ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಜನರ ದಂಗೆ ಎದ್ದಿದ್ದೇಕೆ?: ಬಿ.ವೈ.ವಿಜಯೇಂದ್ರ ಹೇಳಿದ್ದೇನು?

Published : Apr 06, 2026, 07:55 PM IST
by vijayendra

ಸಾರಾಂಶ

ಉಪ ಕ್ಷೇತ್ರಗಳ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಲ್ಲಿ ಗೆಲ್ಲಲೇಬೇಕೆಂಬ ರಣೋತ್ಸಾಹ ನಮ್ಮೆಲ್ಲಾ ಕಾರ್ಯಕರ್ತರು, ಮುಖಂಡರಲ್ಲಿ ಕಂಡುಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ದಾವಣಗೆರೆ (ಏ.06): ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಕ್ಷೇತ್ರಗಳ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಲ್ಲಿ ಗೆಲ್ಲಲೇಬೇಕೆಂಬ ರಣೋತ್ಸಾಹ ನಮ್ಮೆಲ್ಲಾ ಕಾರ್ಯಕರ್ತರು, ಮುಖಂಡರಲ್ಲಿ ಕಂಡುಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ದಿನವಿಡೀ ಸರಣಿ ಸಭೆಗಳು, ಬೂತ್ ಮಟ್ಟದ ಕಾರ್ಯಕರ್ತರು, ಮುಖಂಡರೊಂದಿಗೆ ನಡೆಸಿದ ಚರ್ಚೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪ್ರತಿ ಬೂತ್‌ನಲ್ಲಿ ನಮ್ಮ ಅಭ್ಯರ್ಥಿ ಪರವಾಗಿ ಪರಿಸ್ಥಿತಿ, ವಾತಾವರಣ ಹೇಗಿದೆ ಎಂಬುದನ್ನು ತಿಳಿಯುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು. ನಮ್ಮ ಬೂತಿನ ಪ್ರಮುಖರ ಆತ್ಮವಿಶ್ವಾಸ ನೋಡಿದರೆ, ಅತಿ ಹೆಚ್ಚು ಲೀಡ್ ಪಡೆಯುವ ಮಾತನಾಡುತ್ತಿದ್ದಾರೆ. ಇದೆಲ್ಲಾ ನೋಡಿದಾಗ ದಾವಣಗೆರೆ ದಕ್ಷಿಣದಲ್ಲಿ ಐತಿಹಾಸಿಕ ಗೆಲುವು ಬಿಜೆಪಿ ಅಭ್ಯರ್ಥಿಯದ್ದಾಗಲಿದೆ. ಅಲ್ಪಸಂಖ್ಯಾತರು, ಹಿಂದೂಗಳು ಸೇರಿ ಮತದಾರರು ಕಾಂಗ್ರೆಸ್ಸಿನ ವಿರುದ್ಧ ಆಕ್ರೋಶಿತರಾಗಿದ್ದಾರೆ. ಯಾರಿಗೂ ಕಾಂಗ್ರೆಸ್ ಪರ ಮತಯಾಚನೆ ಮಾಡುವ ಧೈರ್ಯ ಬರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಮತ್ತಷ್ಟು ಹುರುಪು

ಕೇಂದ್ರ ಸಚಿವರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದಾವಣಗೆರೆಗೆ ಬಂದು, ಬೆಂಬಲ ನೀಡಿರುವುದು ಮತ್ತಷ್ಟು ಹುರುಪು ತಂದಿದೆ. ನಮ್ಮ ಮಿತ್ರ ಪಕ್ಷ ಜೆಡಿಎಸ್ ಮುಖಂಡರು, ಮಾಜಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರೂ ಪ್ರಚಾರದಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿಗಳಾದಿಯಾಗಿ ಇಡೀ ಸಚಿವ ಸಂಪುಟವೇ ವಿಧಾನಸೌಧದ ಮೂರನೇ ಮಹಡಿಯನ್ನು ಮರೆತು, ಉಭಯ ಕ್ಷೇತ್ರಗಳಲ್ಲಿ ಬಂದು ಕೂತಿದ್ದಾರೆಂದರೆ ಅದೆಷ್ಟರಮಟ್ಟಿಗೆ ಹತಾಶರಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಅವರು ಹೇಳಿದರು.

ಉಪ ಚುನಾವಣೆ ಹಿನ್ನೆಲೆ ಕೆಲವರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರದ ಹತಾಶೆ ಏನೆಂಬುದು ಸ್ಪಷ್ಟಗೊಂಡಿದೆ. ಡಾ.ಪರಮೇಶ್ವರ್ ಆದಿಯಾಗಿ ಜಗತ್ತಿನ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ವಾಸ್ತವಿಕತೆಯನ್ನು ಮರೆತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಕುಟುಕಿದರು. ಮಾಜಿ ಸಚಿವ ಆರಗ ಜ್ಞಾನೇಂದ್ರ, ಭಾರತಿ ಶೆಟ್ಟಿ, ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ಪಿ.ಸಿ. ಶ್ರೀನಿವಾಸ ಭಟ್, ಬಿ.ಎಸ್. ಜಗದೀಶ, ಆರ್.ಎಲ್. ಶಿವಪ್ರಕಾಶ, ಧನಂಜಯ ಕಡ್ಲೇಬಾಳು, ಅಣಜಿ ಅಣ್ಣೇಶ, ಮುಕುಂದ, ಎಚ್.ಪಿ.ವಿಶ್ವಾಸ, ಡಿ.ಎಸ್.ಶಿವಶಂಕರ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್‌ನಿಂದ ಉತ್ತರ-ದಕ್ಷಿಣ ಭಾರತ ವಿಭಜನೆ ತಂತ್ರ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶ!
'ನನ್ನ ಹೆಂಡ್ತಿ ಜೆಡಿಸ್ ಮಾಜಿ ಶಾಸಕರ ಸಂಬಂಧದಲ್ಲವ್ಳೆ' ಎಂದ ಪ್ರಸನ್ನ; ಅವನೊಬ್ಬ ಸುಳ್ಳುಗಾರ ಎಂದ ಡಾ.ಕೆ.ಅನ್ನದಾನಿ!