ರಾಜ್ಯ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಮುಂದಾಗಿದ್ದಾರೆ.
ಬೆಂಗಳೂರು, ಡಿ.09): ರಾಜ್ಯ ಸರ್ಕಾರಕ್ಕೆ ದಿಕ್ಸೂಚಿಯಾಗಿದ್ದ 15 ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
undefined
ಈ ಬಗ್ಗೆ ಇಂದಿನ ಸುದ್ದಿಗೋಷ್ಠಿಯಲ್ಲಿ ಖಚಿತಪಡಿಸಿದರು. ಮೂಲ ಕಾಂಗ್ರೆಸ್ ವಿರೋಧ ಹಾಗೂ ಬೇರೆಯವರಿಗೆ ಅವಕಾಶ ನೀಡಲು ಸಿದ್ದರಾಮಯ್ಯ ಈ ತೀರ್ಮಾನಕ್ಕೆ ಬಂದಿದ್ದಾರೆ. ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸುವ ನಿರೀಕ್ಷೆ ಇತ್ತು. ಆದ್ರೆ, ಅದು ಆಗಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಮೊದಲಿಗೆ ಕೇವಲ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಅಂತ ಅವರೇ ಹೇಳಿ ಸುದ್ದಿಗೋಷ್ಠಿಯಿಂದ ಎದ್ದು ಹೋದರು. ಬಳಿಕ ಮತ್ತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಖಚಿತಪಡಿಸಿದರು.
ಬೈ ಎಲೆಕ್ಷನ್ ರಿಸಲ್ಟ್: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿ
ನಾನು ಶಾಸಕಾಂಗ ಪಕ್ಷದ ನಾಯಕನಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ನನ್ನ ಶಾಸಕಾಂಗ ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದೇನೆ.
ರಾಜೀನಾಮೆಯ ಒಂದು ಪ್ರತಿಯನ್ನು ಎಐಸಿಸಿಗೆ, ಕೆಪಿಸಿಸಿಗೆ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿವೇಣುಗೋಪಾಲ್ ಅವರಿಗೆ ಈಗಾಗಲೇ ಸಲ್ಲಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯಾಗಿದ್ದರಿಂದ ಸಿದ್ದರಾಮಯ್ಯ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದ್ರೆ, ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.
ಅಷ್ಟೇ ಅಲ್ಲದೇ ಉಪಚುನಾಚವಣೆ ಸೋಲಿನ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನದಲ್ಲಿ ಗೆಲುವಿನ ನಗೆ ಬೀರಿದ್ರೆ, ಕಾಂಗ್ರೆಸ್ ಕೇವಲ 2 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರ ಹೊಣೆಹೊತ್ತು ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಕೊದ್ದಿದ್ದಾರೆ.
ಒಟ್ಟಿನಲ್ಲಿ ಬೈ ಎಲೆಕ್ಷನ್ ರಿಸಲ್ಟ್ ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಡಿಸೆಂಬರ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: