ಸಿಎಂಗೆ ಹೈಕಮಾಂಡ್ ದಿಢೀರ್ ಬುಲಾವ್: ರಾಜ್ಯ ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ

By Suvarna News  |  First Published Jan 9, 2021, 10:22 PM IST

ಬಿಜೆಪಿ ಹೈಕಮಾಂಡ್ ದಿಢೀರ್ ಅಂತ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ ತುರ್ತು ಬುಲಾನ್ ನೀಡಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ.


ಬೆಂಗಳೂರು, (ಜ.09): ಸಿಎಂ ಬಿ.ಎಸ್.​ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದ್ದು, ನಾಳೆ ಅಂದ್ರೆ ಜ.10ರಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಭಾನುವಾರ ಬೆಳಗ್ಗೆ 8.20ಕ್ಕೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ದೆಹಲಿ ತಲುಪಲಿದ್ದಾರೆ. ಸಿಎಂ ದೆಹಲಿ ಪ್ರವಾಸದಲ್ಲಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ‌. ನಡ್ಡಾ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನ ಸಿಎಂ ಭೇಟಿಯಾಗಲಿದ್ದಾರೆ.

Tap to resize

Latest Videos

ಈ ಹಿನ್ನೆಲೆಯಲ್ಲಿ ಮಂತ್ರಿಯಾಗುಬೇಕೆಂದು ಬಹುದಿನಗಳಿಂದ ಕಾದು ಕುಳಿತ್ತಿದ್ದ ಸಚಿವಾಕಾಂಕ್ಷಿಗಳಲ್ಲಿ ಆಸೆ ಚಿಗುರೊಡೆದಿದೆ. ಮತ್ತೊಂದೆಡೆ ಅಮಿತ್ ಶಾ ರಾಜ್ಯ ಪ್ರವಾಸ ಮಾಡುತ್ತಿರುವ ಬಗ್ಗೆ ಚರ್ಚಿಸಲು ಬುಲಾವ್ ನೀಡಲಾಗಿದೆ ಎನ್ನಲಾಗುತ್ತಿದೆ.

ರಾಜ್ಯಕ್ಕೆ ಅಮಿತ್ ಶಾ ಬರೋದು ಫಿಕ್ಸ್: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು

ಇನ್ನೂ ಸಿಎಂ ಬಿಎಸ್​ವೈಗೆ ಸಂಪುಟ ವಿಸ್ತರಣೆ ಬಗ್ಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸದ ವೇಳೆ ಸಂಪುಟ ವಿಸ್ತರಣೆಗೆ ಅನುಮತಿ ಕೊಡುತ್ತಾರೆ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ದಿಢೀರ್ ಅಂತಾ ಯಡಿಯೂರಪ್ಪಗೆ ಬರುವಂತೆ ಹೈಕಮಾಂಡ್ ನಾಯಕರು ಹೇಳಿರೋದು ತೀವ್ರ ಕುತೂಹಲ ಮೂಡಿಸಿದೆ.

 ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ತೆರಳಲಿರುವ ಸಿಎಂ, ಸಚಿವಾಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನ ಹೊತ್ತು ತರಲಿದ್ದಾರಾ ಎನ್ನುವುದನ್ನು ಕಾದುನೋಡಬೇಕಿದೆ.

click me!