ವಿಪಕ್ಷಗಳ ಗೈರಿನಲ್ಲಿ ಮೇಲ್ಮನೆಯಲ್ಲೂ ಬಜೆಟ್‌ ಪಾಸ್‌

By Kannadaprabha News  |  First Published Jul 22, 2023, 12:30 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧೇಯಕವನ್ನು ಮಂಡಿಸಿ ಅಂಗೀಕರಿಸುವಂತೆ ಸದನಕ್ಕೆ ಮನವಿ ಮಾಡಿದರು. 3.41 ಲಕ್ಷ ಕೋಟಿ ರು. ಮೊತ್ತದ ಬಜೆಟ್‌ ಮಂಡಿಸಲಾಗಿದ್ದು, ಇದರ ಅನುಷ್ಠಾನಕ್ಕೆ ಧನವಿಯೋಗ ವಿಧೇಯಕ ಅಂಗೀಕಾರ ಪಡೆಯುವುದು ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಕರ್ನಾಟಕ ಧನವಿಯೋಗ ವಿಧೇಯಕ-2023 ಅನ್ನು ಅಂಗೀಕರಿಸಲಾಯಿತು. 


ವಿಧಾನ ಪರಿಷತ್‌(ಜು.22): ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ಸದಸ್ಯರ ಗೈರು ಹಾಜರಿಯಲ್ಲೇ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿ ಬಂದಿದ್ದ ಕರ್ನಾಟಕ ಧನವಿನಿಯೋಗ ವಿಧೇಯಕ-2023 ವಿಧಾನ ಪರಿಷತ್‌ನಲ್ಲಿ ಅಂಗೀಕಾರಗೊಂಡಿತು.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧೇಯಕವನ್ನು ಮಂಡಿಸಿ ಅಂಗೀಕರಿಸುವಂತೆ ಸದನಕ್ಕೆ ಮನವಿ ಮಾಡಿದರು. 3.41 ಲಕ್ಷ ಕೋಟಿ ರು. ಮೊತ್ತದ ಬಜೆಟ್‌ ಮಂಡಿಸಲಾಗಿದ್ದು, ಇದರ ಅನುಷ್ಠಾನಕ್ಕೆ ಧನವಿಯೋಗ ವಿಧೇಯಕ ಅಂಗೀಕಾರ ಪಡೆಯುವುದು ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಕರ್ನಾಟಕ ಧನವಿಯೋಗ ವಿಧೇಯಕ-2023 ಅನ್ನು ಅಂಗೀಕರಿಸಲಾಯಿತು. ರಾಜ್ಯಸ್ವ 2.61 ಲಕ್ಷ ಕೋಟಿ ಮತ್ತು ಬಂಡವಾಳ 79.85 ಸಾವಿರ ಕೋಟಿ ರು. ಸೇರಿಸಿ ಒಟ್ಟು 3.41 ಲಕ್ಷ ಕೋಟಿ ರು. ಮೊತ್ತದ ಬಜೆಟ್‌ ಅನುಷ್ಠಾನಕ್ಕೆ ಸದನವು ಒಪ್ಪಿಗೆ ನೀಡಿತು.

Tap to resize

Latest Videos

ಮರಳು ಮಾಫಿಯಾದಿಂದ ಪೇದೆ ಹತ್ಯೆ: ವಿಧಾನ ಪರಿಷತ್‌ನಲ್ಲಿ ಬಿಜೆಪಿ ಧರಣಿ

ಅದಕ್ಕೂ ಮುನ್ನ ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳಿಗೆ 13500 ಕೋಟಿ ರು. ಹೆಚ್ಚುವರಿ ತೆರಿಗೆ ಸಂಗ್ರಹ ಗುರಿ, 8068 ಕೋಟಿ ರು. ಹೆಚ್ಚುವರಿ ಸಾಲ, ಬಂಡವಾಳ ಯೋಜನೆಗಳ ಮರು ಆದ್ಯತೆ ನಿಗದಿ ಮೂಲಕ 6086 ಕೋಟಿ ರು. ಹಾಗೂ ರಾಜಸ್ವ ಯೋಜನೆಗಳ ಮರು ಆದ್ಯತೆ ನಿಗದಿ ಪಡಿಸುವ ಮೂಲಕ 7000 ಕೋಟಿ ರು. ಸೇರಿದಂತೆ ಒಟ್ಟು 34,654 ಕೋಟಿ ರು. ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಆಯವ್ಯಯದ ಗಾತ್ರ 326747 ಕೋಟಿ ರು.ಗಳಷ್ಟಿದ್ದು, 2022-23ರ ಆಯವ್ಯಯ ಗಾತ್ರಕ್ಕಿಂತ ಶೇ.22ರಷ್ಟುಹೆಚ್ಚಳವಾಗಿದೆ. ವಿತ್ತೀಯ ಕೊರತೆ ಶೇ.2.6ರಷ್ಟಿದ್ದು, ಸಾಲದ ಪ್ರಮಾಣ ಜಿಎಸ್‌ಡಿಪಿಯ ಶೇ.22ರಷ್ಟಿದೆ. ಆದ್ದರಿಂದ ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ವಿತ್ತೀಯ ಶಿಸ್ತನ್ನು ನಿರ್ಧರಿಸುವ ಎರಡು ಮಾನದಂಡಗಳನ್ನು ನಮ್ಮ ಸರ್ಕಾರ ಪಾಲನೆ ಮಾಡಿದೆ. ಈ ಬಾರಿ 15,523 ಕೋಟಿ ರು. ಕೊರತೆ ಬಜೆಟ್‌ ಮಂಡಿಸಲಾಗಿದ್ದು, ಗ್ಯಾರಂಟಿ ಯೋಜನೆಗಳ ಕಾರಣದಿಂದ ಕೊರತೆ ಬಜೆಟ್‌ ಮಂಡಿಸಲಾಗಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ, ಕೊರತೆ ಪ್ರಮಾಣ ಕಡಿಮೆಯಾಗಿದೆ. ಮುಂದಿನ ಬಾರಿ ಉಳಿತಾಯ ಬಜೆಟ್‌ ಮಂಡಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

click me!