'ಕಾಂಗ್ರೆಸ್‌ ಮುಖಂಡರು ಪಾಕಿಸ್ತಾನಕ್ಕೆ ಹೋಗಿ ಗೆಲ್ಲಲಿ'

Kannadaprabha News   | Asianet News
Published : Oct 21, 2020, 02:58 PM IST
'ಕಾಂಗ್ರೆಸ್‌ ಮುಖಂಡರು ಪಾಕಿಸ್ತಾನಕ್ಕೆ ಹೋಗಿ ಗೆಲ್ಲಲಿ'

ಸಾರಾಂಶ

ಸಮಾಜ ಒಡೆಯಲು ಮಾತ್ರ ಕಾಂಗ್ರೆಸ್‌ಗೆ ಮತ ಹಾಕಬೇಕಷ್ಟೇ| ಬೆಂಗಳೂರಿನಲ್ಲಿ ತಮ್ಮ ಪಕ್ಷದ ಶಾಸಕರನ್ನು ಗೆಲ್ಲಿಸಲು ಜಮೀರ್‌ ಅಹ್ಮದ್‌ಗೆ ಆಗಿಲ್ಲ. ಮೈಸೂರು ಹಾಗೂ ಬಾಗಲಕೋಟೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಸಿದ್ದರಾಮಯ್ಯ ವಿಫಲ| ಮುಖ್ಯಮಂತ್ರಿ ಆಗುವ ಸಿದ್ದರಾಮಯ್ಯ ಕಾಲ ಮುಗಿದಿದೆ. ಮುಂದೆ ಏನಿದ್ದರೂ ಬಿಜೆಪಿಯದ್ದೇ ಕಾಲ: ಸಿ.ಟಿ. ರವಿ| 

ಧಾರವಾಡ(ಅ.21):  ಉಪ ಚುನಾವಣೆಯಲ್ಲಿ ಗೆಲ್ಲುವ ಕನಸು ಕಾಣುತ್ತಿರುವ ಕಾಂಗ್ರೆಸ್‌ ಮುಖಂಡರು ಪಾಕಿಸ್ತಾನಕ್ಕೆ ಹೋಗಿ ಗೆಲ್ಲಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಚಿವ ಸಿ.ಟಿ. ರವಿ ಹೇಳಿದ್ದಾರೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಒಡೆಯಲು ಮಾತ್ರ ಕಾಂಗ್ರೆಸ್‌ಗೆ ಮತ ಹಾಕಬೇಕಷ್ಟೇ. ಬೆಂಗಳೂರಿನಲ್ಲಿ ತಮ್ಮ ಪಕ್ಷದ ಶಾಸಕರನ್ನು ಗೆಲ್ಲಿಸಲು ಜಮೀರ್‌ ಅಹ್ಮದ್‌ಗೆ ಆಗಿಲ್ಲ. ಮೈಸೂರು ಹಾಗೂ ಬಾಗಲಕೋಟೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಆಗುವ ಸಿದ್ದರಾಮಯ್ಯ ಅವರ ಕಾಲ ಮುಗಿದಿದೆ. ಮುಂದೆ ಏನಿದ್ದರೂ ಬಿಜೆಪಿಯದ್ದೇ ಕಾಲ ಎಂದರು.

ಸಿಎಂ ವೈಮಾನಿಕ ಸಮೀಕ್ಷೆಗೆ ಸಿದ್ದು ಕಿಡಿ: 'ನಾನು ಕಾರ್‌ನಲ್ಲೇ ಪ್ರವಾಸ ಮಾಡಿ ನೊಂದವರ ಅಳಲು ಕೇಳ್ತೇನೆ'

ತಮ್ಮ ಪಕ್ಷದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಬೆಂಕಿ ಹಾಕಿದವರು ಅಮಾಯಕರು ಎಂದು ಹೇಳುವ ಮೂಲಕ ಅವರ ಬೆನ್ನಿಗೆ ನಿಲ್ಲದವರು ಕಾಂಗ್ರೆಸಿಗರು. ಇವರ ನೀತಿಯಿಂದಾಗಿಯೇ ಅವರು ಇನ್ನಷ್ಟುಕುಸಿಯಲಿದ್ದಾರೆ. ಮುಂದಿನ ಎರಡೂವರೆ ವರ್ಷಗಳ ಕಾಲ ಬಿಜೆಪಿ ಇನ್ನಷ್ಟು ಶಕ್ತಿಶಾಲಿಯಾಗಿ ಬೆಳೆಯಲಿದೆ. ಮುಂದೆಯೂ ನಮ್ಮದೇ ಸರ್ಕಾರ ರಚನೆಯಾಗಲಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌