ಬಿಎಸ್‌ವೈ-ಸಿದ್ದು ಒಂದೇ ವಿಮಾನದಲ್ಲಿ ಪ್ರಯಾಣ

By Kannadaprabha NewsFirst Published Oct 27, 2019, 10:32 AM IST
Highlights

ಬಿ.ಎಸ್‌. ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿವರೆಗೂ ಪ್ರಯಾಣಿಸಿದರು.
 

ಹುಬ್ಬಳ್ಳಿ [ಅ.27]:  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿವರೆಗೂ ಪ್ರಯಾಣಿಸಿದರು.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಹುಬ್ಬಳ್ಳಿಯಲ್ಲಿ ವಿಮಾನ ಇಳಿಯುವಾಗ ಒಬ್ಬರಿಗೊಬ್ಬರು ನಗು ಮುಖದಿಂದ ಪರಸ್ಪರ ಹಸ್ತಲಾಘವ ಮಾಡಿದರೂ, ಮಾಧ್ಯಮಗಳೊಂದಿಗೆ ಮಾತನಾಡುವಾಗ ಪರಸ್ಪರ ವಾಗ್ದಾಳಿ ನಡೆಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಮಾನ ಇಳಿಯುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಪೊಲೀಸ್‌ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿ ಹೊರ ಬಂದು ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದರು. ಬಳಿಕ ನಿಲ್ದಾಣದಿಂದ ಹೊರಬಂದ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಗದಗ ಜಿಲ್ಲೆಯತ್ತ ಹೊರಟರು.

ಇದೇ ವಿಮಾನದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ, ಸಚಿವ ಸಿ.ಸಿ. ಪಾಟೀಲ್‌, ಸಂಸದ ಶಿವಕುಮಾರ ಉದಾಸಿ, ಶಾಸಕ ಅರವಿಂದ ಲಿಂಬಾವಳಿ, ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ ಸೇರಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿಯ ಹಲವು ಗಣ್ಯರಿದ್ದರು.

click me!