ಹಾನಗಲ್ ಕ್ಷೇತ್ರದ ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ: ವಿಜಯೇಂದ್ರ ಹೆಸ್ರು ಸೇರ್ಪಡೆ

By Suvarna News  |  First Published Oct 4, 2021, 5:28 PM IST

* ಹಾನಗಲ್ ಕ್ಷೇತ್ರದ ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ
* ವಿಜಯೇಂದ್ರ ಅಭಿಮಾನಿಗಳ ಒತ್ತಡಕ್ಕೆ ಮಣಿದ ಬಿಜೆಪಿ ನಾಯಕರು
 * ಹಾನಗಲ್ ಬೈ ಎಲೆಕ್ಷನ್‌ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಸೇರ್ಪಡೆ


ಬೆಂಗಳೂರು, (ಅ.04): ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಉಪಚುನಾವಣೆಯಚ(Hangal By Election) ಬಿಜೆಪಿ ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

"

Tap to resize

Latest Videos

ಕಾರ್ಯಕರ್ತರು ಹಾಗೂ ಅಭಿಮಾನಿಗಳ ಒತ್ತಡಕ್ಕೆ ಮಣಿದು ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ಉಪಾಧ್ಯಕ್ಷ, ಬಿಎಸ್‌ವೈ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ಹಾನಗಲ್ ಉಸ್ತುವಾರಿಗಳ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಲೆಕ್ಕಕ್ಕಿಲ್ಲದಂತಾದ ಬೈಎಲೆಕ್ಷನ್ ಸ್ಪೆಷಲಿಸ್ಟ್, ಅಭಿಮಾನಿಗಳಿಗೊಂದು ವಿಜಯೇಂದ್ರ ಮನವಿ

ನಿನ್ನೆ (ಆ.04) ಘೋಷಣೆಯಾದ ರಾಜ್ಯದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಚುನಾವಣೆಯ ಪಕ್ಷದ ಉಸ್ತುವಾರಿಗಳ ಪಟ್ಟಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರಿಲ್ಲದಿರುವುದು ಹಲವು ಗುಮಾನಿಗಳಿಗೆ ಕಾರಣವಾಗಿತ್ತು. 

ಈ ಕುರಿತಂತೆ ವಿಜಯೇಂದ್ರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿ.ಎಲ್.ಸಂತೋಷ್ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದರು. ಇದೀಗ ಬಿಜೆಪಿ, ಅಭಿಮಾನಿಗಳ ಆಕ್ರೋಶಕ್ಕೆ ಮಣಿದಿದ್ದು, ಹಾನಗಲ್ ಬೈ ಎಲೆಕ್ಷನ್‌ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರನ್ನು ಸೇರಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ.

ಅಭಿಮಾನಿಗಳ   ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಟ್ವೀಟ್ ಮಾಡಿ, ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಮ್ಮತಿಯಿಲ್ಲ ಎಂದಿದ್ದರು.

click me!