ರಾಮುಲು-ರೆಡ್ಡಿ ಕಿತ್ತಾಟದ ಮಧ್ಯೆಯೇ ವಿಜಯೇಂದ್ರ ದಿಲ್ಲಿಗೆ: ರಾಜಕೀಯ ವಲಯದಲ್ಲಿ ಭಾರೀ ಕುತೂಹಲ!

Published : Jan 25, 2025, 07:58 AM IST
ರಾಮುಲು-ರೆಡ್ಡಿ ಕಿತ್ತಾಟದ ಮಧ್ಯೆಯೇ ವಿಜಯೇಂದ್ರ ದಿಲ್ಲಿಗೆ: ರಾಜಕೀಯ ವಲಯದಲ್ಲಿ ಭಾರೀ ಕುತೂಹಲ!

ಸಾರಾಂಶ

ಶ್ರೀರಾಮಲು ಮತ್ತು ರೆಡ್ಡಿ ನಡುವಿನ ಬಹಿರಂಗ ಸಮರದ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚರ್ಚೆ ನಡೆದಿದ್ದು, ಯಾವುದೇ ಕಾರಣಕ್ಕೂ ಶ್ರೀರಾಮುಲು ಅವರು ಪಕ್ಷ ತೊರೆಯದಂತೆ ಎಚ್ಚರಿಕೆ ವಹಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದರ ಮಧ್ಯೆಯೇ ವಿಜಯೇಂದ್ರ ದೆಹಲಿಗೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಆದರೆ, ವಿಜಯೇಂದ್ರ ಖಾಸಗಿ ಕೆಲಸ ನಿಮಿತ್ತ ದೆಹಲಿಗೆ ತೆರಳಿದ್ದಾರೆ ಹೊರತು ರಾಜಕೀಯ ಉದ್ದೇಶಕ್ಕಾಗಿ ಅಲ್ಲ ಎಂದು ಅವರ ಆಪ್ತರು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು(ಜ.25):  ಮಾಜಿ ಸಚಿವರಾದ ಬಿ.ಶ್ರೀರಾಮುಲು ಮತ್ತು ಜನಾರ್ದನರೆಡ್ಡಿ ನಡುವೆ ವಾಕ್ಸಮರ ತೀವ್ರ ಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶುಕ್ರವಾರ ದೆಹಲಿಗೆ ದಿಢೀರ್ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ. 

ಶ್ರೀರಾಮಲು ಮತ್ತು ರೆಡ್ಡಿ ನಡುವಿನ ಬಹಿರಂಗ ಸಮರದ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚರ್ಚೆ ನಡೆದಿದ್ದು, ಯಾವುದೇ ಕಾರಣಕ್ಕೂ ಶ್ರೀರಾಮುಲು ಅವರು ಪಕ್ಷ ತೊರೆಯದಂತೆ ಎಚ್ಚರಿಕೆ ವಹಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದರ ಮಧ್ಯೆಯೇ ವಿಜಯೇಂದ್ರ ದೆಹಲಿಗೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಆದರೆ, ವಿಜಯೇಂದ್ರ ಖಾಸಗಿ ಕೆಲಸ ನಿಮಿತ್ತ ದೆಹಲಿಗೆ ತೆರಳಿದ್ದಾರೆ ಹೊರತು ರಾಜಕೀಯ ಉದ್ದೇಶಕ್ಕಾಗಿ ಅಲ್ಲ ಎಂದು ಅವರ ಆಪ್ತರು ಸ್ಪಷ್ಟನೆ ನೀಡಿದ್ದಾರೆ.

ಕೆಲಸ ಇಲ್ಲದವರ ಬಗ್ಗೆ ಮಾತಾಡಲ್ಲ, ಯತ್ನಾಳ್‌ ಬಗ್ಗೆ ತಲೆಕೆಡಿಸಿಕೊಳ್ಳಲ್ಲ: ವಿಜಯೇಂದ್ರ

ಬಿಜೆಪಿ ಸಭೇಲಿ 80% ನಾಯಕರ ಬೆಂಬಲ ನನಗೆ ಸಿಕ್ಕಿದೆ: ವಿಜಯೇಂದ್ರ

ಶಿವಮೊಗ್ಗ: ಅಧ್ಯಕ್ಷ ಹುದ್ದೆಯ ಬದಲಾವಣೆ ಕುರಿತು ಭಾರೀ ಗದ್ದಲ ನಡೆದಿರುವ ನಡುವೆಯೇ, ಇತ್ತೀಚೆಗೆ ನಡೆದ ಪಕ್ಷದ ಶಾಸಕರ ಸಭೆಯಲ್ಲಿದ್ದ ಶೇ.80 ರಷ್ಟು ಸದಸ್ಯರು ನನ್ನನ್ನೇ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸುವ ಬಗ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದರು.

ವಿಜಯೇಂದ್ರಗೆ 'ಬಚ್ಚಾ' ಎಂದಿದ್ದು ತಪ್ಪು, ರಮೇಶ್ ಜಾರಕಿಹೊಳಿ ಬಳಸಿದ ಪದ ಒಪ್ಪಲಾಗದು: ಜೋಶಿ

ಬೆಂಗಳೂರಲ್ಲಿ ಇತ್ತೀಚೆಗೆ ಬಿಜೆಪಿ ರಾಜ್ಯ ಉಸ್ತುವಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಶೇ. 80ರಷ್ಟು ನಾಯಕರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನನ್ನೇ ಮುಂದು ವರಿಸಲು ಕೋರಿದ್ದಾರೆ. ಕೇವಲ ಐದಾರು ಜನ ಮಾತ್ರ ನನ್ನ ವಿರುದ್ದ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯಲ್ಲಿನ ಎಲ್ಲಾ ಗೊಂದಲಗಳಿಗೆ ಸದ್ಯದಲ್ಲೇ ಉತ್ತರ ಸಿಗಲಿದೆ' ಎಂದು ಹೇಳಿದ್ದರು.  

ಬೇಸರ ನಿಜ: 

ಬಿಜೆಪಿಯಲ್ಲಿನ ಬಣ ಬೆಳವಣಿಗೆಗಳು ಕಾರ್ಯಕರ್ತರು ಹಾಗೂ ನನಗೂ ಬೇಸರ ತರಿಸಿವೆ. ಆದರೆ ನನ್ನ ಅಧ್ಯಕ್ಷಗಿರಿಯ ಬಗ್ಗೆ ಕಾರ್ಯ ಕರ್ತರಿಗೆ ಸಮಾಧಾನ ಇದೆ. ಯಡಿಯೂರಪ್ಪ ನವರ ಬಗ್ಗೆ ಅಪಮಾನ ಆಗುವ ರೀತಿಯಲ್ಲಿ ಕೆಲವರು ಮಾತ ನಾಡುತ್ತಿದ್ದಾರೆ. ಕಾರ್ಯಕರ್ತರು ನೊಂದಿದ್ದಾರೆ. ಈ ವಿಚಾರವಾಗಿ ಹೈಕಮಾಂಡ್ ಜೊತೆ ಮಾತಾಡಿದ್ದೇನೆ. ಶ್ರೀರಾಮಲು ವಿಚಾರ ಕೋರ್‌ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ. ರಾಮಲು ಬಗ್ಗೆ ಗೌರವ ಇದೆ. ಎಲ್ಲಾ ಅಂಶಗ ಳನ್ನು ಹೊರ ಗಡೆ ಹೇಳಲು ಸಾಧ್ಯವಿಲ್ಲ. ಶ್ರೀರಾಮುಲು ಅಪಾರ್ಥಕ್ಕೆ ಅವಕಾಶ ಮಾಡಿಕೊಡ ಬಾರದು. ಎಲ್ಲರೂ ಒಗ್ಗಟ್ಟಾಗಬೇಕು ಅಂತಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ತಿಳಿಸಿದ್ದಾರೆ. ಎಲ್ಲರೂ ಒಟ್ಟಾಗಿ ಹೋಗಬೇಕಿದೆ ಎಂದು ತಿಳಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು: ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ
1983ರಿಂದಲೂ ಬಸವರಾಜ ಹೊರಟ್ಟಿ, ನಾನು ದೋಸ್ತ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?