ಧಾರವಾಡದ ನುಗ್ಗೆಕೇರಿ ಶ್ರೀ ಆಂಜನೇಯಸ್ವಾಮಿ ದೇಗುಲ ಬಳಿ ನಡೆದಂತಹ ಘಟನೆ ಹೊಸದಲ್ಲ. ಬೇರೆ ಬೇರೆ ಸಂದರ್ಭದಲ್ಲಿ ಅನೇಕ ಕಡೆ ಈ ರೀತಿಯ ಘಟನೆಗಳು ನಡೆದಿವೆ. ಚುನಾವಣಾ ವರ್ಷ ಆಗಿರುವ ಕಾರಣ ರಾಜಕೀಯ ಬಣ್ಣ ಕೊಡಲಾಗುತ್ತಿದೆ.
ರಾಮನಗರ (ಏ.11): ಧಾರವಾಡದ ನುಗ್ಗೆಕೇರಿ ಶ್ರೀ ಆಂಜನೇಯಸ್ವಾಮಿ ದೇಗುಲ ಬಳಿ ನಡೆದಂತಹ ಘಟನೆ ಹೊಸದಲ್ಲ. ಬೇರೆ ಬೇರೆ ಸಂದರ್ಭದಲ್ಲಿ ಅನೇಕ ಕಡೆ ಈ ರೀತಿಯ ಘಟನೆಗಳು ನಡೆದಿವೆ. ಚುನಾವಣಾ ವರ್ಷ ಆಗಿರುವ ಕಾರಣ ರಾಜಕೀಯ ಬಣ್ಣ ಕೊಡಲಾಗುತ್ತಿದೆ. ವಿರೋಧ ಪಕ್ಷದವರಿಗೆ ಇದು ಶೋಭೆ ತರುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಪ್ರತಿಕ್ರಿಯಿಸಿದರು. ನಗರದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಶ್ರೀ ರಾಮನವಮಿ ಪ್ರಯುಕ್ತ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ನೆಲಸಬೇಕೆಂದು ಬಿಜೆಪಿ ಬಯಸುತ್ತದೆ. ಇತ್ತೀಚೆಗೆ ನಡೆದ ಘಟನೆಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷದವರು ವೈಭವಿಕರಿಸಿ ಪ್ರಚೋದನೆ ಕೊಡುವುದು ಸರಿಯಲ್ಲ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ (Araga Jnanendra) ಅವರು ಎಲ್ಲದರ ಬಗ್ಗೆ ಗಮನಹರಿಸಿದ್ದಾರೆ. ರಾಜ್ಯ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಈ ವಿಚಾರದಲ್ಲಿ ಸಾಕಷ್ಟುಗೊಂದಲಗಳು ಇವೆ. ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ಕಮಿಷನರ್ ಕಮಲ್ ಪಂತ್ ಸ್ಪಷ್ಟನೆ ನೀಡಿದ್ದಾರೆ. ಆದರೆ, ಅಲ್ಲೊಬ್ಬ ವ್ಯಕ್ತಿ ಬೇರೆ ಹೇಳಿಕೆ ಕೊಟ್ಟಿದ್ದಾನೆ. ಕೊಲೆ ಪ್ರಕರಣ ಕುರಿತು ಸರ್ಕಾರ ಸಿಐಡಿ ತನಿಖೆಗೆ ಆದೇಶ ಕೂಡ ನೀಡಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಕೊಲೆ ಕುರಿತು ಸತ್ಯಾಸತ್ಯತೆ ತಿಳಿಯಲಿದೆ ಎಂದು ಹೇಳಿದರು.
Karnataka Politics: ವಿಜಯೇಂದ್ರಗೆ ಭೇಷ್ ಎಂದ ಅಮಿತ್ ಶಾ
ಬಿಜೆಪಿ ಮುಂದಿನ ಚುನಾವಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ಜನರ ಮುಂದಿಟ್ಟು, ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತೇವೆ. ಈವರೆಗೆ ಬಿಜೆಪಿ ಸರ್ಕಾರ ಜನತೆಗೆ ನೀಡಿರುವ ಕೊಡುಗೆ ಸೇರಿದಂತೆ ಸಾಧನೆಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತೇವೆ. ಇದರ ಬದಲಿಗೆ ಬೇರೆ ವಿಚಾರಗಳನ್ನು ತೆಗೆದುಕೊಂಡು ಚುನಾವಣೆಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು. ಇದು ಚುನಾವಣಾ ವರ್ಷವಾಗಿರುವ ಕಾರಣ, ವಿರೋಧ ಪಕ್ಷದವರು ಬೇರೆ ಬೇರೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಈ ಕುರಿತು ಬಿಜೆಪಿಗೆ ಸ್ಪಷ್ಟತೆ ಇದೆ. ನಮ್ಮ ಸಾಧನೆಗಳ ಆಧಾರದ ಮೇಲೆ ಜನರ ಮುಂದೆ ಮತಯಾಚನೆ ಮಾಡುತ್ತೇವೆ ಎಂದು ವಿಜಯೇಂದ್ರ ಭವಿಷ್ಯ ನುಡಿದರು.
ವಿಜಯೇಂದ್ರ ಯಾವ ಗಿಡದ ತಪ್ಪಲು: ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಶತಾಯಗತಾಯವಾಗಿ ಬೊಮ್ಮಾಯಿ ಸಂಪುಟ ಸೇರಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಹೈಕಮಾಂಡ್ ಗಮನಸೆಳೆಯಲು ವಿಜಯೇಂದ್ರ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಮೊನ್ನೇ ನಡೆದ ಡಾ. ಶಿವಕುಮಾರ ಸ್ವಾಮೀಜಿ ಜಯಂತೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡು ಅಚ್ಚುಕಟ್ಟಾಗಿ ನಿಭಾಯಿಸಿರುವುದಕ್ಕೆ ಇದಕ್ಕೆ ಪೂರಕವಾಗಿದೆ. ಇದರ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭಾನುವಾರ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನಿಂದಲೇ ಬಿಜೆಪಿ ಎನ್ನುವವರನ್ನೇ ಹೈಕಮಾಂಡ್ ಮನೆಯಲ್ಲಿ ಕೂಡಿಸಿದೆ, ಇನ್ನು ವಿಜಯೇಂದ್ರ ಯಾವ ಗಿಡದ ತಪ್ಪಲು? ವಿಜಯೇಂದ್ರ ಮೊನ್ನೆ ಮೊನ್ನೆ ನಮ್ಮ ಮುಂದೆಯೇ ಹುಟ್ಟಿದ ಹುಡುಗ ಎಂದು ವ್ಯಂಗ್ಯವಾಡಿದರು. ಬಿಜೆಪಿಯಲ್ಲಿ ಇನ್ನು ಮುಂದೆ ವಂಶಪಾರಂಪರೆಗೆ ಅವಕಾಶವಿಲ್ಲ, ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು. ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ ಎಂದು ವಿಜಯೇಂದ್ರಗೆ ಟಾಂಗ್ ಕೊಟ್ಟರು.
PSI Recruitment Scam: ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮ ಸಿಐಡಿಗೆ: ಆರಗ ಜ್ಞಾನೇಂದ್ರ
ಅಪ್ಪನ ಜಾಗ ನನಗೆ ಬೇಕು, ಅಪ್ಪನ ಸ್ಥಳ ನನಗೆ ಕೊಡಿ ಎನ್ನುವುದು ಇನ್ನು ಮುಂದೆ ಯಾವುದೂ ಉಳಿಯುವುದಿಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದರೂ ಉದ್ಯೋಗ ಮಾಡಿಕೊಂಡಿದ್ದರೆ ಅದರಲ್ಲಿ ಮುಂದುವರೆಯುವುದು ಒಳ್ಳೆಯದು ಎಂದು ಯತ್ನಾಳ್ ಹೇಳಿದರು. ಬಿಜೆಪಿಯಲ್ಲಿ ಹಲವು ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿತ್ತು.