ಬಿಎಸ್‌ವೈ ಕೆಳಗಿಳಿಸಲು ತೀವ್ರ ಲಾಭಿ: ಬಿಜೆಪಿ ಹಿರಿಯರೇ ನನ್ನ ಬಳಿ ಹೇಳಿದ್ದಾರೆ ಎಂದ ಜೆಡಿಎಸ್ ನಾಯಕ

By Suvarna News  |  First Published Sep 13, 2020, 3:54 PM IST

ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ವಿಚಾರವನ್ನು ಬಿಜೆಪಿಯ ಹಿರಿಯ ಮುಖಂಡರೇ ತಮ್ಮ ಬಳಿ ಹೇಳಿದ್ದಾರೆ ಎಂದು ಜೆಡಿಎಸ್ ಹಿರಿಯ ನಾಯಕ ಸ್ಫೋಟಕ ಹೇಳಿಕೆ ನೀಡಿ, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.


ಹುಬ್ಬಳ್ಳಿ, (ಸೆ.13): ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಆಡಳಿತ ಬಿಜೆಪಿಯಲ್ಲೇ ಲಾಬಿ ಬಿರುಸುಗೊಂಡಿದೆ. ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ವಿಚಾರವನ್ನು ಬಿಜೆಪಿಯ ಹಿರಿಯ ಮುಖಂಡರೇ ತಮ್ಮ ಬಳಿ ಹೇಳಿದ್ದಾರೆ ಎಂದು ಜೆಡಿಎಸ್ ಹಿರಿಯ ನಾಯಕ, ಮಾಜಿ ಸಚಿವ ಬಸವರಾಜ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ಬಹಳವಾಗಿ ನಡೆಯುತ್ತಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದು, ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವುದು ಸರಿಯಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

Latest Videos

undefined

ರಾಜಾಹುಲಿಗೆ ರಾಜಾಹುಲಿಯೇ ಸಾಟಿ; ಕರ್ನಾಟಕದಲ್ಲಿ ಬಿಎಸ್‌ವೈಗೆ ಇಲ್ಲ ಪೈಪೋಟಿ..!

ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದು ಬಿ.ಎಸ್. ಯಡಿಯೂರಪ್ಪ. ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವುದು ಸರಿಯಲ್ಲ ಎಂದು ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಯಾಗುತ್ತಿದೆ. ಯಡಿಯೂರಪ್ಪನವರನ್ನ ಬದಲಾವಣೆ ಮಾಡುವ ಲಾಬಿ ಜೋರಾಗಿ ನಡೆಯುತ್ತಿದೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.

ಮುಖ್ಯಮಂತ್ರಿ ಬದಲಾಗ್ತಾರೆ ಅನ್ನೋ ವಿಚಾರವನ್ನ ಬಿಜೆಪಿಯ ಹಿರಿಯ ಮುಖಂಡರೊಬ್ಬರು ನನಗೆ ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗ್ತಾರೆ ಎನ್ನುವ ವಿಚಾರವಾಗಿ ನನ್ನ ಜೊತೆ ಬಿಜೆಪಿ ಮುಖಂಡರು ಚರ್ಚೆ ಮಾಡಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಬಿಎಸ್‌ವೈರನ್ನು ಭೇಟಿ ಆಗಿರಬೇಕು. ರಾಜ್ಯದ ಹಿತದೃಷ್ಟಿಯಿಂದ ಕುಮಾರಸ್ವಾಮಿಯವರು ಯಡಿಯೂರಪ್ಪನವರ ಜೊತೆ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪನವರು ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮಿಸಿದ್ದಾರೆ. ಮುಖ್ಯಮಂತ್ರಿಯಾಗಿ ಇದು ಅವರ ಕೊನೆಯ ಅವಧಿ. ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವುದು ಸರಿಯಲ್ಲ ಎಂದು ಹೊರಟ್ಟಿ ಹೇಳಿದರು.

click me!