ಪಾದಯಾತ್ರೆ ವಿಚಾರದಲ್ಲಿ ಜೆಡಿಎಸ್‌ ಅಪಸ್ವರ: ಗೃಹ ಸಚಿವ ಅಮಿತ್ ಶಾ, ನಡ್ಡಾ ಭೇಟಿ ಮಾಡಿದ ವಿಜಯೇಂದ್ರ

Published : Aug 01, 2024, 06:59 AM ISTUpdated : Aug 01, 2024, 10:10 AM IST
ಪಾದಯಾತ್ರೆ ವಿಚಾರದಲ್ಲಿ ಜೆಡಿಎಸ್‌ ಅಪಸ್ವರ: ಗೃಹ ಸಚಿವ ಅಮಿತ್ ಶಾ, ನಡ್ಡಾ ಭೇಟಿ ಮಾಡಿದ ವಿಜಯೇಂದ್ರ

ಸಾರಾಂಶ

ಕಾಂಗ್ರೆಸ್ ವಿರುದ್ದದ ಪಾದಯಾತ್ರೆ, ಪಾದಯಾತ್ರೆ ವಿಚಾರದಲ್ಲಿ ಜೆಡಿಎಸ್‌ ನಾಯಕರ ಅಪಸ್ವರದ ಬಗ್ಗೆಯೂ ಚರ್ಚೆ ನಡೆಯಿತು. ಗೊಂದಲದ ಹಿನ್ನೆಲೆಯಲ್ಲಿ ಪಾದಯಾತ್ರೆ ಮುಂದುವರೆಸಬೇಕಾ?, ಬೇಡವಾ? ಎಂಬ ಬಗ್ಗೆ ಅಮಿತ್ ಶಾರಿಂದ ಸಲಹೆ ಪಡೆದರು ಎಂದು ತಿಳಿದು ಬಂದಿದೆ.  

ನವದೆಹಲಿ(ಆ.01):  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೆ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಮುಡಾ ಮತ್ತು ವಾಲ್ಮೀಕಿ ಹಗರಣಗಳ ವಿರುದ್ಧ ನಡೆಸಬೇಕಾದ ಹೋರಾಟದ ಕುರಿತಾಗಿಯೂ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ.

ದೆಹಲಿಯ ಸಂಸತ್ ಭವನದ ಕಚೇರಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ, ಬಿಜೆಪಿಯ ಕೆಲ ರಾಜ್ಯ ನಾಯಕರ ಅಸಹಕಾರ, ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೆ, ಕಾಂಗ್ರೆಸ್ ವಿರುದ್ದದ ಪಾದಯಾತ್ರೆ, ಪಾದಯಾತ್ರೆ ವಿಚಾರದಲ್ಲಿ ಜೆಡಿಎಸ್‌ ನಾಯಕರ ಅಪಸ್ವರದ ಬಗ್ಗೆಯೂ ಚರ್ಚೆ ನಡೆಯಿತು. ಗೊಂದಲದ ಹಿನ್ನೆಲೆಯಲ್ಲಿ ಪಾದಯಾತ್ರೆ ಮುಂದುವರೆಸಬೇಕಾ?, ಬೇಡವಾ? ಎಂಬ ಬಗ್ಗೆ ಅಮಿತ್ ಶಾರಿಂದ ಸಲಹೆ ಪಡೆದರು ಎಂದು ತಿಳಿದು ಬಂದಿದೆ.

ಗೊಡ್ಡು ಬೆದರಿಕೆಗೆ ನಾವು ಮಣಿಯಲ್ಲ, ಮುಡಾ ಪಾದಯಾತ್ರೆ ನಿಶ್ಚಿತ: ವಿಜಯೇಂದ್ರ ಕಿಡಿ

ಬಳಿಕ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು. ಮಾತುಕತೆ ವೇಳೆ, ಕಾಂಗ್ರೆಸ್‌ನ ಮುಡಾ ಮತ್ತು ವಾಲ್ಮೀಕಿ ಹಗರಣಗಳ ಪ್ರಸ್ತಾಪವೂ ಆಯಿತು. ಮಾತುಕತೆ ವೇಳೆ, ಮೈತ್ರಿಕೂಟದ ನಾಯಕರು ಸೇರಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಗುರುವಾರ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರನ್ನು ಅವರು ಭೇಟಿ ಮಾಡುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್