
ಬೆಂಗಳೂರು, (ಜು.12): ಸಿಎಂ ಗೃಹ ಕಚೇರಿ ಕೃಷ್ಣಾಕ್ಕೂ ಕೊರೋನಾ ವಕ್ಕರಿಸಿಕೊಂಡಿದ್ದರಿಂದ ಬಿಎಸ್ ಯಡಿಯೂರಪ್ಪ ಅವರು ಸ್ವಯಂ ಕ್ವಾರಂಟೈನ್ ಆಗಿದ್ದು. ಹೀಗಾಗಿ ಶುಕ್ರವಾರದಿಂದ ಕೆಲ ದಿನಗಳ ಕಾಲ ಯಡಿಯೂರಪ್ಪ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ.
ಈ ಮಧ್ಯೆ ಅವರು ಪುಸ್ತಕ ಓದುವ ಮೂಲಕ ಕಾಲ ಕಳೆಯುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್ವೈ, ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್ ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ. ಎಂದಿದ್ದಾರೆ.
ಸಿಎಂ ಬದಲಿ ಕಾರು ಚಾಲಕನಿಗೆ ವಕ್ಕರಿಸಿದ ಕೊರೋನಾ; BSY ಸೆಲ್ಫ್ ಕ್ವಾರಂಟೈನ್
ಕೊರೋನಾ ವೈರಸ್ ರಾಜ್ಯಕ್ಕೆ ಕಾಲಿಟ್ಟಾಗಿನಿಂದಲೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರಂತರವಾಗಿ ಮೀಟಿಂಗ್ ನಡೆಸುತ್ತಲೇ ಇದ್ದರು. ಈಗ ಕ್ವಾರಂಟೈನ್ನಿಂದಾಗಿ ಅವರಿಗೆ ಕೊಂಚ ಬಿಡುವು ಸಿಕ್ಕಂತಾಗಿದೆ.
ಆದರೂ ಬಿಎಸ್ವೈ ಮನೆಯಿಂದಲೇ ಎಲ್ಲವನ್ನೂ ನಿರ್ವಹಣೆ ಮಾಡುತ್ತಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.