ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡದಂತೆ ಯಡಿಯೂರಪ್ಪ ಸಾಹೇಬ್ರು ಒತ್ತಡ ಹಾಕ್ತಿದ್ದಾರೆ ಅಂತ ಕೆಲವರು ನಮಗೆ ಹೇಳಿದ್ದಾರೆ ಎನ್ನುವ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಕ್ಕೆ ಪುತ್ರ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ
ಮೈಸೂರು,(ಸೆಪ್ಟೆಂಬರ್.21): ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿರೋಧ ಮಾಡುತ್ತಿದ್ದಾರೆ ಎಂಬ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಕ್ಕೆ ಪುತ್ರ ಬಿವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಇಂದು(ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ಯಾರೋ ರಾಜಕೀಯ ಕಾರಣಕ್ಕೆ ಸ್ವಾಮೀಜಿಗಳ ಮನಸ್ಸು ಕೆಡಿಸಿದ್ದಾರೆ. ಯಡಿಯೂರಪ್ಪ ಹಾಗೂ ನನ್ನ ಹೆಸರನ್ನು ಈ ವಿಚಾರದಲ್ಲಿ ಪದೇ ಪದೇ ಎಳೆದು ತರುತ್ತಿದ್ದಾರೆ. ಯಡಿಯೂರಪ್ಪನವರು ಮೀಸಲಾತಿಗೆ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು.
undefined
ಸಿಎಂ ಮೇಲೆ ಯಡಿಯೂರಪ್ಪ ಅವರು ಯಾವುದೇ ಒತ್ತಡ ಏರಿಲ್ಲ.ಯಡಿಯೂರಪ್ಪ ಹಾಗೂ ವಿಜಯೇಂದ್ರ ಪಂಚಮಸಾಲಿ ಲಿಂಗಾಯತರ ವಿರೋಧಿ ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪಂಚಮಸಾಲಿ ಮೀಸಲಾತಿ ಹೋರಾಟ: ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ಕೊಟ್ಟ ಸ್ವಾಮೀಜಿ!
ಇನ್ನು ಇದೇ ವೇಳೆ ಮುಂದಿನ ಚುನಾವವಣೆಗೆ ಸ್ಪರ್ಧೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ್ದು, ಚುನಾವಣಾ ತಯಾರಿ ಇನ್ಮುಂದೆ ಶುರು ಮಾಡಬೇಕು. ನಾನು ಚುನಾವಣೆಗೆ ಎಲ್ಲೇ ಸ್ಪರ್ಧಿಸಿದರೂ ಹಳೇ ಮೈಸೂರು ಭಾಗವನ್ನು ನಾನು ಯಾವತ್ತೂ ಮರೆವುದಿಲ್ಲ.ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟಿರುವುದು ಹಳೇ ಮೈಸೂರು ಮತ್ತು ವರುಣ ಕ್ಷೇತ್ರ. ಇಲ್ಲಿ ಪಕ್ಷ ಸಂಘಟನೆ ನಿರಂತರವಾಗಿ ನಡೆಸುತ್ತೇನೆ ಎಂದು ಹೇಳಿದರು.
ಬಿಎಸ್‌ವೈಗೆ ಎಚ್ಚರಿಕೆ ಕೊಟ್ಟ ಸ್ವಾಮೀಜಿ
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡದಂತೆ ಯಡಿಯೂರಪ್ಪ ಸಾಹೇಬ್ರು ಒತ್ತಡ ಹಾಕ್ತಿದ್ದಾರೆ ಅಂತ ಕೆಲವರು ನಮಗೆ ಹೇಳಿದ್ದಾರೆ. ಬೊಮ್ಮಾಯಿ ಮೀಸಲಾತಿ ನೀಡಿದರೆ ಎಲ್ಲಿ ಲಿಂಗಾಯತ ಲೀಡರ್ ಆಗ್ತಾರೋ ಅಂತ ಯಡಿಯೂರಪ್ಪನಿಗೆ ಹೊಟ್ಟೆಕಿಚ್ಚು ಇರಬಹುದು. ಹೋರಾಟಕ್ಕೆ ನೀವೇನಾದರೂ ತೊಂದರೆ ಮಾಡಿದರೆ ನೀವು ಹೋದಲ್ಲೆಲ್ಲಾ ಕಪ್ಪು ಬಾವುಟ ಹಾರಿಸ್ತೀವಿ. ಶಿಕಾರಿಪುರದ ವರೆಗೆ ಪಾದಯಾತ್ರೆ ಮಾಡೋಕೂ ಸಿದ್ದರಿದ್ದೇವೆ ಎಂದು ಯಡಿಯೂರಪ್ಪಗೆ ಎಚ್ಚರಿಕೆ ನೀಡಿದ್ದಾರೆ,
ಯಡಿಯೂರಪ್ಪ ಲಿಂಗಾಯತ ನಾಯಕ ಅಂತ ತಿಳಿದಿದ್ದೆವು. ಅಷ್ಟು ದೊಡ್ಡ ಕಠಿಣ ಪಾದಯಾತ್ರೆ ಮಾಡಿದೆವು. ಯಡಿಯೂರಪ್ಪನವರು ಮೀಸಲಾತಿ ಕೊಡಲೇ ಇಲ್ಲ. 10 ಲಕ್ಷ ಜನ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾದರು. ಸಮಾಜ ಒಗ್ಗಟ್ಟಾಯಿತು. ಆದರೆ ಯಡಿಯೂರಪ್ಪ ಮನಸ್ಸು ಕರಗಲಿಲ್ಲ. ಬೊಮ್ಮಾಯಿ ಮೂಲತಃ ಕಮಡೊಳ್ಳಿಯವರು. ಕೂಡಲ ಸಂಗಮದಿಂದ ಬೆಂಗಳೂರು ವರಗೆ ಪಾದಯಾತ್ರೆ ಮಾಡಿದಾಗ ಬೊಮ್ಮಾಯಿಯವರು ನಮಗೆ z+ ಸೆಕ್ಯೂರಿಟಿ ನೀಡಿದವರು ಎಂದಿದ್ದರು.