
ಬೆಂಗಳೂರು (ಜು.1): ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಇನ್ನೂ ಕೂಡ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ. ಭಾನುವಾರ ಘೋಷಣೆ ಮಾಡುವ ಸಾಧ್ಯತೆಯಿದೆ. ಈ ಪೈಕಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಮುಂಚೂಣಿಯಲ್ಲಿದೆ. ನಂತರದ ಸ್ಥಾನದಲ್ಲಿ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವರಾದ ಆರ್.ಅಶೋಕ್, ವಿ.ಸುನೀಲ್‌ಕುಮಾರ್, ಶಾಸಕ ಅರವಿಂದ ಬೆಲ್ಲದ ಅವರ ಹೆಸರುಗಳು ಪ್ರಸ್ತಾಪವಾಗಿವೆ.
Resort Politics: ಹುಟ್ಟುಹಬ್ಬದ ನೆಪವೊಡ್ಡಿ ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ತಂಗಿದ ಬಿಜೆಪಿ
ಇವೆಲ್ಲದರ ನಡುವೆ ನಾಳೆ ನಡೆಸಲು ಉದ್ದೇಶಿಸಲಾಗಿದ್ದ, ಬಿಜೆಪಿ ಶಾಸಕಾಂಗ ಸಭೆ ನಡೆಯುತ್ತಿಲ್ಲ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಬುಲವ್ ಹಿನ್ನೆಲೆ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ನಾಳೆ 2 ಗಂಟೆಗೆ ಬಿಎಸ್ ವೈ ದೆಹಲಿಗೆ ತಲುಪಲಿದ್ದು, 3 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಸಭೆ ನಡೆಸಲಿದ್ದಾರೆ. ದೆಹಲಿಯಲ್ಲೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿದ್ದು, ನಾಳೆಯೇ ಘೋಷಣೆ ಆಗಲಿದೆ. ಭಾನುವಾರ ಬಿಎಸ್ ವೈ ದೆಹಲಿಯಲ್ಲೇ ಉಳಿಯಲಿದ್ದು, ರಾಜ್ಯಾಧ್ಯಕ್ಷರ ಆಯ್ಕೆ, ವಿಪಕ್ಷ ನಾಯಕನ ಆಯ್ಕೆ ಹಾಗು ಕೇಂದ್ರ ಸಂಪುಟ ವಿಸ್ತರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇವೆಲ್ಲದರ ನಡುವೆ ಯಡಿಯೂರಪ್ಪ ಮುಂದೆ ಕೆಲವು ಶಾಸಕರ ಕೆಲವು ತಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾರೆ. ಕೆಲವರು ಬೊಮ್ಮಾಯಿ ಬಿಟ್ಟು ಬೇರೆ ಯಾರನ್ನಾದರೂ ವಿಪಕ್ಷ ನಾಯಕನನ್ನಾಗಿ ಮಾಡಿ ಎಂದು ಸಲಹೆ ನೀಡಿದ್ದಾರಂತೆ. ಯತ್ನಾಳ್ ಪರವೂ ಬಹುತೇಕ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವು ಶಾಸಕರು, ಸುರೇಶ್ ಕುಮಾರ್ ಹೆಸರು ನೀಡಿದ್ದಾರೆ. ಇನ್ನು ಕೆಲವು ಶಾಸಕರು ಡಾ. ಅಶ್ವಥ್ ನಾರಾಯಣ ಹೆಸರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಸುನೀಲ್ ಕುಮಾರ್ ಆದರೂ ಪರ್ವಾಗಿಲ್ಲ ಎಂದು ಇನ್ನು ಕೆಲವು ಶಾಸಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ ಎನ್ನಲಾಗಿದೆ. ಎಲ್ಲದಕ್ಕೂ ನಾಳೆ ದೆಹಲಿಯಿಂದ ಸ್ಪಷ್ಟ ಉತ್ತರ ಸಿಗಲಿದೆ.
ಕೊಡಗಿನಲ್ಲಿ ಬೀಡುಬಿಟ್ಟು ಎನ್‌ಡಿಆರ್‌ಎಫ್ ತಂಡ ತಾಲೀಮು, ಭೂಕುಸಿತದಲ್ಲಿ
ಇನ್ನು ಇಷ್ಟೆಲ್ಲ ಬೆಳವಣಿಗೆ ಮಧ್ಯೆ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಆಯ್ಕೆ ಗೊಂದಲದಲ್ಲಿರುವ ಬಿಜೆಪಿಯನ್ನು ಕಾಂಗ್ರೆಸ್ ಪಕ್ಷ ಅಣಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.