ಬಿಎಸ್‌ವೈ ಅವರೇ ಸಿಎಂ: 100% ವರಿಷ್ಠರ ಅಭಿಪ್ರಾಯ!

By Suvarna News  |  First Published Jun 13, 2021, 7:42 AM IST

* ನಾಯಕತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿಕೆ

* ಬಿಎಸ್‌ವೈ ಅವರೇ ಸಿಎಂ: 100% ವರಿಷ್ಠರ ಅಭಿಪ್ರಾಯ

* ಹೈಕಮಾಂಡ್‌ ನಿಲುವೇ ಅರುಣ್‌ ಸಿಂಗ್‌ ಹೇಳಿಕೆ: ಡಿವಿಎಸ್‌


ಬೆಂಗಳೂರು(ಜೂ.13): ನಾಯಕತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೀಡಿರುವ ಹೇಳಿಕೆ ನೂರಕ್ಕೆ ನೂರರಷ್ಟುಹೈಕಮಾಂಡ್‌ ಅಭಿಪ್ರಾಯವೇ ಆಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಶಿವಮೊಗ್ಗ : ಜೂನ್‌ ಅಂತ್ಯಕ್ಕೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ

Tap to resize

Latest Videos

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಅರುಣ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷದಿಂದ ಪ್ರತಿ ರಾಜ್ಯಕ್ಕೂ ಉಸ್ತುವಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಹೈಕಮಾಂಡ್‌ನಿಂದ ಸಂದೇಶ ಪಡೆದ ಬಳಿಕವೇ ಉಸ್ತುವಾರಿಗಳು ಅದನ್ನು ಆಯಾ ರಾಜ್ಯಗಳಿಗೆ ತಲುಪಿಸುತ್ತಾರೆ. ಈ ಹಿನ್ನೆಲೆಯಲ್ಲಿಯೇ ಸಿಂಗ್‌ ಅವರು ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆ ಎಂದಿದ್ದಾರೆ ಎಂದು ತಿಳಿಸಿದರು.

3ನೇ ಅಲೆ ಎದುರಿಸಲು ಸರ್ಕಾರ ಸಿದ್ಧ : ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ

ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಗುರುವಾರವಷ್ಟೇ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡುವ ಪ್ರಸ್ತಾಪವೇ ಪಕ್ಷದ ಹೈಕಮಾಂಡ್‌ ಮುಂದಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದುವರೆಯಲಿದ್ದಾರೆ ಎಂದು ಹೇಳಿದ್ದರು.

click me!