
ಬೆಂಗಳೂರು(ಜೂ.11): ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. ಆದರೀಗ ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಡಿಕೆಶಿ ಪದಗ್ರಹಣಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಡಿಕೆಶಿ ಪದಗ್ರಹಣಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಕಾರಣವನ್ನು ವಿವರಿಸಿದ ಸಿಎಂ ಯಡಿಯೂರಪ್ಪ ಪದಗ್ರಹಣಕ್ಕೆ ಹೆಚ್ಚು ಜನ ಸೇರುವ ಉದ್ದೇಶದಿಂದ ಅನುಮತಿ ನೀಡಿರಲಿಲ್ಲ. ಕಡಿಮೆ ಜನ ಸೇರಿಸಿ ಯಾವಾಗ ಬೇಕಾದ್ರೂ ಪದಗ್ರಹಣ ಮಾಡಿಕೊಳ್ಳಲಿ. ಕೊರೊನಾ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರಲು ಅವಕಾಶ ನೀಡುತ್ತಿಲ್ಲ. ಇತಿಮಿತಿಯೊಳಗೆ ಕಾರ್ಯಕ್ರಮ ಮಾಡಿಕೊಳ್ಳಲು ಅಭ್ಯಂತರ ಇಲ್ಲ ಎಂದಿದ್ದಾರೆ.
ಮಾಡಿಯೇ ತೀರುತ್ತೇವೆಂದು ಸರ್ಕಾರದ ವಿರುದ್ಧ ತೊಡೆತಟ್ಟಿ ನಿಂತ ಸಿದ್ದರಾಮಯ್ಯ...!
ಕಾರ್ಯಕ್ರಮ ಜೂನ್ 14 ಕ್ಕೆ ಮಾಡಲ್ಲ: ಡಿಕೆಶಿ
ಇನ್ನು ಸಿಎಂ ಯಡಿಯೂರಪ್ಪ ಅನುಮತಿ ನೀಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಡಿಕೆಶಿ 'ಕಾರ್ಯಕ್ರಮ ಜೂನ್ 14 ಕ್ಕೆ ಮಾಡಲ್ಲ. ನಾನು ಸಿಎಲ್ಪಿ ಲೀಡರ್ ಸೇರಿದಂತೆ ರಾಷ್ಟ್ರ ಮಟ್ಟದ ನಾಯಕರ ಜತೆ ಚರ್ಚೆ ಮಾಡಬೇಕಿದೆ. ಬಳಿಕ ದಿನಾಂಕ ಘೋಷಣೆ ಮಾಡುತ್ತೇನೆ. ಕಾರ್ಯಕರ್ತರು ಸಿದ್ಧತೆ ಮುಂದೂವರೆಸಲಿ. ಇದು ನನ್ನ ಕಾರ್ಯಕ್ರಮ ಅಲ್ಲ, ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕ್ರಮ. ಹತ್ತು ಸಾವಿರ ಸ್ಥಳಗಳಲ್ಲಿ ಜನ ಸೇರಿ ಕಾರ್ಯಕ್ರಮ ವೀಕ್ಷಣೆ ಮಾಡ್ತಾರೆ. ಎಲ್ಲದಕ್ಕೂ ವ್ಯವಸ್ಥೆ ಮಾಡಬೇಕಿದೆ' ಎಂದಿದ್ದಾರೆ.
ಅಲ್ಲದೇ ಇದರ ನಡುವೆ ಪರಿಷತ್ ಚುನಾವಣೆ ಸಹ ಇದೆ. ಅದಕ್ಕೆ ಅಭ್ಯರ್ಥಿ ಗಳ ನೇಮಕ ಮಾಡಬೇಕಿದೆ. ಬಹಳ ಜವಾಬ್ದಾರಿ ಇದೆ. ಇದೆಲ್ಲದರ ಜತೆಗೆ ಕಾರ್ಯಕ್ರಮ ದಿನಾಂಕ ನಿಗದಿ ಮಾಡ್ತೀವಿ ಎಂದು ಡಿಕೆಶಿ ಸ್ಪಷ್ಟೀಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.