ಯಡಿಯೂರಪ್ಪ ವಿದೇಶ ಪ್ರವಾಸ, ಸಿದ್ದರಾಮಯ್ಯ ದಿಢೀರ್ ದಿಲ್ಲಿಗೆ..!

By Suvarna News  |  First Published Jun 21, 2022, 12:13 PM IST

ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ ಆಗಿದ್ರೆ, ಬಿಎಸ್ ಯಡಿಯೂರಪ್ಪ ಅವರು ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಕಾಂಗ್ರೆಸ್ ಸಿದ್ದರಾಮಯ್ಯಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.


ಬೆಂಗಳೂರು, (ಜೂನ್.21): ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನದ ಕರ್ನಾಟಕ ಪ್ರವಾಸ ಮುಗಿಸಿ ವಾಪಸ್ ದೆಹಲಿಗೆ ತೆರಳಿದ್ದಾರೆ. ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪಪ್ಪ ಅವರು ವಿದೇಶ ಪ್ರವಾಸ ಕೈಗೊಂಡಿದ್ರೆ, ಇನ್ನೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯಗೆ ದೆಹಲಿಗೆ ಬರುವಂತೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ.

ಹೌದು....ಇಂದು(ಮಂಗಳವಾರ) ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ ನ ಎಲ್ಲಾ ಎಂಎಲ್‌ಸಿಗಳೂ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೆರಳಿದ್ದು, ಇಂದು ಸಂಜೆಯೊಳಗೆ ಎಲ್ಲಾ ಕಾಂಗ್ರೆಸ್ ನಾಯಕರು ದೆಹಲಿಗೆ ಬರುವಂತೆ ಸೂಚನೆ ನೀಡಿರುವುದು ಕುತೂಹಲ ಮೂಡಿಸಿದೆ.

Tap to resize

Latest Videos

2 ದಿನದ ರಾಜ್ಯ ಪ್ರವಾಸ ಅಂತ್ಯ: ಮೈಸೂರಿನಿಂದ ಕೇರಳ ಬದಲಿಗೆ ದೆಹಲಿಯತ್ತ ಹೊರಟ ಮೋದಿ

ನಾಳೆ(ಬುಧವಾರ) ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯ ಕಾಂಗ್ರೆಸ್ ನ ಎಲ್ಲಾ ಶಾಸಕರೂ, ಎಂಎಲ್ ಸಿಗಳು ದೆಹಲಿಗೆ ಆಗಮಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಇನ್ನು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಯಂದ ಡಿಸ್ಚಾರ್ಜ್ ಆಗಿದ್ದ, ರಾಹಲ್ ಗಾಂಧಿ ಅವರು ಇಡಿ ವಿಚಾರಣೆಗೆ ಹಾಜರಾಗಲಿದ್ದು, ಅವರ ಭವಿಷ್ಯ ಏನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಇದೀಗ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನ ಬರಲು ಹೇಳಿರುವುದು ತೀವ್ರ ಕುತೂಹಲ ಮೂಡಿಸಿದೆ.

ವಿದೇಶ ಪ್ರವಾಸ ಹೊರಟ ಬಿಎಸ್‌ವೈ
 ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು(ಜೂನ್.21) ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದರು. ಕುಟುಂಬ ಸಮೇತ ಲಂಡನ್‌ಗೆ ತೆರಳಿದ ಯಡಿಯೂರಪ್ಪ ಐದು ದಿನಗಳ ಕಾಲ ಪ್ರವಾಸ ಮಾಡಲಿದ್ದಾರೆ. ನಂತರ ಬೆಂಗಳೂರಿಗೆ ಹೊರಬರಲಿದ್ದಾರೆ. ಯಡಿಯೂರಪ್ಪ ಜೊತೆ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡಾ ಲಂಡನ್ ಪ್ರವಾಸ ಕೈಗೊಂಡಿದ್ದಾರೆ.

click me!