
ನವದೆಹಲಿ (ಜು.29): ಗೃಹ ಸಚಿವ ಆರಗ ಜ್ಞಾನೇಂದ್ರ ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕಿತ್ತು, ಆದರೆ ಅವರೇ ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಟೀಕಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗೃಹ ಮಂತ್ರಿಗಳು ಕಣ್ಣೀರು ಹಾಕುತ್ತಿರುವುದು ಇದೇ ಮೊದಲು.
ಇವರಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯ ಆಗ್ತಿಲ್ಲ. ಅವರು ರಾಜೀನಾಮೆ ನೀಡಿ ಹೋಗಬೇಕು ಎಂದು ಒತ್ತಾಯಿಸಿದರು. ಬರೀ ಬಾಯಿ ಮಾತಿಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ, ಆದರೆ ಯಾವುದೇ ಕ್ರಮ ಆಗಿಲ್ಲ. ಇಡೀ ರಾಜ್ಯದಲ್ಲಿ ಗಲಾಟೆ ಎಬ್ಬಿಸಿ, ಶಾಂತಿ ಕದಡಿದ್ರಿ, ವಿದ್ಯಾರ್ಥಿಗಳು ಮನಸ್ಸು ಕೆಡಿಸಿದ್ರಿ. ನಿಮ್ಮ ಪಕ್ಷದ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ, ಇದೇ ನಿಮ್ಮ ಸರ್ಕಾರದ ಸಾಧನೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕೋಮುವಾದಿ ಮಟ್ಟ ಹಾಕಲು ಯೋಗಿ ಮಾದರಿ ಆಡಳಿತ ಅಗತ್ಯ: ನಾರಾಯಣ ಸಾ ಭಾಂಡಗೆ
ಸರ್ಕಾರ ವಿರುದ್ಧ ತೀವ್ರ ಆಕ್ರೋಶ: ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಹಿಂದೂ ಹಿತರಕ್ಷಣಾ ಸಮಿತಿಯ ನೂರಾರು ಕಾರ್ಯಕರ್ತರು ಟೌನ್‌ಹಾಲ್ ಎದುರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಚಿಂತಕ ಚಕ್ರವರ್ತಿ ಸೂಲಿಬೆಲೆ, ನಮ್ಮ ರಾಜ್ಯದಲ್ಲಿ ಉತ್ತರ ಪ್ರದೇಶದ ಪರಿಸ್ಥಿತಿ ಇಲ್ಲ ಎಂದುಕೊಂಡಿದ್ದೆ. ಆದರೆ ಈ ರೀತಿಯ ಹತ್ಯೆಗಳನ್ನು ನೋಡಿದರೆ ಪರಿಸ್ಥಿತಿ ಕೈ ಮೀರಿದೆ ಎಂದೆನಿಸುತ್ತಿದೆ. ಹೀಗಾಗಿ ಹಂತಕರಿಗೆ ಉತ್ತರ ಪ್ರದೇಶ ಮಾದರಿಯ ಶಿಕ್ಷೆ ಆಗಬೇಕು. ಅವರ ಮೂರು ತಲೆಮಾರಿಗೆ ಆಗುವಷ್ಟುಶಿಕ್ಷೆ ಹಂತಕರಿಗೆ ಸಿಗಬೇಕು ಎಂದು ಆಗ್ರಹಿಸಿದರು.
ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕು ಎಂದರೆ ಸರ್ಕಾರ ಏನಕ್ಕೆ ಬೇಕು? ಹತ್ಯೆ ಪ್ರಶ್ನೆ ಮಾಡಿದವರ ಮೇಲೆ ಲಾಠಿ ಬೀಸಲಾಗಿದೆ. ರಾಜ್ಯ ಸರ್ಕಾರದ ಕೈಯಲ್ಲಿ ಏನು ಆಗಲ್ಲ. ಕೊನೆಗೆ ನರೇಂದ್ರ ಮೋದಿ ಏನಾದರೂ ಮಾಡುತ್ತಾರೆಯೇ ಎಂದು ಕಾಯುತ್ತಿದ್ದೇವೆ ಎಂದರು. ಇಬ್ಬರನ್ನು ಕೊಂದು 20 ಜನರನ್ನು ಹೆದರಿಸುವ ಮಾದರಿ ಜಿಹಾದಿಗಳದ್ದು. ಹಿಂದೂ ಸಮಾಜ ಹೆದರುವುದಿಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು. ನಾವು ಸಂವಿಧಾನಕ್ಕೆ ಗೌರವ ಕೊಟ್ಟು ಸುಮ್ಮನಿದ್ದೇವೆ. ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳುವುದು ಗೊತ್ತಿದೆ ಎಂದರು.
ಬೊಮ್ಮಾಯಿ ಅವರೇ ಯಾವಾಗ ತೇಜಸ್ವಿ ಸೂರ್ಯನ ಮನೆಗೆ ಬುಲ್ಡೋಸರ್ ನುಗ್ಗಿಸುವಿರಿ? ಕೈ ಟ್ವೀಟ್ ಅಸ್ತ್ರ
ನಗರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ ವಿವಿಧ ಹಿಂದೂ ಸಂಘಟನೆಗಳ ಸದಸ್ಯರು ಬಳಿಕ ಟೌನ್ ಹಾಲ…ವರೆಗೂ ಮೆರವಣಿಗೆ ಮೂಲಕ ಬಂದರು. ಪ್ರತಿಭಟನೆಯ ಆರಂಭದಲ್ಲಿ ಪ್ರವೀಣ್ ನೆಟ್ಟಾರು ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಪಾರ್ಥನೆ ಸಲ್ಲಿಸಲಾಯಿತು. ಹಿಂದೂ ಮುಖಂಡ ಪಟಾಪಟ್ ಶ್ರೀನಿವಾಸ್, ಮೋಹನ್ ಗೌಡ, ಮನೋಹರ್ ಆಯ್ಯರ್, ಉಮೇಶ್ ಶೆಟ್ಟಿಮುಂತಾದವರು ಮಾತನಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.