ಇಬ್ಬರು ನಾಯಕರು ಒಂದೇ ವೇಳೆಗೆ ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ಡಾ.ಜಿ.ಪರಮೇಶ್ವರ್ ಅವರು ವಿಜಯೇಂದ್ರಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ವಿಜಯೇಂದ್ರ ಅವರು ಡಾ.ಜಿ.ಪರಮೇಶ್ವರ್ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು.
ತುಮಕೂರು(ಏ.15): ಮಾಜಿ ಡಿಸಿಎಂ ಹಾಗೂ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಮತ್ತು ಬಿಜೆಪಿ ಯುವ ಮುಖಂಡ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಸಂಜೆ ಯಡಿಯೂರಿನ ಸಿದ್ಧಲಿಂಗೇಶ್ವರ ಸನ್ನಿಧಿಯಲ್ಲಿ ಮುಖಾಮುಖಿಯಾಗಿದ್ದರು.
ಇಬ್ಬರು ನಾಯಕರು ಒಂದೇ ವೇಳೆಗೆ ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ಡಾ.ಜಿ.ಪರಮೇಶ್ವರ್ ಅವರು ವಿಜಯೇಂದ್ರಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ವಿಜಯೇಂದ್ರ ಅವರು ಡಾ.ಜಿ.ಪರಮೇಶ್ವರ್ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು.
ಮತ್ತೆ 5 ವರ್ಷದವರೆಗೂ ನಿಮ್ಮ ಜೊತೆಗಿರುವಂತೆ ಮಾಡಿ
ಪೂಜೆ ಬಳಿಕ ಇಬ್ಬರು ನಾಯಕರು ಅಲ್ಲಿಂದ ವಾಪಸ್ ತೆರಳಿದರು. ಇವರಿಬ್ಬರು ಜೊತೆಗೆ ತೆಗೆಸಿಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆ ಹುಟ್ಟು ಹಾಕಿದೆ.