3 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು ನಿಶ್ಚಿತ: ಬಿ.ವೈ.ವಿಜಯೇಂದ್ರ ವಿಶ್ವಾಸ

By Kannadaprabha NewsFirst Published May 8, 2024, 1:14 PM IST
Highlights

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕನಿಷ್ಠ 3 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. 

ಶಿವಮೊಗ್ಗ (ಮೇ.08): ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕನಿಷ್ಠ 3 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿಕಾರಿಪುರದ ಮತಗಟ್ಟೆಯಲ್ಲಿ ಮತ ಚಲಾವಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಕಳೆದ ಹಲವು ದಿನಗಳಿಂದ ನಮ್ಮ ಅಭ್ಯರ್ಥಿ ಪರ ಶ್ರಮ ಹಾಕಿದ್ದಾರೆ. ಅದಕ್ಕೆ ತಕ್ಕ ಪ್ರತಿಫಲ ದೊರಕುತ್ತದೆ ಎಂಬ ವಿಶ್ವಾಸವಿದೆ ಮತದಾರರು ನಮ್ಮ ಅಭ್ಯರ್ಥಿ ಪರವಾಗಿ ಸ್ಪಂದನೆ ಮಾಡುತ್ತಿದ್ದಾರೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜದ 25 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಬಾರಿ ಅಷ್ಟು ಕ್ಷೇತ್ರಗಳನ್ನು ಉಳಿಸಿ ಕೊಳ್ಳುವುದರ ಜೊತೆಗೆ ಹೊಸ ದಾಖಲೆಯಲ್ಲಿ ನಿರ್ಮಾಣ ಮಾಡುತ್ತೇವೆ. ರಾಜ್ಯದ ಯಾವುದೇ ಲೋಕಸಭಾ ಕ್ಷೇತ್ರಕ್ಕೆ ಹೋದರು ಬಿಜೆಪಿ ಹಾಗೂ ಮೋದಿ ಪರವಾದ ಹಳೆ ಕಂಡು ಬರುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಕೂಡ ರಾಜ್ಯದ ಹಲೆವೆಡೆ ಪ್ರವಾಸ ನಡೆಸಿದ್ದೇನೆ. ಫಲಿತಾಂಶ ಬಿಜೆಪಿ ಹಾಗೂ ಮೋದಿ ಪರವಾಗಿ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೂನ್‌ 4ರಂದು ಫಲಿತಾಂಶ ಪ್ರಕಟಗೊಳ್ಳಲಿ ಆಗ ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್‌ಗೆ ಅಚ್ಚರಿ ಕಾಯ್ದಿದೆ. ಮತದಾರರು ನಮಗೆ ಆಶೀರ್ವಾದ ಮಾಡುತ್ತಾರೆ. 

ಅಪಹರಣವಾದ ಮಹಿಳೆ ತೋಟದಲ್ಲಿ ಇರಲಿಲ್ಲ, ಸಂಬಂಧಿಕರ ಮನೆಯಲ್ಲಿದ್ದರು: ಸಾ.ರಾ.ಮಹೇಶ್

ಇದು ಸತ್ಯ. ಈ ಚುನಾವಣೆಯಲ್ಲಿ ಜಾತಿ, ಉಪಜಾತಿ ಯಾವುದು ಇಲ್ಲ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದೇ ಎಲ್ಲರ ಒತ್ತಾಸೆಯಾಗಿದೆ. ಯಾರು ಏನೇ ಜಾತಿ ಸಮೀಕರಣ ಮಾಡಲಿ, ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಂದಿಡಲಿ, ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಕಾರ್ಯಕ್ರಮ ಹಾಗೂ ಯೋಜನೆ ಗಳು ನೇರವಾಗಿ ಜನರನ್ನು ತಲುಪಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ ಬಿಜೆಪಿ ಪರವಾದ ವಾತಾವರಣವನ್ನು ಈ ಬಾರಿ ಚುನಾವಣೆಯಲ್ಲಿ ಸೃಷ್ಟಿಸಿದೆ ಎ೦ದರು. 

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂಬ ಭ್ರಮಾಲೋಕದಲ್ಲಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿ ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲೂ ಪರಿಣಾಮ ಬೀರಲಿದೆ. ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಮುಂದೆ ಆಘಾತ ಕಾದಿದೆ ಎಂದು ಭವಿಷ್ಯ ನುಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ಜನತೆ ಮೆಚ್ಚಿಕೊಂಡಿದ್ದಾರೆ. 

ಡಿಕೆಶಿ ಕಂಟ್ರೋಲ್‌ನಲ್ಲಿರುವ ಎಸ್‌ಐಟಿಯಿಂದ ನ್ಯಾಯ ಸಿಗಲ್ಲ: ಶಾಸಕ ಯತ್ನಾಳ

ಈ ಬಾರಿ ಕೂಡ ಮತದಾರರು ರಾಘವೇಂದ್ರ ಅವರನ್ನು ಕೈ ಹಿಡಿಯಲಿದ್ದಾರೆ. ಕೇಂದ್ರದಲ್ಲಿ ಮೋದಿ ಆಡಳಿತವನ್ನು ಮತ್ತೊಮ್ಮೆ ನೋಡಬೇಕೆಂಬ ಆಸೆ ಹೊಂದಿರುವ ಮತದಾರರು ರಾಘವೇಂದ್ರ ಅವರನ್ನು ಕನಿಷ್ಠ 3 ಲಕ್ಷ ಅಂತರದಲ್ಲಿ ಗೆಲುವು ತಂದು ಕೊಡಲಿದ್ದಾರೆ ಎಂದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಪ್ರಶ್ನೆಯೇ ಇಲ್ಲ. ಮತದಾರರೇನು ದಡ್ಡರಲ್ಲ. ಯೋಚಿಸಿ ಸರಿಯಾದ ತೀರ್ಮಾನ ಕೈಗೊಳ್ಳುತ್ತಾರೆ. ನಮ್ಮ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.

click me!