
ಬೆಂಗಳೂರು[ಫೆ.03]: ರಾಜ್ಯದ ರೈತರು ಹಾಗೂ ಜನರ ಪರವಾಗಿ ಕೆಲಸ ಮಾಡಲು ನಮ್ಮ ತಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನೀಡಿದ ಸಹಕಾರದಂತೆ ನನಗೂ ಸಹಕಾರ ನೀಡಿ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಕೋರಿದ್ದಾರೆ.
ವೀರಶೈವ ಲಿಂಗಾಯತ ಯುವಕರ ಸೇವಾ ಟ್ರಸ್ಟ್ ಭಾನುವಾರ ಕೆಂಗೇರಿ ಉಪನಗರದ ಗಣೇಶ ದೇವಸ್ಥಾನದ ಮೈದಾನದಲ್ಲಿ ಏರ್ಪಡಿಸಿದ್ದ ಡಾ.ಶಿವಕುಮಾರ ಸ್ವಾಮಿ ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ವರುಣಾ ಕ್ಷೇತ್ರದ ಮೂಲಕ ರಾಜಕೀಯ ಅಂಬೆಗಾಲಿಟ್ಟನನಗೆ ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲು ಅವಕಾಶ ದೊರೆತಿದೆ. ಮುಂದಿನ ದಿನಗಳಲ್ಲಿ ತಂದೆಯಂತೆ ಸೇವೆ ಮಾಡಲು ನನಗೂ ಸಹಕಾರ, ಆಶೀರ್ವಾದ ನೀಡಿ ಎಂದು ಮನವಿ ಮಾಡಿದರು.
ಬಿಎಸ್‌ವೈಗೆ ಮಿಣಿ ಮಿಣಿ ಕಣ್ಣು ತಾಗದಿರಲೆಂದು ಪೂಜೆ
ಯಡಿಯೂರಪ್ಪ ಅವರು ಹಿಂದಿನಿಂದಲೂ ಮಠಗಳೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡವರು. ಸಮಾಜಕ್ಕೆ ಪೂರಕವಾದ ಕೆಲಸಗಳಿಗೆ ನೆರವಾಗುತ್ತಾ ಬಂದವರು. ಇದೀಗ ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ನೆರೆ ಮತ್ತು ಪ್ರವಾಹ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ಅವರು ಹೇಗೆ ಬಜೆಟ್ ಮಂಡಿಸಲಿದ್ದಾರೆ ಎಂದು ರಾಜ್ಯದ ಜನರು ಎದುರು ನೋಡುತ್ತಿದ್ದಾರೆ. ಹಿಂದಿನಂತೆ ತಂದೆಯವರು ಈ ಬಾರಿಯೂ ಉತ್ತಮ ಹಾಗೂ ರೈತ ಪರ ಬಜೆಟ್ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕರು ಮತ್ತು ಭಾವಿ ಮಂತ್ರಿ ಎಸ್.ಟಿ ಸೋಮಶೇಖರ್ ಅವರು ಯಾವುದೇ ಪಕ್ಷದಲ್ಲಿದ್ದರೂ ಮಠಗಳು ಹಾಗೂ ಸಮಾಜದ ಏಳಿಗೆ ಪರ ಕಾಳಜಿ ಹೊಂದಿರುವವರು. ಈ ಜನಪರ ನಿಲುವುಗಳಿಂದಲೇ ಅವರು ಗೆದ್ದಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.