ಲೆಕ್ಕಕ್ಕಿಲ್ಲದಂತಾದ ಬೈಎಲೆಕ್ಷನ್ ಸ್ಪೆಷಲಿಸ್ಟ್, ಅಭಿಮಾನಿಗಳಿಗೊಂದು ವಿಜಯೇಂದ್ರ ಮನವಿ

Published : Oct 04, 2021, 03:34 PM IST
ಲೆಕ್ಕಕ್ಕಿಲ್ಲದಂತಾದ ಬೈಎಲೆಕ್ಷನ್ ಸ್ಪೆಷಲಿಸ್ಟ್,  ಅಭಿಮಾನಿಗಳಿಗೊಂದು ವಿಜಯೇಂದ್ರ ಮನವಿ

ಸಾರಾಂಶ

* ಸಿಂದಗಿ ಹಾನಗಲ್ ಉಪಚುನಾವಣಗೆ ಬಿಜೆಪಿ ಉಸ್ತುವಾರಿಗಳ ನೇಮಕ * ಲೆಕ್ಕಕ್ಕಿಲ್ಲದಂತಾದ ಬೈಎಲೆಕ್ಷನ್ ಸ್ಪೆಷಲಿಸ್ಟ್ ವಿಜಯೇಂದ್ರ, * ಸಂತೋಷ್-ಕಟೀಲ್ ವಿರುದ್ಧ ಬೆಂಬಲಿಗರ ಕಿಡಿ..!  * ಅಭಿಮಾನಿಗಳಿಗೊಂದು ಬಿವೈ ವಿಜಯೇಂದ್ರ ಮನವಿ

ಬೆಂಗಳೂರು, (ಅ.04): ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ (By Elections) ಉಸ್ತುವಾರಿಗಳ ಪಟ್ಟಿಯಲ್ಲಿ ಬಿವೈ ವಿಜಯೇಂದ್ರ ಹೆಸರಿಲ್ಲ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ(BJP) ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.

ಅಪ್ಪನ ಅಖಾಡವೋ, ಹೊಸ ರಣರಂಗವೋ..? ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ರಣತಂತ್ರ..!

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಪುತ್ರ, ರಾಜ್ಯ ಬಿಜೆಪಿ ಉಪಾದ್ಯಕ್ಷ ಬಿವೈ ವಿಜಯೇಂದ್ರ, ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದೂ ಸೇರಿದಂತೆ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ನಾನು ಕಟಿಬದ್ಧನಾಗಿದ್ದೇನೆ. ಪಕ್ಷದ ಗೆಲುವೇ ನಮಗೆ ಮುಖ್ಯ, ಇನ್ನ್ಯಾವುದೂ ಅಲ್ಲ. ಭಿನ್ನಾಭಿಪ್ರಾಯದ ಧ್ವನಿಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತದೆ, ವಿಪಕ್ಷಗಳಿಗೆ ಪರೋಕ್ಷ ನೆರವು ನೀಡಿದಂತಾಗುತ್ತದೆ ಎಂದಿದ್ದಾರೆ.

ಪಕ್ಷದ ತೀರ್ಮಾನದಂತೆ, ನಮ್ಮ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ, ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ನಾವು ಕಾರ್ಯನಿರ್ವಹಿಸೋಣ. ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಮ್ಮತಿಯಿಲ್ಲ. ನಮ್ಮ ಎಲ್ಲಾ ಪ್ರಯತ್ನಗಳನ್ನೂ ಪಕ್ಷದ ಹಿತ ಮತ್ತು ಗೆಲುವಿಗಾಗಿಯೇ ವಿನಿಯೋಗಿಸೋಣ ಎಂದು ಕರೆ ನೀಡಿದ್ದಾರೆ.

ಲೆಕ್ಕಕ್ಕಿಲ್ಲದಂತಾದ  ಬೈ ಎಲೆಕ್ಷನ್ ಸ್ಪೆಷಲಿಸ್ಟ್ 
ಎರಡೂ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದು ಬಿಜೆಪಿ ತಂತ್ರವನ್ನು ರೂಪಿಸುತ್ತಿದೆ. ಇದಕ್ಕಾಗಿ ಉಪ ಚುನಾವಣೆ ಉಸ್ತುವಾರಿಗಳನ್ನು ಈಗಾಗಲೇ ನೇಮಕ ಮಾಡಿದೆ. ಆದ್ರೆ,  ರಾಜ್ಯದಲ್ಲಿ  ಉಪಚುನಾವಣೆ ಸ್ಪೆಷಲಿಸ್ಟ್ ಎಂದೇ ಬಿಂಬಿತರಾಗಿರುವ ವಿಜಯೇಂದ್ರ ಅವರ ಹೆಸರಿಲ್ಲ.

 ಶಿರಾ ಹಾಗೂ ಮಂಡ್ಯ ಕೆ.ಆರ್.ಪೇಟೆ ಬೈ ಎಲೆಕ್ಷನ್ ಉಸ್ತುವಾರಿ ವಹಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬಂದಿದ್ದರು. ಆದ್ರೆ, ಇದೀಗ ಎದುರಾಗಿರುವ ಸಿಂದಗಿ ಹಾಗೂ ಹಾನಗಲ್ ಉಸ್ತುವಾರಿ ಪಟ್ಟಿಗಳಲ್ಲಿ ವಿಜಯೇಂದ್ರ ಅವರ ಹೆಸರು ಇಲ್ಲ. ಇದರಿಂದ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ