ವಿಜಯೇಂದ್ರ-ಜಾರಕಿಹೊಳಿ ಭೇಟಿಯನ್ನು ರಾಜಕೀಯವಾಗಿ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಂಸದ ಸುನಿಲ್ ಬೋಸ್

By Kannadaprabha News  |  First Published Oct 9, 2024, 4:10 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಲೋಕೋಪಯೋಗಿ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿರುವ ವಿಚಾರಕ್ಕೆ ರಾಜಕೀಯವಾಗಿ ಬೇರೆ ಅರ್ಥವನ್ನು ಕಲ್ಪಿಸುವುದು ಬೇಡ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ. 


ಮೂಗೂರು (ಅ.09): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಲೋಕೋಪಯೋಗಿ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿರುವ ವಿಚಾರಕ್ಕೆ ರಾಜಕೀಯವಾಗಿ ಬೇರೆ ಅರ್ಥವನ್ನು ಕಲ್ಪಿಸುವುದು ಬೇಡ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ. ತಾಲೂಕಿನ ಮೂಗೂರು ಗ್ರಾಮದಲ್ಲಿರುವ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ವಿಜಯೇಂದ್ರ ಅವರು ಶಾಸಕರಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಶಿಕಾರಿಪುರ ಟೋಲ್ ವಿಚಾರವಾಗಿ ಭೇಟಿ ಮಾಡಿದ್ದಾರೆ. ಅದಕ್ಕೆ ರಾಜಕೀಯವಾಗಿ ಅಪಾರ್ಥವನ್ನು ಕಲ್ಪಿಸಬಾರದು ಎಂದು ಸ್ಪಷ್ಟಪಡಿಸಿದರು.

ರಾಜಕೀಯವಾಗಿ ಕೈ ಹಿಡಿದಿರುವ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಸಮಗ್ರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ತರುತ್ತೇವೆ. ಪಟ್ಟಣದಲ್ಲಿ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿಯೇ ಅಭಿವೃದ್ಧಿಗೊಂಡಿರುವ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ಅ. 22ರಂದು ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ನೆರವೇರಿಸಲಿದ್ದಾರೆ. ಮುಂದಿನ ಅಭಿವೃದ್ಧಿ ಕಾಮಗಾರಿಗಳಿಗೂ ಅಂದು ಚಾಲನೆ ನೀಡಲಿದ್ದಾರೆ ಎಂದರು.

Tap to resize

Latest Videos

undefined

ಯಾರಿಂದಲೂ ಕಾಂಗ್ರೆಸ್‌ ನಿರ್ನಾಮ ಮಾಡಲು ಸಾಧ್ಯವಿಲ್ಲ: ಸಂಸದ ಸುನಿಲ್ ಬೋಸ್‌

ತಾಪಂ ಮಾಜಿ ಅಧ್ಯಕ್ಷ ಎಚ್.ಎನ್. ಉಮೇಶ್, ಉಪನ್ಯಾಸಕ ಕುಮಾರಸ್ವಾಮಿ, ದೇಗುಲದ ಪಾರುಪತ್ತೇಗಾರ ಎಂ.ಬಿ. ಸಾಗರ್, ದಸಂಸ ಜಿಲ್ಲಾ ಸಂಚಾಲಕ ಶಿವಕುಮಾರ್, ತಾಲೂಕು ಸಂಚಾಲಕ ರಾಜು, ಡೈರಿ ಕಾರ್ಯದರ್ಶಿ ನಾಗೇಂದ್ರ, ಕಾಂಗ್ರೆಸ್ ಯುವ ಮುಖಂಡ ಲಕ್ಷ್ಮಿನಾರಾಯಣ, ತಲಕಾಡು ಸುಂದರ ನಾಯಕ, ಪುರಸಭಾ ಸದಸ್ಯ ಸಿ. ಪ್ರಕಾಶ್, ಮಾಜಿ ಸದಸ್ಯ ರಾಘವೇಂದ್ರ ಇದ್ದರು.

ಪರಿಶಿಷ್ಟರ ಆರ್ಥಿಕ ಬದಲಾವಣೆ ತರುವಲ್ಲಿ ಸಮಾಜ ಕಲ್ಯಾಣ ಇಲಾಖೆ ಸಫಲ: ಪ.ಜಾತಿ ಮತ್ತು ಪ.ಪಂಗಡಗಳ ಜನ ಸಮುದಾಯದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ತರುವಲ್ಲಿ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಗಳು ಸಫಲವಾಗಿವೆ ಎಂದು ಸಂಸದ ಸುನಿಲ್ ಬೋಸ್ ಹೇಳಿದರು. ಪಟ್ಟಣದ ಭೈರಾಪುರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪಿಎಚ್.ಡಿ ಪದವೀಧರ ಸೇವಾ ಟ್ರಸ್ಟ್ ಉದ್ಘಾಟನೆ ಮತ್ತು ಡಾ.ಎಚ್. ಗೋವಿಂದರಾಜು ಅವರ ಎಸ್ಸಿ/ಎಸ್ಟಿ ಅಭಿವೃದ್ಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪಾತ್ರ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೈಎಲೆಕ್ಷನ್‌ನಿಂದ ಡಿಕೆಶಿಗೆ ಚನ್ನಪಟ್ಟಣ ನೆನಪಾಗ್ತಿದೆ: ಎಚ್.ಡಿ.ಕುಮಾರಸ್ವಾಮಿ

ಎರಡೂ ಸಮುದಾಯಗಳು ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಲು ಯೋಜನೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು. ಜನರಿಂದ ಆಯ್ಕೆಯಾಗಿ ಅವರೊಂದಿಗೆ ನಿತ್ಯವೂ ಭೇಟಿಯಾಗುವ ರಾಜಕೀಯವೂ ಕೂಡ ಜನಸೇವೆ ಮಾಡಲು ಉತ್ತಮವಾದ ಕ್ಷೇತ್ರವಾಗಿದೆ. ಹಾಗಾಗಿ ಯುವ ಜನತೆ ರಾಜಕೀಯವನ್ನು ಆಯ್ಕೆ ಮಾಡಿಕೊಳ್ಳಬೇಕು. ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರ ಬೇಡಿಕೆಯನ್ನು ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುತ್ತೇನೆ. ಹೆಚ್ಚಿನ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡಲು ಸಂಸದರ ಅನುದಾನ ನೀಡುತ್ತೇನೆ ಎಂದು ಅವರು ಭರವಸೆ ನೀಡಿದರು.

click me!