
ಬೆಂಗಳೂರು, (ಡಿ.16): ಇತ್ತೀಚೆಗಷ್ಟೇ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಿಎಸ್ವೈ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಖಾಲಿ ಇರುವ ಎಲ್ಲಾ ನಿಗಮಗಳಿಗೆ ಅಧ್ಯಕ್ಷರನ್ನ ನೇಮಿಸಿತ್ತು. ಇದೀಗ ಅವರಲ್ಲಿ 9 ಮಂದಿಗೆ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ನಾಲ್ವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ.
ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ
ಯಾರಿಗೆಲ್ಲಾ ಸಂಪುಟ ದರ್ಜೆಯ ಸ್ಥಾನಮಾನ..?
* ಎಂ.ಚಂದ್ರಪ್ಪ - ಕೆಎಸ್ಆರ್ಟಿಸಿ, ಬೆಂಗಳೂರು
* ಐಹೊಳೆ ದುರ್ಯೋಧನ ಮಹಾಲಿಂಗಪ್ಪ - ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಬೆಂಗಳೂರು
* ನೆಹರೂ ಚನ್ನಬಸಪ್ಪ ಓಲೇಕಾರ್ - ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ & ಅನುಸೂಚಿತ ಬುಡಕಟ್ಟುಗಳ ಆಯೋಗ, ಬೆಂಗಳೂರು
* ನರಸಿಂಹ ನಾಯಕ್ (ರಾಜೂಗೌಡ) -ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ, ಬೆಂಗಳೂರು
* ಕಳಕಪ್ಪ ಬಂಡಿ -ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (KSSIDC), ಬೆಂಗಳೂರು
* ಶಂಕರ ಪಾಟೀಲ್ ಮುನೇನಕೊಪ್ಪ -ಕರ್ನಾಟಕ ಮೂಲಭೂತ ಸೌಕರ್ಯ ಅಭಿವೃದ್ಧಿ & ಹಣಕಾಸು ಸಂಸ್ಥೆ (KUIDFC), ಬೆಂಗಳೂರು
* ಮಾಡಾಳು ವಿರೂಪಾಕ್ಷಪ್ಪ - ಕರ್ನಾಟಕ ಸಾಬೂನು & ಮಾರ್ಜಕ ನಿಯಮಿತ, ಬೆಂಗಳೂರು
* ಸಿದ್ದು ಸವದಿ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ, ಹುಬ್ಬಳ್ಳಿ
ರಾಜ್ಯ ಸಚಿವ ದರ್ಜೆ
* ರಾಜಕುಮಾರ್ ಪಾಟೀಲ್ ತೇಲ್ಕೂರ್ -ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರಗಿ
* ಸಿ.ಎಸ್. ನಿರಂಜನ್ ಕುಮಾರ್ -ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಬೆಂಗಳೂರು
* ಸಿ.ಎಸ್. ಜಯರಾಮ್ -ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
* ಎನ್. ಲಿಂಗಣ್ಣ -ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು (ಲಿಡ್ಕರ್).
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.