8 ತಿಂಗಳಲ್ಲಿ ಕರ್ನಾಟಕದ ಅಭಿವೃದ್ಧಿ 20 ವರ್ಷ ಹಿಂದಕ್ಕೆ: ವಿಜಯೇಂದ್ರ

Published : Feb 15, 2024, 06:19 AM IST
8 ತಿಂಗಳಲ್ಲಿ ಕರ್ನಾಟಕದ ಅಭಿವೃದ್ಧಿ 20 ವರ್ಷ ಹಿಂದಕ್ಕೆ: ವಿಜಯೇಂದ್ರ

ಸಾರಾಂಶ

ಜನರಿಗೆ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಶೂನ್ಯ. ಪ್ರಗತಿಯಲ್ಲಿರುವ ಕಾಮಗಾರಿಗಳಿಗೂ ಹಣ ನೀಡುತ್ತಿಲ್ಲ. ಶಾಸಕರುಗಳಿಗೆ ಕ್ಷೇತ್ರಾಭಿವೃದ್ಧಿ ಅನುದಾನ ಕೊಡಲೂ ಸರ್ಕಾರದಲ್ಲಿ ಹಣವಿಲ್ಲದಷ್ಟು ದಿವಾಳಿಯಾಗಿದೆ: ಬಿಜೆಪಿ ಸದಸ್ಯ ಬಿ.ವೈ. ವಿಜಯೇಂದ್ರ 

ವಿಧಾನಸಭೆ(ಫೆ.15):  ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಗೆ ತನ್ನ ಬೆನ್ನು ತಾನೇ ತಟ್ಟಿಕೊಳ್ಳುತ್ತಿದೆ. ಆದರೆ, ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ಸಾಧನೆ ಶೂನ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಹೋಗಿದೆ ಎಂದು ಬಿಜೆಪಿ ಸದಸ್ಯ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಸದನದಲ್ಲಿ ಬುಧವಾರ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ನನ್ನ ವಿರೋಧವಿಲ್ಲ. ಆದರೆ ಸರ್ಕಾರ ಗ್ಯಾರಂಟಿಗಳ ಜಾರಿಯಿಂದ ವಿಜಯನಗರ ಸಾಮ್ರಾಜ್ಯವೇ ಮರುಸ್ಥಾಪನೆಯಾದಂತೆ ಬಿಂಬಿಸುತ್ತಿದೆ. ವಿದ್ಯುತ್‌ ದರ, ಹಾಲಿನ ದರ ಏರಿಕೆ, ಅಬಕಾರಿ ತೆರಿಗೆ ಹೆಚ್ಚಳ, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳ, ಹೆಂಡತಿಗೆ ಶಕ್ತಿ ಯೋಜನೆ ಇದ್ದರೂ ಸಾರಿಗೆ ಪ್ರಯಾಣ ದರ ಹೆಚ್ಚಳದಿಂದ ಗಂಡನ ಮೇಲೆ ಹೊರೆ ಬೀಳುತ್ತಿದೆ. ಹೀಗೆ ಬೆಲೆ ಏರಿಕೆಯನ್ನು ಒಂದಂಕಿ ಕಾರ್ಯಕ್ರಮವನ್ನಾಗಿಸಿಕೊಂಡಿದೆ.

ರಾಜ್ಯದಲ್ಲಿ 500ಕ್ಕೂ ಹೆಚ್ಚು ರೈತರ ಆತ್ಮಹತ್ಯೆ: ವಿಜಯೇಂದ್ರ

ಜನರಿಗೆ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಶೂನ್ಯ. ಪ್ರಗತಿಯಲ್ಲಿರುವ ಕಾಮಗಾರಿಗಳಿಗೂ ಹಣ ನೀಡುತ್ತಿಲ್ಲ. ಶಾಸಕರುಗಳಿಗೆ ಕ್ಷೇತ್ರಾಭಿವೃದ್ಧಿ ಅನುದಾನ ಕೊಡಲೂ ಸರ್ಕಾರದಲ್ಲಿ ಹಣವಿಲ್ಲದಷ್ಟು ದಿವಾಳಿಯಾಗಿದೆ ಎಂದರು.

ಮತ್ತೊಂದೆಡೆ ಐದು ಗ್ಯಾರಂಟಿ ಬಿಟ್ಟು ಉಳಿದ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ಗೌರವಧನವನ್ನುಕ್ರಮವಾಗಿ 15 ಸಾವಿರ, 10 ಸಾವಿರ ರು.ಗೆ ಹೆಚ್ಚಿಸುವುದು, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ಭರವಸೆ, ರೈತರಿಗೆ ಹಾಲಿನ ಪ್ರೋತ್ಸಾಹಧನ 7 ರು.ಗೆ ಹೆಚ್ಚಿಸುವುದು ಸೇರಿ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬರೀ ಗ್ಯಾರಂಟಿಗಳಿಂದ ಬೆನ್ನು ತಟ್ಟಿಕೊಳ್ಳುತ್ತಿದೆ.

ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಇದ್ದ 25 ಸಾವಿರ ರು.ಗಳನ್ನು ಈಗ ಎರಡೂವರೆಯಿಂದ ಮೂರು ಲಕ್ಷ ರು. ನೀಡಬೇಕಾಗಿದೆ. 800 ರೈತರು ಈ ಸರ್ಕಾರ ಬಂದ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಹೆಚ್ಚು ಆತ್ಮಹತ್ಯೆಗಳಾಗಿವೆ. ಉಪಮುಖ್ಯಮಂತ್ರಿಗಳೂ ಸೇರಿದಂತೆ ಸರ್ಕಾರದ ಕೆಲ ಸಚಿವರುಗಳೇ ರೈತರ ಆತ್ಮಹತ್ಯೆ, ಸಾಲ ಮನ್ನಾ, ಬರ ಪರಿಹಾರಗಳ ವಿಚಾರವಾಗಿ ಅನ್ನದಾತನಿಗೆ ಅಗೌರವವಾಗುವಂತೆ ಮಾನತಾಡಿದ್ದಾರೆ. ಹೀಗಿರುವಾಗ ಹೇಗೆ ರೈತರು, ಬಡವರ ಪರ ಸರ್ಕಾರ ಆಗುತ್ತದೆ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!