ಕಾಂಗ್ರೆಸ್‌ನಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಉಪಚುನಾವಣೆ ನಿಗದಿ ಮಾಡಲಾಗಿದೆ.
ಬೆಂಗಳೂರು, (ಜುಲೈ18): ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದೆ.
ವಿಧಾನಸಭೆಯಿಂದ ಪರಿಷತ್ ಗೆ ಆಯ್ಕೆ ಮಾಡಲು ಇದೇ ಆಗಸ್ಟ್ 11ಕ್ಕೆ ಉಪಚುನಾವಣೆ ನಡೆಯಲಿದ್ದು, ಅಂದೇ ಸಂಜೆ ಮತ ಎಣಿಕೆ ನಡೆಯಲಿದೆ. ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣಾ ಆಯೋಗ ಇಂದು (ಸೋಮವಾರ) ಚುನಾವಣೆ ಘೋಷಣೆ ಮಾಡಿದೆ. ಆಗಸ್ಟ್ 11 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 1 ಕಡೆಯ ದಿನವಾಗಿದೆ.
ಆಗಸ್ಟ್ 4 ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದಾಗಿದೆ. ಆಗಸ್ಟ್ 11 ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 4ರವರೆಗೆ ಮತದಾನ ನಡೆಯಲಿದ್ದು, ಅಂದೇ ಸಾಯಂಕಾಲ 5 ಗಂಟೆಗೆ ಮತ ಎಣಿಕೆ ಪ್ರಾರಂಭವಾಗುತ್ತದೆ.
Karnataka Politics: ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ಕಡೆಗೂ ಗುಡ್‌ಬೈ..!
ಶಾಸಕರಿಂದ ಮತದಾನ ನಡೆಯಲಿದ್ದು, ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆಯಿದ್ದು, ಬಿಜೆಪಿಗೆ ಸ್ಥಾನ ಲಭಿಸುವ ಸಾಧ್ಯತೆಗಳಿವೆ. ಆಗಸ್ಟ್ 16 ರ ಒಳಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕಿತ್ತು.
ಕಾಂಗ್ರೆಸ್‌ನಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನ ಇದೀಗ ಉಪಚುನಾವಣೆಯನ್ನು ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.
2024 ರ ಜೂನ್ ತಿಂಗಳವರೆಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಅವರ ಸದಸ್ಯತ್ವ ಅವಧಿ ಇತ್ತು. ಆದ್ರೆ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡು ಇಬ್ರಾಹಿಂ ಕಾಂಗ್ರೆಸ್ ಹಾಗೂ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.