊಲಿಸುವುದು
- ಶಾಸಕರ ಅಹವಾಲನ್ನು ಆಲಿಯಾರೂ ಬಿಡಲ್ಲ
ಸಿ, ಸಮಸ್ಯೆಗಳಿಗೆ ಪರಿಹಾರ ಹುಡುಕುವುದು
ಯಾರೊಬ್ಬರೂ ಬಿಜೆಪಿ ತೊರೆದು ಹೋಗುವುದಿಲ್ಲ. ಒಬ್ಬಿಬ್ಬರು ಆ ಬಗ್ಗೆ ಆಲೋಚಿಸುತ್ತಿದ್ದಾರೆ. ಆ ಬಗ್ಗೆ ಚರ್ಚಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.