ಉದ್ಯಮಿ ಮೋಹನದಾಸ್ ಪೈ ಸಲಹೆ ಕೊಡಲಿ, ಟೀಕೆ ಮಾಡದಿರಲಿ: ಸಚಿವ ಎಂ‌.ಬಿ. ಪಾಟೀಲ ಎಚ್ಚರಿಕೆ

Published : Feb 27, 2025, 01:01 PM ISTUpdated : Feb 27, 2025, 01:09 PM IST
ಉದ್ಯಮಿ ಮೋಹನದಾಸ್ ಪೈ ಸಲಹೆ ಕೊಡಲಿ, ಟೀಕೆ ಮಾಡದಿರಲಿ: ಸಚಿವ ಎಂ‌.ಬಿ. ಪಾಟೀಲ ಎಚ್ಚರಿಕೆ

ಸಾರಾಂಶ

ಉದ್ಯಮಿ ಮೋಹನದಾಸ್ ಪೈ ಅವರ ಟೀಕೆಗೆ ಸಚಿವ ಎಂ.ಬಿ. ಪಾಟೀಲ ತಿರುಗೇಟು ನೀಡಿದ್ದಾರೆ. ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ನೀಡುವಂತೆ ತಿಳಿಸಿದ್ದಾರೆ. ಬೆಂಗಳೂರು 'ಗ್ರೋಯಿಂಗ್ ಸಿಟಿ' ಜತೆಗೆ 'ಗ್ಲೋಬಲ್ ಸಿಟಿ' ಕೂಡ ಆಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು (ಫೆ.27): ಉದ್ಯಮಿ ಮೋಹನದಾಸ್ ಪೈ ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ  ಸಚಿವ ಎಂ.ಬಿ. ಪಾಟೀಲ ಕುಟುಕಿದ್ದಾರೆ.

ಗುರುವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಪೈ ಕೂಡ ಬೆಂಗಳೂರಿನಿಂದಲೇ ಲಾಭ ಮಾಡಿಕೊಂಡಿರುವವರು. ಇಲ್ಲಿಂದಲೇ ಎಲ್ಲವನ್ನೂ ಪಡೆದುಕೊಂಡಿರುವವರು. ಈಗ ಅವರು ಇಲ್ಲಿಂದ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗಲು ತಯಾರಿಲ್ಲ' ಎಂದು ಹರಿಹಾಯ್ದಿದ್ದಾರೆ.

ಸಂಚಾರ ದಟ್ಟಣೆ ಬರೀ ಬೆಂಗಳೂರಿನ ಸಮಸ್ಯೆಯಲ್ಲ. ಲಂಡನ್, ಸ್ಯಾನ್ ಫ್ರಾನ್ಸಿಸ್ಕೊ, ಚೆನ್ನೈ ಎಲ್ಲ ಕಡೆಗಳಲ್ಲೂ ಇದೆ. ಈ ಬಗ್ಗೆ ಪೈ ಯಾಕೆ ಮಾತನಾಡುವುದಿಲ್ಲ? ಲಂಡನ್ನಿನಲ್ಲಿ ನಾನೇ ಒಂದೂವರೆ ಮೈಲುದ್ದದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹದಿನೈದಿಪ್ಪತ್ತು ಮೈಲಿ ಸಂಚಾರ ದಟ್ಟಣೆ ಸೃಷ್ಟಿಯಾಗಿದ್ದಿದೆ ಎಂದು ತಿರುಗೇಟು ನೀಡಿದರು. 

ಬೆಂಗಳೂರು 'ಗ್ರೋಯಿಂಗ್ ಸಿಟಿ'ಯ ಜತೆಗೆ 'ಗ್ಲೋಬಲ್ ಸಿಟಿ' ಕೂಡ ಆಗಿದೆ. ಹೀಗಾಗಿಯೇ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ಮೋದಿ ಸರಕಾರ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಸರಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವುದಲ್ಲ. ಇಂತಹ ಟೀಕೆಗಳಿಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬದ್ಧವೈರಿ ಡಿ.ಕೆ.ಶಿವಕುಮಾರ್ ಹಾಡಿ ಹೊಗಳಿದ ಕೆ.ಎಸ್.ಈಶ್ವರಪ್ಪ: ರಾಜ್ಯ ರಾಜಕಾರಣದಲ್ಲಿ ಸಂಚಲನ?

ಯಾರೇ ಆಗಲಿ, ಸರಕಾರಕ್ಕೆ  ರಚನಾತ್ಮಕ ಸಲಹೆ ಕೊಡಬಹುದು. ಪೈ ಅವರು ನನ್ನನ್ನಗಾಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಗಳನ್ನಾಗಲಿ ಅಥವಾ ಐಟಿ ಸಚಿವರನ್ನೇ ಆಗಲಿ ಕಾಣಬಹುದು. ಇದೇ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ ಆಗ ಇಡೀ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ‌ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ. ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಪಾಟೀಲ ನೆನಪಿಸಿದ್ದಾರೆ.

ತೆಲಂಗಾಣಕ್ಕೆ ಕೃಷ್ಣಾ ನೀರು, ತಪ್ಪೇನಿಲ್ಲ: ಕುಡಿಯುವ ನೀರಿನ ಉದ್ದೇಶಕ್ಕಾಗಿ ಆಲಮಟ್ಟಿ ಆಣೆಕಟ್ಟೆಯಿಂದ ತೆಲಂಗಾಣಕ್ಕೆ 1.24 ಟಿಎಂಸಿ ಅಡಿ ನೀರನ್ನು ಬಿಟ್ಟಿರುವುದರಲ್ಲಿ ತಪ್ಪೇನೂ‌ ಇಲ್ಲ. ಕೆಲವೊಂದು ವಿಚಾರಗಳನ್ನು ನಾವು ಮಾನವೀಯವಾಗಿ ನೋಡಬೇಕಾಗುತ್ತದೆ ಎಂದು ಸಚಿವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ