ಸರ್ಕಾರದ ಮೇಲಿದ್ದ ನಿರೀಕ್ಷೆಗಳು ಹುಸಿ: ವಿಜಯೇಂದ್ರ

Published : Dec 05, 2023, 10:43 AM ISTUpdated : Dec 05, 2023, 10:45 AM IST
ಸರ್ಕಾರದ ಮೇಲಿದ್ದ ನಿರೀಕ್ಷೆಗಳು ಹುಸಿ: ವಿಜಯೇಂದ್ರ

ಸಾರಾಂಶ

ಉತ್ತರ ಕರ್ನಾಟಕ ಜನತೆ ಈ‌ ಅಧಿವೇಶನದ ಮೇಲೆ ಬಹಳ ನಿರೀಕ್ಷೆಯಿಟ್ಟಿದ್ದಾರೆ‌. ಕಬ್ಬು ಬೆಳೆಗಾರರು ಬಹಳ ನಿರೀಕ್ಷೆಯಲ್ಲಿದ್ದಾರೆ. ಪ್ರತಿಯೊಬ್ಬರು ಪರಿಹಾರದ ನಿರೀಕ್ಷೆಯಲ್ಲಿದ್ದಾರೆ. ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಡಲಿ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ(ಡಿ.05): ಹೊಸ ಸರ್ಕಾರದಿಂದ ಜನರು ಸಾಕಷ್ಟು ನಿರೀಕ್ಷೆಗಳನ್ನು ಮಾಡಿದ್ದರು. ಆದರೆ ದಿನ ಕಳೆದಂತೆ ಎಲ್ಲ ಹುಸಿಯಾಗಿದೆ. ಅಧಿವೇಶನದ ಮುಖಾಂತರವಾದರೂ ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕ ಜನತೆ ಈ‌ ಅಧಿವೇಶನದ ಮೇಲೆ ಬಹಳ ನಿರೀಕ್ಷೆಯಿಟ್ಟಿದ್ದಾರೆ‌. ಕಬ್ಬು ಬೆಳೆಗಾರರು ಬಹಳ ನಿರೀಕ್ಷೆಯಲ್ಲಿದ್ದಾರೆ. ಪ್ರತಿಯೊಬ್ಬರು ಪರಿಹಾರದ ನಿರೀಕ್ಷೆಯಲ್ಲಿದ್ದಾರೆ. ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಡಲಿ ಎಂದರು. ಸದನದ ಒಳಗೆ ಬಿಜೆಪಿ ವಿರೋಧ ಪಕ್ಷವಾಗಿ ಕೆಲಸ ಮಾಡಲಿದೆ. ಸಮರ್ಥವಾಗಿ ಜನತೆ ನಿರೀಕ್ಷೆಯಂತೆ ಸದನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು.

ಯತ್ನಾಳ್‌ಗೆ ರಾಷ್ಟ್ರೀಯ ನಾಯಕರು ಉತ್ತರಿಸ್ತಾರೆ: ವಿಜಯೇಂದ್ರ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಕುರಿತು ಮಾತನಾಡಿದ ಅವರು, ಕಾರ್ಯಕರ್ತರ ಮುಖದಲ್ಲಿನ ಸಂತೋಷ ನೋಡಿದರೆ ಗೊತ್ತಾಗುತ್ತೆ. ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟ ಬಿಜೆಪಿ ವಿರುದ್ಧ ಬಿಂಬಿಸುವ ಪ್ರಯತ್ನ ಮಾಡಿದರು. ಚುನಾವಣೆಯ ಫಲಿತಾಂಶ ದೊಡ್ಡ ಶಕ್ತಿ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಗೊಳ್ಳು ಭರವಸೆಗಳನ್ನು ಜನರು ನಂಬುತ್ತಿಲ್ಲ. ಲೋಕಸಭೆ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡಲಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್