ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ, ಅವರ ಹಗರಣ ಶೀಘ್ರ ಬಹಿರಂಗ: ಡಿಕೆಶಿ ಘೋಷಣೆ

By Govindaraj S  |  First Published Jul 28, 2024, 5:22 AM IST

'ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ವರ್ಗಾವಣೆ ಸೇರಿದಂತೆ ಹಲವು ಹಗರಣ ನಡೆಸಿದ್ದಾರೆ. ಅವರ ಹಗರಣಗಳನ್ನು ಸದ್ಯದಲ್ಲೇ ಬಹಿರ೦ಗಪಡಿಸುತ್ತೇವೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 


ಬೆಂಗಳೂರು (ಜು.28): 'ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ವರ್ಗಾವಣೆ ಸೇರಿದಂತೆ ಹಲವು ಹಗರಣ ನಡೆಸಿದ್ದಾರೆ. ಅವರ ಹಗರಣಗಳನ್ನು ಸದ್ಯದಲ್ಲೇ ಬಹಿರ೦ಗಪಡಿಸುತ್ತೇವೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಪದೇಪದೇ ಪರಿಶಿಷ್ಟರ ಬಗ್ಗೆ ಮಾತನಾಡುತ್ತಾರೆ. 

ಹಾಗಾಗಿ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ಅವರು ಮಾತನಾ ಡಬೇಕು ಎಂಬ ವಿಜಯೇಂದ್ರ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತ ನಾಡಿ, ವಿಜಯೇಂದ್ರ ನಡೆಸಿರುವ ಹಗರಣ ಗಳ ಬಗ್ಗೆ ಬಿಜೆಪಿಗೂ ಗೊತ್ತಿದೆ. ಅವರ ತಂದೆ ಬಿ.ಎಸ್.ವೈ ಮುಖ್ಯಮಂತ್ರಿಯಾಗಿದ್ದಾಗ ಏನೆಲ್ಲಾ ಮಾಡಿದ್ದರು ಎಂಬುದು ಗೊತ್ತಿದೆ. ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾ ವಣೆಯಾಗಿರುವುದು ಸೇರಿದಂತೆ ಅನೇಕ ವಿಚಾರಗಳಿವೆ. ಅವರ ತಂದೆ ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಯಾಕೆ ಎಂಬುದು ಹೊರಬರಬೇಕಿದೆ ಎಂದು ಟೀಕಿಸಿದರು. 

Tap to resize

Latest Videos

ಮುಡಾ ಹಗರಣ ಮಾಡಿದ್ದೇ ಬಿಜೆಪಿ: ಮುಡಾ ಹಗರಣಗಳನ್ನು ಮಾಡಿರುವುದೇ ಬಿಜೆಪಿ. ನಮ್ಮ ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದವರಿಗೂ ಈ ಅಕ್ರಮಕ್ಕೂ ಸಂಬಂಧವಿಲ್ಲ. ಮುಡಾದವರು ಸಿದ್ದರಾ ಮಯ್ಯ ಅವರ ಜಮೀನನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ಮುಖ್ಯಮಂತ್ರಿಗಳ ಕುಟುಂಬದವರು ಮುಡಾದಿಂದ ಪರಿಹಾರ ಪಡೆಯಲು ಅರ್ಹರಾಗಿದ್ದು, ಕಾನೂ ನು ರೀತಿ ಪರಿಹಾರ ಪಡೆದಿದ್ದಾರೆ ಎಂದು ಶಿವಕುಮಾರ್‌ಸಮರ್ಥಿಸಿಕೊಂಡರು.

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಆಗಿಲ್ಲ: ಸಂಸದ ಬೊಮ್ಮಾಯಿ

ಬಿಜೆಪಿಗೂ ಇವರ ಹಗರಣ ಗೊತ್ತಿದೆ: ವಿಜಯೇಂದ್ರ ನಡೆಸಿ ರುವ ಹಗರಣಗಳ ಬಗ್ಗೆ ಬಿಜೆಪಿಗೂ ಗೊತ್ತಿದೆ. ಬಿಎಸ್‌ವೈ ಸಿಎಂ ಆಗಿದ್ದಾಗ ಇವರು ಏನೆಲ್ಲಾ ಮಾಡಿದ್ದರು? ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾವಣೆ ಆಗಿರುವುದು ಸೇರಿದಂತೆ ಅನೇಕ ವಿಚಾರಗಳಿವೆ. ಅದನ್ನೆಲ್ಲಾ ಬಹಿರಂಗಪಡಿಸುತ್ತೇವೆ.

click me!