ನಳಿನ್ ಕುಮಾರ್ ಕಟೀಲ್ ಮಾತಿಗೆ ಯಡಿಯೂರಪ್ಪ ಬೇಸರ

Published : Oct 20, 2021, 07:50 PM IST
ನಳಿನ್ ಕುಮಾರ್ ಕಟೀಲ್ ಮಾತಿಗೆ ಯಡಿಯೂರಪ್ಪ ಬೇಸರ

ಸಾರಾಂಶ

* ನಳಿನ್ ಕುಮಾರ್ ಕಟೀಲ್ ಮಾತಿಗೆ ಯಡಿಯೂರಪ್ಪ ಬೇಸರ * ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತಂತೆ ಹೇಳಿಕೆ ನೀಡಿದ್ದ ನಳೀನ್ ಕುಮಾರ್  ಕಟೀಲ್ * ಇದು ಸಮರ್ಥನಿಯವಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ವಿಜಯಪುರ, (ಅ.20): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಕುರಿತಂತೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್  ಕಟೀಲ್ (Nalin Kumar Kateel) ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ಸಿಂಧಗಿ ಉಪಚುನಾವಣೆ ಪ್ರಯುಕ್ತ ಇಂದು (ಅ.20 ) ಮೊರಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ(BS Yediyurappa), ಕಟೀಲ್ ಅವರು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ ಅವರನ್ನ ಡ್ರಗ್ ಪೆಡ್ಲರ್ (Drug Peddler) ಎಂದಿರುವುದು ಸೂಕ್ತವಲ್ಲ. ಈ ರೀತಿ ಅಗೌರವದಿಂದ ಮಾತನಾಡಿರುವುದು ಸಮರ್ಥನಿಯವಲ್ಲ ಎಂದರು.

ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಭಾಷಣ

ಆ ರೀತಿ ಯಾರ ಬಗ್ಗೆನೂ ಮಾತನಾಡಬಾರದು. ಆ ರೀತಿ ಮಾತನಾಡುವ ಅಗತ್ಯವಿಲ್ಲ. ರಾಹುಲ್ ಅವರಿಗೂ ಒಂದು ಗೌರವವಿದೆ. ಅಗೌರ ತರುವ ಹಾಗೇ ಯಾರು ಮಾತನಾಡಬಾರದು ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ನಿನ್ನೆ (ಅ.19) ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್, ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್ ಪೆಡ್ಲರ್. ಅವರು ಹೇಗೆ ದೇಶವನ್ನು ಮುನ್ನಡೆಸುತ್ತಾರೆ? ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ಪಕ್ಷ ನಾಯಕತ್ವ ರಹಿತವಾಗಿದೆ ಮತ್ತು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಡುವೆ ತೀವ್ರ ಸ್ಪರ್ಧೆ ಇತ್ತು. ಪಕ್ಷವನ್ನು ನಡೆಸಲು ಸಾಧ್ಯವಾಗದ ಈ ವ್ಯಕ್ತಿಗಳು ದೇಶವನ್ನು ಹೇಗೆ ನಡೆಸುತ್ತಾರೆ ಎಂದು ಪ್ರಶ್ನಿಸಿದ್ದರು.

ರಾಹುಲ್‌ ಗಾಂಧಿ ಡ್ರಗ್‌ ಅಡಿಕ್ಟ್‌: ಕಟೀಲ್‌ ಹೇಳಿಕೆಗೆ ಬಿಜೆಪಿ ಸಮರ್ಥನೆ

ರಾಹುಲ್ ಗಾಂಧಿ ಡ್ರಗ್ಸ್ ಅಡಿಕ್ಟ್, ಪೆಡ್ಲರ್ ಎಂದು ವರದಿ’ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ